No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಡಗರ-ಸಂಭ್ರಮದಿಂದ ಸೌಹಾರ್ಧಯುತವಾಗಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ ಕರೆ 

kalpa News by kalpa News
August 22, 2025
in ಶಿವಮೊಗ್ಗ
0
ಸಡಗರ-ಸಂಭ್ರಮದಿಂದ ಸೌಹಾರ್ಧಯುತವಾಗಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ ಕರೆ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಆಗಸ್ಟ್‌ 27ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್‌ ಅಚರಿಸಲಿರುವ ಈದ್‌ಮಿಲಾದ್‌ ಹಬ್ಬಗಳನ್ನು ಸರ್ವ ಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸಲು ಅಗತ್ಯವಿರುವ ಸಿದ್ಧತೆಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತದ ವತಿಯಿಂದ ಮಾಡಿಕೊಳ್ಳಲಾಗಿದೆ ಎಂದು  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.

ಅವರು ಇಂದು ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಎಲ್ಲಾ ಧರ್ಮ ಬಂಧುಗಳ ಮೆರವಣಿಗೆಗಳು ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಆಯ್ದ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಲಾಗಿದೆ. ನಗರದೆಲ್ಲೆಡೆ ಸ್ವಚ್ಚತೆ, ವಿದ್ಯುತ್‌ದೀಪ ನಿರಂತರವಾಗಿರುವಂತೆ ಕ್ರಮ ವಹಿಸಲಾಗಿದೆ  ಎಂದವರು ನುಡಿದರು.
ಈ ಎಲ್ಲಾ ಸಿದ್ಧತೆಗಳಿಗಾಗಿ ಮಹಾನಗರಪಾಲಿಕೆ, ಕಂದಾಯ ಇಲಾಖೆ, ಪೊಲೀಸ್‌ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳ ಸಹಕಾರ ಪಡೆದುಕೊಳ್ಳಲಾಗಿದೆ. ಹಬ್ಬದ ಎಲ್ಲಾ ಸಂದರ್ಭಗಳಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಸಂಘಟನೆಗಳ ಮುಖಂಡರು ವಿಶೇಷ ಗಮನಹರಿಸಬೇಕು ಅಲ್ಲದೇ ಸರ್ಕಾರದ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದವರು ನುಡಿದರು.

