No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿ.ಎಸ್ .ನಾಗರಾಜ ವೃತ್ತಿ ಬದುಕಿನ 50 ವರ್ಷದ ಸಾರ್ಥಕತೆ ಸಂಭ್ರಮ: ಅಭಿನಂದನಾ ಸಮಾರಂಭ

kalpa News by kalpa News
April 5, 2024
in ಶಿವಮೊಗ್ಗ
0
ಜಿ.ಎಸ್ .ನಾಗರಾಜ ವೃತ್ತಿ ಬದುಕಿನ 50 ವರ್ಷದ ಸಾರ್ಥಕತೆ ಸಂಭ್ರಮ: ಅಭಿನಂದನಾ ಸಮಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲಾ ವಕೀಲರ ಸಂಘ ಹಾಗೂ ಜಿ.ಎಸ್.ನಾಗರಾಜ ಅವರ ಕಿರಿಯ ವಕೀಲರ ಬಳಗದಿಂದ ಏ.6ರ ಶನಿವಾರ ಸಂಜೆ 6ಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ರಾಷ್ಟ್ರೀಯ ಪ್ರೌಢಶಾಲೆಯ ಆವರಣದಲ್ಲಿ ಜಿ.ಎಸ್.ನಾಗರಾಜ ಅವರ ವಕೀಲಿ ವೃತ್ತಿ ಬದುಕಿನ 50 ವರ್ಷ ಪೂರೈಸಿದ ಸಂಭ್ರಮದಲ್ಲಿ ‘ವೃತ್ತಿ ಜೀವನ ಸಾರ್ಥಕತೆ : 50’ ವಿಶೇಷ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿ.ಎಸ್.ಎನ್ ಕಿರಿಯ ವಕೀಲರ ಬಳಗದ ಸದಸ್ಯ ನಾಗೇಶನ್ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಸುಪ್ರಿಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ವಿ.ಗೋಪಾಲಗೌಡ ಉದ್ಘಾಟಿಸಲಿದ್ದು, ಮಾಜಿ ಸಚಿವರಾದ ಪ್ರೊ.ಬಿ.ಕೆ.ಚಂದ್ರಶೇಖರ್ ಹಾಗೂ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಅಭಿನಂದನಾ ಮತುಗಳನ್ನಾಡಲಿದ್ದಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಿ.ಜಿ.ಶಿವಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ವಕೀಲರಾದ ಎನ್.ದೇವೇಂದ್ರಪ್ಪ, ಕೆ.ಬಸಪ್ಪಗೌಡ, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಉಪಸ್ಥಿತರಿರುವರು.
31-05-1968 ರಂದು ವಕೀಲರಾಗಿ ನೊಂದಾಯಿಸಿಕೊಂಡ ಜಿ.ಎಸ್.ನಾಗರಾಜ ಅವರು, ಪ್ರಖ್ಯಾತ ವಕೀಲರಾಗಿದ್ದ ಮಹಿಷಿ ನರಸಿಂಹಮೂರ್ತಿ ಅವರ ಕಛೇರಿಯಲ್ಲಿ ಕಿರಿಯ ನ್ಯಾಯವಾದಿಗಳಾಗಿ ವೃತ್ತಿ ಪ್ರಾರಂಭಿಸಿದರು. ಸಿವಿಲ್ ಕ್ರಿಮಿನಲ್ ಕಾರ್ಮಿಕ ವಿಭಾಗದಲ್ಲಿ ವಿಶೇಷ ಪರಿಣಿತಿ ಪಡೆದು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರಿನಲ್ಲಿ ಪ್ರಮುಖ ಕೇಸ್‌ಗಳನ್ನು ನಿರ್ವಹಿಸುವ ಮೂಲಕ ನೊಂದ ಜೀವಗಳಿಗೆ ನ್ಯಾಯ ಒದಗಿಸಿದ್ದಾರೆ. ಭದ್ರಾವತಿಯ ನಾಗಸಮುದ್ರದ ಗೋಲಿಬಾರ್‌ನಲ್ಲಿ ರೈತರ ಹತ್ಯೆ ಕೇಸ್ ಕುರಿತ ಸರ್ಕಾರದ ತನಿಖಾ ಆಯೋಗದ ಮುಂದೆ ರೈತ ಸಂಘದ ಪರವಾಗಿ, ಹೊನ್ನಾಳಿಯ ಚುನಾವಣೆ ಸಂದರ್ಭದಲ್ಲಿ ಗೊಲಿಬಾರ್ ನಡೆದಾಗ ಸರ್ಕಾರದ ತನಿಖಾ ಆಯೋಗದ ಮುಂದೆ ಪೊಲೀಸರ ಪರವಾಗಿ ಹಾಗೂ ಚಂದ್ರಗುತ್ತಿಯಲ್ಲಿ ನಡೆಯುತ್ತಿದ್ದ ಬೆತ್ತಲೆ ಸೇವೆ ತಡೆಯಲು ಹೋದ ಪೊಲೀಸರ ಮೇಲೆ ನಡೆದ ಹಲ್ಲೆ ಪ್ರಕರಣದ ಕುರಿತ ಸರ್ಕಾರದ ತನಿಖಾ ಆಯೋಗದ ಮುಂದೆ ಪೊಲೀಸರ ಪರವಾಗಿ ವಾದ ಮಂಡಿಸಿದ್ದಾರೆ.

