ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಖ್ಯಾತ ಆರ್ಥಿಕ ತಜ್ಞರು ಹಾಗು ಭಾರತೀಯ ಜನತಾ ಪಕ್ಷದ ರಾಜ್ಯ ವಕ್ತಾರರು ಆದ ವಿಶ್ವನಾಥ್ ಭಟ್ ರವರು ಫೆ.18ರಂದು 2025-26ರ ಕೇಂದ್ರ ಸರ್ಕಾರದ ಬಜೆಟ್ ನ #Union Budget ವಿಶ್ಲೇಷಣೆ ಹಾಗೂ ಶಿವಮೊಗ್ಗ ನಗರದ ಗಣ್ಯರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
Also read: ಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭ | ಈ ದಿನಾಂಕದಂದು ಬಜೆಟ್ ಮಂಡನೆ | ಸಿಎಂ
ಶಿವಮೊಗ್ಗದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಕೇಂದ್ರ ಸಂಘದ ಸಭಾಂಗಣದಲ್ಲಿ ಸಂಜೆ ಐದು ಮೂವತ್ತಕ್ಕೆ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಶಿವಮೊಗ್ಗ ಜಿಲ್ಲೆ ಬಿಜೆಪಿ ಅಧ್ಯಕ್ಷ ಜಗದೀಶ್, ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಬಿ ಗೋಪಿನಾಥ್, ವಿಧಾನ ಪರಿಷತ್ ಸದಸ್ಯರುಗಳಾದ ಡಿ.ಎಸ್. ಅರುಣ್ ಹಾಗೂ ಡಾಕ್ಟರ್ ಧನಂಜಯ್ ಸರ್ಜಿ ಅವರು ಉಪಸ್ಥಿತರಿರಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post