ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಕಾರ್ಗೊ ವಿಮಾನಗಳ ಹಾರಾಟಕ್ಕೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಲಾಗಿದ್ದು, 50 ಕೋಟಿ ರೂ. ವೆಚ್ಚದಲ್ಲಿ ಕಾರ್ಗೋ ವಿಮಾನಗಳು #Cargo Flight ಶಿವಮೊಗ್ಗಕ್ಕೆ ಬಂದಿಳಿಯಲಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ತಿಳಿಸಿದರು.
ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಎರಡು ಮೂರು ತಿಂಗಳಲ್ಲಿ ನೈಟ್ ಲ್ಯಾಂಡಿಂಗ್ #Night Landing ಸೌಲಭ್ಯ ಲಭ್ಯವಾಗಲಿದೆ. ವಿಸಿಬಲಿಟಿ ಸಮಸ್ಯೆ ಈಗ ಪರಿಹಾರವಾಗಿದೆ. ಅದರ ಬೆನ್ನಿಗೆ ಕಾರ್ಗೊ ವಿಮಾನಗಳ ಹಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ರೈತರು ಬೆಳೆದ ಬೆಳೆ ಮತ್ತು ಇತರೆ ವಸ್ತುಗಳ ರಫ್ತು ಮಾಡಲು ಅನುಕೂಲ ಆಗಲಿದೆ ಎಂದರು.
Also read: ಕಜಕಿಸ್ತಾನ | 70ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಪತನ | 30 ಮಂದಿ ಸಾವು
2024ರಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ 8.5 ಸಾವಿರ ಜನ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಮೈಸೂರು ನಿಲ್ದಾಣದಿಂದ 7.5 ಸಾವಿರ ಜನ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಶಿವಮೊಗ್ಗದಿಂದಲೇ ಹೆಚ್ಚು ಜನ ಪ್ರಯಾಣಿಸಿದ್ದಾರೆ. ನೈಟ್ ಲ್ಯಾಂಡಿಂಗ್ ನಂತರ ಶಿವಮೊಗ್ಗದಿಂದ ದೆಹಲಿ, ಅಹಮದಾಬಾದ್ ಮತ್ತು ಪೂನಾ ಕಡೆಗೆ ಹೊಸ ವಿಮಾನ ಹಾರಾಟಕ್ಕೆ ಇಂಡಿಗೋ #Indigo ಸಂಸ್ಥೆಗೆ ಅರ್ಜಿ ಸಲ್ಲಿಸಲಾಗಿದೆ. ಕೇಂದ್ರ ಸಚಿವರಿಗೂ ಈ ಬಗ್ಗೆ ಮನವಿ ಮಾಡಲಾಗಿದ್ದು, ಸಕಾರಾತ್ಮಕ ಫಲಿತಾಂಶ ದೊರೆಯುವ ನಿರೀಕ್ಷೆ ಇದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post