ಎಲ್ಲೆಂದರಲ್ಲಿ ಬ್ಯಾನರ್‌ಗಳನ್ನು ಅಳವಡಿಸಿ,ನಗರದ ಸೌಂದರ್ಯ ಹಾಳು ಮಾಡದಂತೆ ಹಾಗೂ ಪಾಲಿಕೆಯ ಅನುಮತಿ ಪಡೆದೇ ಬ್ಯಾನರ್‌ಗಳನ್ನು ಅಳವಡಿಸಬೇಕು ಎಂದ ಅವರು, ಮೆರವಣಿಗೆಯಲ್ಲಿ ಬೈಕ್‌ರ್ಯಾಲಿ ನಡೆಸದಂತೆ, ಡಿ.ಜೆ.ಧ್ವನಿವರ್ಧಕಗಳನ್ನು ಬಳಸಿ ಮೆರವಣಿಗೆ ಮಾಡದಂತೆ, ಹಸಿರು ಪಟಾಕಿಗಳನ್ನೇ ಬಳಸುವಂತೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಗಣಪತಿ ವಿಸರ್ಜನೆಗೆ ನೀರಿಗಿಳಿಯುವವರು ಈಜು ಬಲ್ಲವರಾಗಿದ್ದು, ಮೂರ್ನಾಲ್ಕು ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನ ನೀರಿಗೆ ಇಳಿಯಬಾರದು. ಅಲ್ಲದೇ ಲೈವ್‌ಜಾಕೇಟ್‌ಗಳನ್ನು ಕಡ್ಡಾಯವಾಗಿ ಧರಿಸಿರಬೇಕು ಎಂದರು.
ಜಲಮೂಲಗಳು ಮತ್ತು ಪರಿಸರ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಥರ್ಮೋಕೋಲ್,  ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಲ್ಪಟ್ಟ ಗಣೇಶನ ವಿಗ್ರಹಗಳನ್ನು ಪೂಜೆಗೆ ಬಳಸದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವದಂತಿಗಳಿಗೆ ಕಿವಿಗೊಡದಂತೆ ಹಾಗೂ ಶಾಂತಿ ಸಂಯಮದಿಂದ ವರ್ತಿಸುವಂತೆ ಅವರು ಸಲಹೆ ನೀಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಜಿ.ಕೆ.ಮಿಥುನಕುಮಾರ್‌ಅವರು ಮಾತನಾಡಿ, ಮೆರವಣಿಗೆ ಮತ್ತಿತರ ಸಂದರ್ಭದಲ್ಲಿ ಅಸಹ್ಯಕರವಾಗಿ ವರ್ತಿಸುವವರ ವಿರುದ್ಧ ಮೊಕದ್ದಮೆ ದಾಖಲಿಸಲಾಗುವುದಲ್ಲದೇ ಕಾನೂನು ಕ್ರಮ ಜರುಗಿಸಲಾಗುವುದು. ನೆರೆಯ ಜಿಲ್ಲೆಗಳಿಂದ ಆಗಮಿಸುವವರ ಮೇಲೆ ವಿಶೇಷ ಗಮನಹರಿಸಲಾಗುವುದು. ಅದಕ್ಕಾಗಿ ನಗರದ ಹೊರವಲಯದಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ ಎಂದರು.
ಸಾರ್ವಜನಿಕರು ಈ ಎಲ್ಲಾ ಸಂದರ್ಭಗಳಲ್ಲಿ ತಾಳ್ಮೆ ಕಳೆದುಕೊಳ್ಳದೇ ಸೌಹಾರ್ಧಯುತವಾಗಿ ವರ್ತಿಸಬೇಕು. ತಪ್ಪು ಹೆಜ್ಜೆ ಇಟ್ಟಲ್ಲಿ ಕ್ರಮ ಅನಿವಾರ್ಯವಾಗಲಿದೆ. ಪರಸ್ಪರರಲ್ಲಿ ವಾಗ್ವಾದ ಸಲ್ಲದು. ಮುಖಂಡರು ಇಂತಹ ಸಂದರ್ಭದಲ್ಲಿ ಮದ್ಯ ಪ್ರವೇಶಿಸಿ, ವಾತಾವರಣ ತಿಳಿಗೊಳಿಸಲು ಯತ್ನಿಸಬೇಕು. ಅಗತ್ಯವಿದ್ದಲ್ಲಿ ಪೊಲೀಸ್‌ಸಹಕಾರ ಪಡೆಯುವಂತೆ ಸೂಚಿಸಿದ ಅವರು, ಹಬ್ಬದ ಮೆರವಣಿಗೆಗಳು ನಡೆಯುವ ದಿನಗಳಂದು ಭವಿಷ್ಯದ ಬದುಕು ಕಲ್ಪಿಸಿಕೊಳ್ಳಲು ಹೊರಟಿರುವ ವಿದ್ಯಾರ್ಥಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಕ್ರಮ ವಹಿಸಲಾಗುವುದು ಎಂದರು.

