ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹೊರವಲಯ ಗೋಂಧಿಚಟ್ನಳ್ಳಿ ಗ್ರಾಮದ ರಾಜ್ಯ ಹೆದ್ಧಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿರುವ ಘಟನೆ ನಡೆದಿದೆ.
ಶಿವಮೊಗ್ಗದಿಂದ ಹೊನ್ನಾಳ್ಳಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರಿನಲ್ಲಿದ್ದ ತಂದೆ ಮಗನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post