Also read: ತೀರ್ಥಹಳ್ಳಿಯಲ್ಲಿ ರಾಜಕೀಯ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ ಎನ್’ಐಎ !?

ವಿದ್ಯಾರ್ಥಿ ದೆಸೆಯಿಂದಲೇ ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಸಂಘಟಿಸಿ ವಿದ್ಯಾರ್ಥಿಗಳ ಪರ ಅನೇಕ ಹೋರಾಟದಲ್ಲಿ ಭಾಗವಹಿಸಿ, ಕಮ್ಯುನಿಸ್ಟ್ ಪಕ್ಷದ ಸದಸ್ಯತ್ವ ಪಡೆದು ಕಾರ್ಮಿಕ ಹಾಗೂ ರೈತ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ರೈತ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಗೇಣಿದಾರರಿಗೆ ಭೂಹಕ್ಕಿನ ಪತ್ರ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಶಿವಮೊಗ್ಗ ಜಿಲ್ಲೆಯ ನ್ಯಾಯವಾದಿ ಸಂಘದ ಕಾರ್ಯದರ್ಶಿಯಾಗಿ, ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾಗಿ, ಅಂದಿನ ಸಂಯುಕ್ತ ರಂಗದ ಸಕ್ರಿಯ ಕಾರ್ಯಕರ್ತರಾಗಿ, ಶಿವಮೊಗ್ಗ ಬಸವನಗುಡಿ-ಜಯನಗರ ವಾರ್ಡ್ ನಗರಸಭಾ ಸದಸ್ಯರಾಗಿ, ಶಿವಮೊಗ್ಗ ಕರ್ನಾಟಕ ಸಂಘದ ಸದಸ್ಯರಾಗಿ, ಶಿವಮೊಗ್ಗ ಹಾಗೂ ಬೆಂಗಳೂರು ಹೋಟೆಲ್ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ, ಶಿವಮೊಗ್ಗ ಮೋಟಾರ್ ವಕರ‍್ಸ್ ಕಾರ್ಮಿಕರ ವಿಭಾಗದ ಕಾರ್ಯದರ್ಶಿಯಾಗಿ, ಕೆಎಸ್‌ಆರ್‌ಟಿಸಿ ಶಿವಮೊಗ್ಗ ಘಟಕದ ವಕರ‍್ಸ್ ಯೂನಿಯನ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಶಿವಮೊಗ್ಗದ ಪ್ರತಿಷ್ಟಿತ ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿಯು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಭಾರತ-ಚೀನಾ ಮೈತ್ರಿ ಸಂಘದ ರಾಜ್ಯಾಧ್ಯಕ್ಷರಾಗಿ, ನಂತರ ಭಾರತೀಯ ಅಧ್ಯಕ್ಷರಾಗಿ ಅಂತರಾಷ್ಟ್ರೀಯ ಮಟ್ಟಕ್ಕೆ ತಮ್ಮ ಸೇವೆಯನ್ನು ವಿಸ್ತರಿಸಿ ಕೊಂಡಿದ್ದಾರೆ. ಮಲೇಶಿಯಾ ದೇಶದಲ್ಲಿ ನಡೆದ ಅಂತರಾಷ್ಟ್ರೀಯ ಕಾನೂನು ಪ್ರಾಧ್ಯಾಪಕರು ಮತ್ತು ನ್ಯಾಯವಾದಿಗಳ ಸಮ್ಮೇಳನದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಿ.ಜಿ.ಶಿವಮೂರ್ತಿ, ಕಿರಿಯ ವಕೀಲರ ಬಳಗದ ಸದಸ್ಯರಾದ ದೇವೇಂದ್ರಪ್ಪ, ಅನಂತದತ್ತಾ, ಅಣ್ಣಪ್ಪ, ಸೋಮಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/02/VID-20240229-WA0026.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿಯಲ್ಲಿ ರಾಜಕೀಯ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ ಎನ್’ಐಎ !?

Next Post

ಅವರ ರಾಜಕಾರಣದಲ್ಲಿರುವ ಗರ್ವವನ್ನು ಮುರಿಯಬೇಕಿದೆ: ಕುಮಾರ್ ಬಂಗಾರಪ್ಪ ಟಾಂಗ್ ನೀಡಿದ್ದು ಯಾರಿಗೆ?

kalpa News

kalpa News

Next Post
ಅವರ ರಾಜಕಾರಣದಲ್ಲಿರುವ ಗರ್ವವನ್ನು ಮುರಿಯಬೇಕಿದೆ: ಕುಮಾರ್ ಬಂಗಾರಪ್ಪ ಟಾಂಗ್ ನೀಡಿದ್ದು ಯಾರಿಗೆ?

ಅವರ ರಾಜಕಾರಣದಲ್ಲಿರುವ ಗರ್ವವನ್ನು ಮುರಿಯಬೇಕಿದೆ: ಕುಮಾರ್ ಬಂಗಾರಪ್ಪ ಟಾಂಗ್ ನೀಡಿದ್ದು ಯಾರಿಗೆ?

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL