ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಗೆದುಕೊಂಡ ತೀರ್ಮಾನದಂತೆ ಈಗಾಗಲೇ ಎಡ ಮತ್ತು ಬಲ ನಾಲೆಗಳಿಗೆ ಹರಿಸುತ್ತಿದ್ದು, ಒಂದು ವಾರ ಕಳೆದರು ಕೆಲವು ಭಾಗಗಳಿಗೆ ನೀರು ತಲುಪಿಲ್ಲ ಎಂದು ಅಚ್ಚುಕಟ್ಟು ವ್ಯಾಪ್ತಿಯ ರೈತರು ನೀಡಿದ ದೂರಿನ ಹಿನ್ನಲೆಯಲ್ಲಿ ಜಲಾಶಯಕ್ಕೆ ಭೇಟಿ ನೀಡಿ ಪ್ರಸ್ತುತ ಹರಿಯುತ್ತಿರುವ ನೀರಿನ ಗೇಜ್ ಪರಿಶೀಲನೆ ನಡೆಸಿ, ಯಾವುದೇ ಕಾರಣಕ್ಕೂ ಗೇಜ್ ಮಾಪನದಲ್ಲಿ ವ್ಯತ್ಯಾಸವಾಗದಂತೆ ಎಚ್ಚರಿಕೆ ವಹಿಸುವಂತೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಸೂಚನೆ ನೀಡಿದರು.
ಈ ಸಮಯದಲ್ಲಿ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರರಾದ ಸತೀಶ್ ಅವರು, ಗೇಟ್ ಆಪರೇಟರ್ ರಮೇಶ್, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುನಾಥ್ ಹಾಗೂ ಗಿರೀಶ್, ಪ್ರಮುಖರಾದ ಡಾ.ನವೀನ್ ಅವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post