ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಿಬಿಎಸ್’ಸಿ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಕೆ.ಎನ್. ವಿನೀತ್ ರಾವ್ ಜಿಲ್ಲೆಗೇ ಪ್ರಥಮ ಸ್ಥಾನ ಗಳಿಸುವ ಮೂಲಕ ಕೀರ್ತಿ ತಂದಿದ್ದಾರೆ.
ಶೇ.98.6ರಷ್ಟು ಫಲಿತಾಂಶ ಗಳಿಸುವ ಮೂಲಕ ಜೈನ್ ಪಬ್ಲಿಕ್ ಶಾಲೆಗೆ ಮಾತ್ರವಲ್ಲ, ಪೋಷಕರಿಗೆ ಹಾಗೂ ಜಿಲ್ಲೆಗೂ ಕೀರ್ತಿ ತಂದಿದ್ದಾನೆ.
ಶಿವಮೊಗ್ಗ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಜೈನ್ ಪಬ್ಲಿಕ್ ಶಾಲೆ ಸತತ 5 ವರ್ಷಗಳಿಂದ ಸಿಬಿಎಸ್’ಸಿ ಪರೀಕ್ಷೆಯಲ್ಲಿ ಶೇ.100ಕ್ಕೆ 100 ಫಲಿತಾಂಶವನ್ನು ನೀಡುತ್ತಾ ಬಂದಿದೆ.
Also read: ಮೂವರು ಗಣ್ಯರಿಗೆ ಭಂಡಾರಕೇರಿ ಮಠದ ಪ್ರಶಸ್ತಿ | ಬೆಂಗಳೂರಿನಲ್ಲಿ 20 ರಂದು ಪ್ರದಾನ
ಪ್ರತಿ ವರ್ಷದಂತೆ 2023-24 ನೇ ಸಾಲಿನಲ್ಲೂ ನೂರರಷ್ಟು ಫಲಿತಾಂಶವನ್ನು ತಂದುಕೊಟ್ಟಿದೆ. ಹಾಗೆ ಇಡೀ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ಕೆ.ಎನ್. ವಿನೀತ್ ರಾವ್ ಕನ್ನಡದಲ್ಲಿ ನೂರಕ್ಕೆ ನೂರು ಅಂಕ ಗಳಿಸಿ ಜಿಲ್ಲೆಗೆ, ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತಂದು ಕೊಟ್ಟಿದ್ದಾನೆ.
ಜಿಲ್ಲೆಗೆ ಕೀರ್ತಿ ತಂದಿರುವ ಜೈನ್ ಪಬ್ಲಿಕ್ ಶಾಲೆಯ ಮಕ್ಕಳ ಭವಿಷ್ಯ ಉಜ್ವಲವಾಗಿರಲಿ ಎಂದು ಪ್ರಾಂಶುಪಾಲರಾದ ಎನ್. ಪ್ರಿಯದರ್ಶಿನಿ, ಸಿಒಒ ಆರ್. ಸುಮಂತ್, ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.
ಈ ಪ್ರತಿಭಾನ್ವಿತ ವಿದ್ಯಾರ್ಥಿಯನ್ನು ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
























