ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ 3ನೆಯ ಅಲೆಯ ಆತಂಕದ ನಡುವೆಯೇ ಶ್ರಾವಣ ಮಾಸ ಆರಂಭವಾಗಿದ್ದು, ಇಂದು ಜಿಲ್ಲೆಯಾದ್ಯಂತ ಸಂಭ್ರಮ ಹಾಗೂ ಸಡಗರದಿಂದ ನಾಗರ ಪಂಚಮಿ ಆಚರಿಸಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಜಿಲ್ಲಾ ಕೇಂದ್ರ ಶಿವಮೊಗ್ಗ, ಭದ್ರಾವತಿ, ಸಾಗರ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಶ್ರದ್ಧಾಭಕ್ತಿಗಳಿಂದ ನಾಗ ದೇವರನ್ನು ಪೂಜಿಸಿದರು.
ಶಿವಮೊಗ್ಗದ ಪ್ರಮುಖ ನಾಗರ ಕಟ್ಟೆ ಹಾಗೂ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಮಹಿಳೆಯರುವ ತನಿ ಎರೆದು, ಚಿಗಳಿ, ತಂಬಿಟ್ಟು ನೈವೇದ್ಯ ಮಾಡಿ ಪೂಜೆ ಸಲ್ಲಿಸಿದರು.
ಅದೇ ರೀತಿಯ ಭದ್ರಾವತಿಯ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ, ಹಳೇನಗರದ ಶ್ರೀ ರಾಮೇಶ್ವರ ದೇವಾಲಯದ ಆವರಣದಲ್ಲಿರುವ ನಾಗರಕಟ್ಟೆ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಭಕ್ತರು ಪೂಜೆ ಸಲ್ಲಿಸಿದರು.
ಫೋಟೋ ಗ್ಯಾಲರಿ ನೋಡಿ:
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post