ಗಣಪತಿ ವಿಸರ್ಜನೆಗೆ ಈಗಾಗಲೇ 25ಸ್ಥಳಗಳನ್ನು ಗುರುತಿಸಲಾಗಿದೆ ಅಲ್ಲದೆ ಇನ್ನಷ್ಟು ಸ್ಥಳಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಅಗತ್ಯಗಳಿಗೆ ಕ್ರೈನ್‌ಗಳನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ನಗರದೆಲ್ಲೆಡೆ 20ಕಿ.ಮೀ. ವ್ಯಾಪ್ತಿಯಲ್ಲಿ ಬ್ಯಾರಿಕೇಡ್‌ಗಳ ನಿರ್ಮಾಣ, 600 ಸಿಸಿ ಕ್ಯಾಮರಾ ಕಣ್ಗಾವಲು ಇಡಲಾಗಿದೆ ಅಲ್ಲದೇ ಡ್ರೋಣ್‌ಕ್ಯಾಮರಾಗಳನ್ನು ಬಳಸಿಕೊಳ್ಳಲಾಗುತ್ತಿದೆ. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಮುಳುಗು ತಜ್ಞರ ಸಹಕಾರ ಪಡೆಯಲಾಗಿದೆ. ಗಣಪತಿ ವಿಸರ್ಜನೆ ಸ್ಥಳಗಳಲ್ಲಿ ವಿದ್ಯುತ್‌ದೀಪ, ತೆಪ್ಪದ ವ್ಯವಸ್ಥೆ ಮಾಡಲು ಉದ್ದೇಶಿಸಲಾಗಿದೆ. ನಗರದೆಲ್ಲೆಡೆ ಮೂಲಭೂತ ಸೌಕರ್ಯ ಒದಗಿಸಲು ವಿಶೇಷ ಗಮನಹರಿಸಲಾಗಿದೆ. ಹಬ್ಬ ನಡೆಯುವ ಮೂರು ದಿನಗಳ ಕಾಲ ನಿರಂತರ ನೀರು ಒದಗಿಸಲು ಹಾಗೂ ಅಗತ್ಯವಿರುವಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ವಾರ್ಡ್‌ವಾರು ಸಂಪರ್ಕಿಸಬೇಕಾದ ವ್ಯಕ್ತಿಗಳ ಮೊಬೈಲ್‌ಸಂಪರ್ಕ ಸಂಖ್ಯೆಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಚುರಪಡಿಸಲಾಗುವುದು. ಹಬ್ಬಗಳ ಸಂದರ್ಭದಲ್ಲಿ ವಿದ್ಯುತ್‌ವ್ಯತ್ಯಯವಾಗದಂತೆ ಕ್ರಮವಹಿಸಲಾಗಿದೆ. ಸಾಂಪ್ರದಾಯಿಕವಾಗಿ ಗಣಪತಿ ವಿಸರ್ಜನೆಗೆ ಮೊಬೈಲ್‌ವಾಹನಗಳನ್ನು ಸಿದ್ಧಗೊಳಿಸಲಾಗಿದೆ. ಹಬ್ಬದ ಅನುಮತಿಗಾಗಿ ಸಂಘಟಕರಿಗೆ ಅನುಕೂಲವಾಗುವಂತೆ ಏಕಗವಾಕ್ಷಿ ವ್ಯವಸ್ಥೆಯಡಿ ವಿನೋಬನಗರ, ಡಿ.ವೈ.ಎಸ್ಪಿ ಕಚೇರಿ ಮತ್ತು ಮಹಾನಗರಪಾಲಿಕೆಗಳಲ್ಲಿ ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಅನುಮತಿ ನೀಡಲಾಗುತ್ತಿದೆ. ಅದಕ್ಕಾಗಿ ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ. –

ಮಾಯಣ್ಣಗೌಡ, ಆಯುಕ್ತರು, ಮಹಾನಗರಪಾಲಿಕೆ, ಶಿವಮೊಗ್ಗ.

ಗಣಪತಿ ಅಥವಾ ಈದ್‌ಮಿಲಾದ್‌ಹಬ್ಬದ ಸಂಭ್ರಮದ ಮೆರವಣಿಗೆಗಳು ಅತ್ಯಂತ ಶಾಂತಿಯುತವಾಗಿದ್ದು, ಮತ್ತೊಂದು ಸಮುದಾಯ, ಧರ್ಮ, ಜನಾಂಗಕ್ಕೆ ಅಥವಾ ಅವರ ಭಾವನೆಗಳಿಗೆ ಧಕ್ಕೆ ಉಂಟಾಗದಂತಿರಲಿ.

ರಮೇಶ್‌ಬಾಬು, ವಿ.ಹೆಚ್.ಪಿ.ಮುಖಂಡರು.

ಹಬ್ಬದ ಸಂಭ್ರಮ ಕಳೆಕಟ್ಟುವಂತಾಗಲು, ಮೆರವಣಿಗೆ ಸಾಗುವಲ್ಲಿ ವಿದ್ಯುತ್‌ ವ್ಯತ್ಯಯವಾಗದಂತೆ ಮೆಸ್ಕಾಂ ಅಧಿಕಾರಿಗಳು ವಿಶೇಷ ಗಮನಹರಿಸಬೇಕು.

ಪಾಷಾ, ಮೆಸ್ಕಾಂ ಸದಸ್ಯರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಕಾರಿಯಪ್ಪ, ರಮೇಶ್‌ಕುಮಾರ್‌, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸುಜಾತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಸರ್ವಧರ್ಮಗಳ ಮುಖಂಡರುಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/08/VID-20250820-WA0058.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ಬಾರಿ ಪ್ರಗತಿಪರ ಚಿಂತಕಿ ಬಾನು ಮುಷ್ತಾಕ್ ಕೈಯಿಂದ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ

Next Post

ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ | ಅಧಿಕಾರಿಗಳ ದಾಳಿ | ಪ್ರಕರಣ ದಾಖಲು

kalpa News

kalpa News

Next Post
ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ | ಅಧಿಕಾರಿಗಳ ದಾಳಿ | ಪ್ರಕರಣ ದಾಖಲು

ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ | ಅಧಿಕಾರಿಗಳ ದಾಳಿ | ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL