ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
2023-24 ನೇ ಸಾಲಿನ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಹತ್ತನೇ ತರಗತಿಗಳ ಫಲಿತಾಂಶ ಪ್ರಕಟವಾಗಿದ್ದು, ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ನ್ಯಾಷನಲ್ ಪಬ್ಲಿಕ್ ಶಾಲೆಗೆ ಶೇ.99.34% ಫಲಿತಾಂಶ ಪಡೆದಿದೆ.
ಪರೀಕ್ಷೆ ಬರೆದ 150 ವಿದ್ಯಾರ್ಥಿಗಳಲ್ಲಿ 149 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವಿದ್ಯಾರ್ಥಿನಿಯರಾದ ಅನ್ವೇಷ.ಡಿ.ಆರ್. (ಶೇ.97.60), ಸೃಷ್ಟಿ. ಎಸ್.(ಶೇ.96.20), ಮೌಲ್ಯ.ಎಚ್ (ಶೇ.95.80), ತೇಜಲ್ ಸ್ವಾಮಿ (ಶೇ.95.80), ಅನಮ್ ತಾಜ್ (ಶೇ.95.20) ಅಂಕಗಳೊಂದಿಗೆ ಅಮೋಘ ಸಾಧನೆ ತೋರಿದ್ದಾರೆ.
Also read: ವಾರಣಾಸಿ | ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ | ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಪ್ರಧಾನಿ
ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

























