ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಹಳ ನಿರೀಕ್ಷೆ ಹುಟ್ಟಿಸಿದ್ದ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕೊನೆಗೂ ತೆರೆ ಬಿದ್ದಿದ್ದು, ಶಿವಮೊಗ್ಗ ಜಿಲ್ಲೆಗೆ ಮತ್ತೊಮ್ಮೆ ಸಚಿವ ಸ್ಥಾನ ಸಿಕ್ಕಿದೆ. ಮಾಜಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮತ್ತೆ ಸಚಿವ ಸ್ಥಾನ ದೊರೆತಿರುವುದು ಜಿಲ್ಲೆಯಲ್ಲಿ ಸಂತಸವನ್ನುಂಟು ಮಾಡಿದೆ.
ಈ ಹಿನ್ನೆಲೆ ಮಧು ಬಂಗಾರಪ್ಪನವರ ಬೆಂಬಲಿಗರು ಶಿವಮೊಗ್ಗ ನಗರದಲ್ಲಿ ಸಂಭ್ರಮಾಚರಣೆ ನಡೆಸಿ, ಪಟಾಕಿ ಸಿಡಿಸಿ ಸಿಹಿ ಹಂಚಿಕೊಂಡು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.
ಜೂನ್ 03ರಂದು ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡ ವೇಳೆ, ಡಿ.ಕೆ. ಶಿವಕುಮಾರ್ ಅವರೊಂದಿಗೆ 13 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಬಳಿಕ ಉಳಿದ 20 ಸಚಿವ ಸ್ಥಾನಗಳಿಗೆ ತೀವ್ರ ಪೈಪೋಟಿ ಉಂಟಾಗಿತ್ತು. ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಈಡಿಗ ಸಮುದಾಯದ ಕೋಟಾದಡಿ ಇಬ್ಬರು ಪ್ರಭಾವಿ ನಾಯಕರಾದ ಮಾಜಿ ಸಚಿವ ಎಸ್. ಮಧು ಬಂಗಾರಪ್ಪ ಹಾಗೂ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿಬಂದಿದ್ದವು.
Also read>> ಭುಗಿಲೆದ್ದ ಅಸಮಾಧಾನ | ನಾಳೆ ರಾಜೀನಾಮೆ ನೀಡುತ್ತೇನೆ : ಶಾಸಕ ಬೇಳೂರು ಗೋಪಾಲಕೃಷ್ಣ
ಇದೀಗ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಂಡಿದ್ದು, ಈಡಿಗ ಕೋಟಾದಡಿ ಮಧು ಬಂಗಾರಪ್ಪ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದು ಹಾಗೂ ಅವರ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










