ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಿರುವ ಪಿಎಫ್ಐ ಸಂಘಟನೆಯನ್ನು ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ನಿಕಟಪೂರ್ವಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 40ಕ್ಕೂ ಹೆಚ್ಚು ಕಡೆ ಪೊಲೀಸರ ದಾಳಿ ನಡೆಸಲಾಗಿದೆ. ಅನೇಕ ಪಿಎಫ್ ಐ ಕಾರ್ಯಕರ್ತರು, ಮುಖಂಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪಿಎಫ್ ಐ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ. ಹಾಗೂ ಪಿಎಫ್ ಐ ವಿರುದ್ಧ ಸಮಗ್ರ ತನಿಖೆ ಬಳಿಕ ಅವರ ದೇಶದ್ರೋಹಿ ಚಟುವಟಿಕೆಗಳು ಮತ್ತು ಕೇಂದ್ರ ಸರ್ಕಾರ ಉರುಳಿಸಲು ಮಾಡಿರುವ ಷಡ್ಯಂತ್ರ ಬಯಲಾಗಲಿದೆ ಎಂದರು.
ಶಿಕ್ಷಕರ ಅಕ್ರಮ ನೇಮಕಾತಿ ಬಗ್ಗೆ ಕಾಂಗ್ರೆಸ್ ನಾಯಕರು ನಾಡಿನ ಜನತೆಗೆ ಉತ್ತರ ಕೊಡಬೇಕು. ತನಿಖೆ ನಡೆದರೆ ಎಲ್ಲಾ ಹೊರಗೆ ಬರುತ್ತದೆ. ಸಿದ್ದರಾಮಯ್ಯ ಅವಧಿಯಲ್ಲಿ ಸಾಕಷ್ಟು ಹಗರಣ ನಡೆದಿದೆ. ಹೀಗಾಗಿಯೇ ರಾಜ್ಯದ ಜನ ಅವರನ್ನು ಅಧಿಕಾರದಿಂದ ದೂರ ಇಟ್ಟರು .ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ದೇಶದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡದೆ, ಹಗಲು ದರೋಡೆ ಮಾಡಿದ್ದಾರೆ ಇದಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಯೇ ಸಾಕ್ಷಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Also read: ಪಿಎಫ್’ಐ, ಎಸ್’ಡಿಪಿಐ ಬೆಳೆಯಲು ಸಿದ್ಧರಾಮಯ್ಯ ಕಾರಣ: ನಳೀನ್ ಕುಮಾರ್ ಕಟೀಲ್ ಕಿಡಿ
ಸಿದ್ದರಾಮಯ್ಯ, ಡಿಕೆಶಿ ಸಿಎಂ ಬೊಮ್ಮಾಯಿ ವಿರುದ್ದ ಪೋಸ್ಟರ್ ಅಂಟಿಸಿದ್ದಾರೆ. ಈ ಬಗ್ಗೆ ದೂರು ಕೊಟ್ಟಿದ್ದೇವೆ. ವಿಪಕ್ಷದ ನಾಯಕರಾಗಿ ಈ ರೀತಿ ವರ್ತನೆ ಶೋಭೆ ತರುವುದಿಲ್ಲ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post