ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಗಸ್ಟ್ 27ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್ ಅಚರಿಸಲಿರುವ ಈದ್‌ಮಿಲಾದ್ ಹಬ್ಬಗಳನ್ನು ಸರ್ವ ಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸಲು ಅಗತ್ಯವಿರುವ ಸಿದ್ಧತೆಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತದ ವತಿಯಿಂದ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.
ಅವರು ಇಂದು ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಎಲ್ಲಾ ಧರ್ಮ ಬಂಧುಗಳ ಮೆರವಣಿಗೆಗಳು ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಆಯ್ದ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಲಾಗಿದೆ. ನಗರದೆಲ್ಲೆಡೆ ಸ್ವಚ್ಚತೆ, ವಿದ್ಯುತ್‌ದೀಪ ನಿರಂತರವಾಗಿರುವಂತೆ ಕ್ರಮ ವಹಿಸಲಾಗಿದೆ ಎಂದವರು ನುಡಿದರು.

ಎಲ್ಲೆಂದರಲ್ಲಿ ಬ್ಯಾನರ್‌ಗಳನ್ನು ಅಳವಡಿಸಿ,ನಗರದ ಸೌಂದರ್ಯ ಹಾಳು ಮಾಡದಂತೆ ಹಾಗೂ ಪಾಲಿಕೆಯ ಅನುಮತಿ ಪಡೆದೇ ಬ್ಯಾನರ್‌ಗಳನ್ನು ಅಳವಡಿಸಬೇಕು ಎಂದ ಅವರು, ಮೆರವಣಿಗೆಯಲ್ಲಿ ಬೈಕ್‌ರ್ಯಾಲಿ ನಡೆಸದಂತೆ, ಡಿ.ಜೆ.ಧ್ವನಿವರ್ಧಕಗಳನ್ನು ಬಳಸಿ ಮೆರವಣಿಗೆ ಮಾಡದಂತೆ, ಹಸಿರು ಪಟಾಕಿಗಳನ್ನೇ ಬಳಸುವಂತೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಗಣಪತಿ ವಿಸರ್ಜನೆಗೆ ನೀರಿಗಿಳಿಯುವವರು ಈಜು ಬಲ್ಲವರಾಗಿದ್ದು, ಮೂರ್ನಾಲ್ಕು ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನ ನೀರಿಗೆ ಇಳಿಯಬಾರದು. ಅಲ್ಲದೇ ಲೈವ್‌ಜಾಕೇಟ್‌ಗಳನ್ನು ಕಡ್ಡಾಯವಾಗಿ ಧರಿಸಿರಬೇಕು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಜಿ.ಕೆ.ಮಿಥುನಕುಮಾರ್‌ಅವರು ಮಾತನಾಡಿ, ಮೆರವಣಿಗೆ ಮತ್ತಿತರ ಸಂದರ್ಭದಲ್ಲಿ ಅಸಹ್ಯಕರವಾಗಿ ವರ್ತಿಸುವವರ ವಿರುದ್ಧ ಮೊಕದ್ದಮೆ ದಾಖಲಿಸಲಾಗುವುದಲ್ಲದೇ ಕಾನೂನು ಕ್ರಮ ಜರುಗಿಸಲಾಗುವುದು. ನೆರೆಯ ಜಿಲ್ಲೆಗಳಿಂದ ಆಗಮಿಸುವವರ ಮೇಲೆ ವಿಶೇಷ ಗಮನಹರಿಸಲಾಗುವುದು. ಅದಕ್ಕಾಗಿ ನಗರದ ಹೊರವಲಯದಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ ಎಂದರು.

