ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ರಾಯಚೂರಿನ (Raichur) ಫೆಡರಲ್ ಪಬ್ಲಿಕ್ ಶಾಲೆಯಲ್ಲಿ ಆಗಸ್ಟ್ 27ರಿಂದ 30ರವರೆಗೆ ನಡೆದ CBSE ಕ್ಲಸ್ಟರ್ VIII ಅಥ್ಲೆಟಿಕ್ಸ್ (CBSE Cluster Athletics) ಚಾಂಪಿಯನ್‌ಶಿಪ್ 2026-27ರಲ್ಲಿ (Shikaripura) ಶಿಕಾರಿಪುರದ ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಸ್ಕೂಲ್ (KRCS) ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಚಾಂಪಿಯನ್‌ಶಿಪ್‌ನಲ್ಲಿ KRCSನ ವಿದ್ಯಾರ್ಥಿನಿ ಕುಮಾರಿ ಪ್ರಣವಿ ಎಸ್. ಹೆರಳಗಿ ಅವರು ಶಾಟ್‌ಪುಟ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ, ಡಿಸ್ಕಸ್ ಥ್ರೋ ವಿಭಾಗದಲ್ಲಿಯೂ ಪ್ರಣವಿ ಬೆಳ್ಳಿ ಪದಕ ಗೆದ್ದು ದ್ವಿಸಾಧನೆ ಮಾಡಿದ್ದಾರೆ. ಈ ಅದ್ಭುತ ಪ್ರದರ್ಶನದ ಫಲವಾಗಿ ಅವರು CBSE ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
Shikaripura : ಪ್ರಣವಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಪ್ರಣವಿ ಅವರ ಈ ಸಾಧನೆಯು ಶಾಲೆಯ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ಶಿಕಾರಿಪುರಕ್ಕೆ ಕೀರ್ತಿ ತರಲಿ ಎಂಬ ಆಶಯ ವ್ಯಕ್ತವಾಗಿದೆ.
Also read>> ಬೆಂಗಳೂರು | ಇಂದಿನಿಂದ ಕೋರಮಂಗಲ ರೈಲ್ವೆ ಟಿಕೆಟ್ ಕಾಯ್ದಿರಿಸುವ ಕೇಂದ್ರ ಬಂದ್
ಇದೇ ಚಾಂಪಿಯನ್‌ಶಿಪ್‌ನಲ್ಲಿ KRCSನ ವಿದ್ಯಾರ್ಥಿ ಕುಮಾರ ಸಾಯಿನಾಥ್ ಆರ್.ಡಿ. ಅವರು ಡಿಸ್ಕಸ್ ಥ್ರೋ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಶಾಲೆಗೆ ಮತ್ತೊಂದು ಗೌರವ ತಂದುಕೊಟ್ಟಿದ್ದಾರೆ. ಇಬ್ಬರು ವಿದ್ಯಾರ್ಥಿಗಳ ಸಾಧನೆಯು ಶಾಲೆಯ ಕ್ರೀಡಾ ಪ್ರತಿಭೆ ಹಾಗೂ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಕ್ರೀಡಾ ಪ್ರೋತ್ಸಾಹಕ್ಕೆ ಸಾಕ್ಷಿಯಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ KRCS ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ಕಠಿಣ ಪರಿಶ್ರಮ, ನಿರಂತರ ಅಭ್ಯಾಸ ಹಾಗೂ ಕ್ರೀಡಾ ಮನೋಭಾವದ ಮೂಲಕ ಉತ್ತಮ ಸಾಧನೆ ಮಾಡಿರುವ ಪ್ರಣವಿ ಮತ್ತು ಸಾಯಿನಾಥ್ ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದ್ದಾರೆ.
ವಿಶೇಷವಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಪ್ರಣವಿ ಅವರು ಮುಂಬರುವ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟದಲ್ಲಿಯೂ ಪದಕ ಗೆದ್ದು ಶಾಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂದು ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









