ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಬಾಲಕರ ಬಾಲ ಮಂದಿರದಲ್ಲಿ ಡಿ.5 ರಂದು 2022-23 ನೇ ಸಾಲಿನ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಪ್ರಶಸ್ತಿ ಪತ್ರ ಮತ್ತು ತಲಾ ರೂ.10,000 ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ. ಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಜಿ.ಜಿ.ಸುರೇಶ್ ಅಧ್ಯಕ್ಷತೆ ವಹಿಸಿದ್ದರು.
ಕಲೆ, ಸಾಂಸ್ಕøತಿಕ, ಸಂಗೀತ ಕ್ಷೇತ್ರದಲ್ಲಿ ಪೃಥ್ವಿನಾಯಕ್ .ಬಿ.ಕೆ ಹಾಗೂ ನೇಹಾ, ತಾರ್ಕಿಕ ಕ್ಷೇತ್ರದಲ್ಲಿ ಸಫಿಯಾ ಅಫ್ರಾ ಹಾಗೂ ಶಮಂತ್ ಎಸ್.ಟಿ, ಕ್ರೀಡಾ ಕ್ಷೇತ್ರದಲ್ಲಿ ದೃತಿ ಬಿ.ಎಸ್ ಹಾಘೂ ಗೌತಮಿ ಗೌಡ ಪ್ರಶಸ್ತಿ ಮತ್ತು ಬಹುಮಾನ ಪಡೆದುಕೊಂಡರು.
Also read: ಶಿವಮೊಗ್ಗ ಬೈಪಾಸ್’ನಲ್ಲಿ ಟೈರ್ ಬ್ಲಾಸ್ಟ್ ಆಗಿ ಲಾರಿ ಪಲ್ಟಿ: ತಪ್ಪಿದ ಭಾರೀ ಅನಾಹುತ
ಸರ್ಕಾರಿ ಬಾಲಕ ಬಾಲ ಮಂದಿರದ ಅಧೀಕ್ಷಕ ಗಣೇಶ್ ಆರ್ ಲಿಂಗನಗೌಡ್ರು ಸ್ವಾಗತಿಸಿದರು. ಯುವಜನ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ಸಹ್ಯಾದ್ರಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಚಂದ್ರಶೇಖರ್, ವಿವಿಧ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ/ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post