ಗಣಪತಿ ವಿಸರ್ಜನೆಗೆ ಈಗಾಗಲೇ 25ಸ್ಥಳಗಳನ್ನು ಗುರುತಿಸಲಾಗಿದೆ ಅಲ್ಲದೆ ಇನ್ನಷ್ಟು ಸ್ಥಳಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಅಗತ್ಯಗಳಿಗೆ ಕ್ರೈನ್‌ಗಳನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ನಗರದೆಲ್ಲೆಡೆ 20ಕಿ.ಮೀ. ವ್ಯಾಪ್ತಿಯಲ್ಲಿ ಬ್ಯಾರಿಕೇಡ್‌ಗಳ ನಿರ್ಮಾಣ, 600 ಸಿಸಿ ಕ್ಯಾಮರಾ ಕಣ್ಗಾವಲು ಇಡಲಾಗಿದೆ ಅಲ್ಲದೇ ಡ್ರೋಣ್‌ಕ್ಯಾಮರಾಗಳನ್ನು ಬಳಸಿಕೊಳ್ಳಲಾಗುತ್ತಿದೆ. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಮುಳುಗು ತಜ್ಞರ ಸಹಕಾರ ಪಡೆಯಲಾಗಿದೆ. ಗಣಪತಿ ವಿಸರ್ಜನೆ ಸ್ಥಳಗಳಲ್ಲಿ ವಿದ್ಯುತ್‌ದೀಪ, ತೆಪ್ಪದ ವ್ಯವಸ್ಥೆ ಮಾಡಲು ಉದ್ದೇಶಿಸಲಾಗಿದೆ. ನಗರದೆಲ್ಲೆಡೆ ಮೂಲಭೂತ ಸೌಕರ್ಯ ಒದಗಿಸಲು ವಿಶೇಷ ಗಮನಹರಿಸಲಾಗಿದೆ. ಹಬ್ಬ ನಡೆಯುವ ಮೂರು ದಿನಗಳ ಕಾಲ ನಿರಂತರ ನೀರು ಒದಗಿಸಲು ಹಾಗೂ ಅಗತ್ಯವಿರುವಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ವಾರ್ಡ್‌ವಾರು ಸಂಪರ್ಕಿಸಬೇಕಾದ ವ್ಯಕ್ತಿಗಳ ಮೊಬೈಲ್‌ಸಂಪರ್ಕ ಸಂಖ್ಯೆಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಚುರಪಡಿಸಲಾಗುವುದು. ಹಬ್ಬಗಳ ಸಂದರ್ಭದಲ್ಲಿ ವಿದ್ಯುತ್‌ವ್ಯತ್ಯಯವಾಗದಂತೆ ಕ್ರಮವಹಿಸಲಾಗಿದೆ. ಸಾಂಪ್ರದಾಯಿಕವಾಗಿ ಗಣಪತಿ ವಿಸರ್ಜನೆಗೆ ಮೊಬೈಲ್‌ವಾಹನಗಳನ್ನು ಸಿದ್ಧಗೊಳಿಸಲಾಗಿದೆ. ಹಬ್ಬದ ಅನುಮತಿಗಾಗಿ ಸಂಘಟಕರಿಗೆ ಅನುಕೂಲವಾಗುವಂತೆ ಏಕಗವಾಕ್ಷಿ ವ್ಯವಸ್ಥೆಯಡಿ ವಿನೋಬನಗರ, ಡಿ.ವೈ.ಎಸ್ಪಿ ಕಚೇರಿ ಮತ್ತು ಮಹಾನಗರಪಾಲಿಕೆಗಳಲ್ಲಿ ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಅನುಮತಿ ನೀಡಲಾಗುತ್ತಿದೆ. ಅದಕ್ಕಾಗಿ ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ. –
ಮಾಯಣ್ಣಗೌಡ, ಆಯುಕ್ತರು, ಮಹಾನಗರಪಾಲಿಕೆ, ಶಿವಮೊಗ್ಗ.
ಗಣಪತಿ ಅಥವಾ ಈದ್‌ಮಿಲಾದ್‌ಹಬ್ಬದ ಸಂಭ್ರಮದ ಮೆರವಣಿಗೆಗಳು ಅತ್ಯಂತ ಶಾಂತಿಯುತವಾಗಿದ್ದು, ಮತ್ತೊಂದು ಸಮುದಾಯ, ಧರ್ಮ, ಜನಾಂಗಕ್ಕೆ ಅಥವಾ ಅವರ ಭಾವನೆಗಳಿಗೆ ಧಕ್ಕೆ ಉಂಟಾಗದಂತಿರಲಿ.
ರಮೇಶ್‌ಬಾಬು, ವಿ.ಹೆಚ್.ಪಿ.ಮುಖಂಡರು.
ಹಬ್ಬದ ಸಂಭ್ರಮ ಕಳೆಕಟ್ಟುವಂತಾಗಲು, ಮೆರವಣಿಗೆ ಸಾಗುವಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಅಧಿಕಾರಿಗಳು ವಿಶೇಷ ಗಮನಹರಿಸಬೇಕು.
ಪಾಷಾ, ಮೆಸ್ಕಾಂ ಸದಸ್ಯರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಕಾರಿಯಪ್ಪ, ರಮೇಶ್‌ಕುಮಾರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸುಜಾತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಸರ್ವಧರ್ಮಗಳ ಮುಖಂಡರುಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post