ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೆಎನ್‌ಎನ್‌ಸಿಇ JNNCE (ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜು)ಯಲ್ಲಿ ಸಿಇಟಿ/ಕಾಮೆಡ್-ಕೆ CET/COMED-K ಸೀಟು ಆಯ್ಕೆ ಪ್ರಕ್ರಿಯೆ ಕುರಿತು ವಿಶೇಷ ಸಂವಾದ ಕಾರ್ಯಕ್ರಮವನ್ನು ಜೂನ್ 14ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.
ಕಾಲೇಜಿನ ಎಂ.ಬಿ.ಎ. ಎಂಸಿಎ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞರು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಮಗ್ರ ಮಾರ್ಗದರ್ಶನ ನೀಡಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯ ನೇರ ಪ್ರಾತ್ಯಕ್ಷಿಕೆ ನಡೆಯಲಿದೆ. ಜೊತೆಗೆ ವಿವಿಧ ಇಂಜಿನಿಯರಿಂಗ್ ವಿಭಾಗಗಳು, ಉದ್ಯೋಗಾವಕಾಶಗಳು, ವಿದ್ಯಾರ್ಥಿವೇತನಗಳು ಹಾಗೂ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಶಿಕ್ಷಣ ಸಾಲದ ಸೌಲಭ್ಯಗಳ ಕುರಿತು ತಜ್ಞರು ಮಾಹಿತಿ ನೀಡಲಿದ್ದಾರೆ.
Also read: ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ
ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಸುಲಭವಾಗಿ ತಲುಪುವಂತೆ ಮಹಾವೀರ ಸರ್ಕಲ್ ಹಾಗೂ ಬಸ್ ನಿಲ್ದಾಣದಿಂದ ಜೆಎನ್‌ಎನ್‌ಸಿಇ ಕಾಲೇಜಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 96324 71667 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















