ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾರು ಗದ್ದೆಗೆ ಪಲ್ಟಿಯಾದ ಪರಿಣಾಮ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐ20 ಕಾರೊಂದು ಪಲ್ಟಿ ಹೊಡೆದಿದೆ. ಪರಿಣಾಮ ಕಾರಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿರ್ಲಕ್ಷತನದಿಂದ ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











Discussion about this post