ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಂವಿಧಾನ #Constitution ಪ್ರದತ್ತವಾದ ಮೂಲಭೂತ ಹಕ್ಕುಗಳಂತೆಯೇ ಪ್ರತಿಯೊಬ್ಬರು ಚುನಾವಣಾ ಸಂದರ್ಭದಲ್ಲಿ ಮತದಾನವನ್ನು #Voting ನೀಡುವ ಮೂಲಕ ಸದೃಢ ಸಮಾಜವನ್ನು ನಿರ್ಮಾಣ ಮಾಡಬೇಕೆಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ ಹೇಳಿದರು.
ಅವರು ಶಿವಮೊಗ್ಗ ಜಿಲ್ಲಾ ಚುನಾವಣಾ ಆಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಶಿವಮೊಗ್ಗ ಹಾಗೂ ಬಸವೇಶ್ವರ ಪದವಿ ಪೂರ್ವ ಕಾಲೇಜು, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ (ಓಗಿಆ) #Voter’s Day ಪ್ರಯುಕ್ತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಶಿವಮೊಗ್ಗ ತಾಲೂಕು ಮಟ್ಟದ ಇಐಅ ಕನ್ನಡ ಪ್ರಬಂಧ ಸ್ಪರ್ಧೆ 2025-26 ಉದ್ಘಾಟಿಸಿ ಮಾತನಾಡಿದರು.
ಚುನಾವಣಾ #Election ಪ್ರಕ್ರಿಯೆಯಲ್ಲಿ ಅತ್ಯಂತ ಕಡಿಮೆ ಮತದಾನವಾಗುವುದು ವಿಷಾಧಕರ. ಮತದಾನ ಮಾಡುವುದು ಕೂಡ ಕರ್ತವ್ಯವಾಗಬೇಕು. ಚುನಾವಣೆಯ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಮತ ಚಲಾಯಿಸಿ ನಿಮ್ಮ ಭವಿಷ್ಯವನ್ನು ನೀವೇ ನಿರೂಪಿಸಿಕೊಳ್ಳಿ ಜಾಗೃತರಾಗಿರಿ ಎಂದು ಕಿವಿಮಾತು ಹೇಳಿದರು.
ಬಸವೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಹೆಚ್. ರಾಜು ಮಾತನಾಡಿ, ಮತದಾರರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಮತದಾನ ಎಂಬುದು ಪವಿತ್ರವಾದುದು. ಯಾವುದೇ ಆಮಿಷಗಳಿಗೆ ಒಳಗಾಗದೆ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳುವುದು ನಮ್ಮ ಕರ್ತವ್ಯ ಕೂಡ. ಮತದಾನದಿಂದ ದೂರು ಇರುವುದು ಸರಿಯಲ್ಲ ಆದರೆ ವಿದ್ಯಾವಂತರೇ ಮತದಾನದಿಂದ ದೂರ ಇರುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಪ್ರಜಾಪ್ರಭುತ್ವದ ಯಶಸ್ವಿಗೆ ಚುನಾವಣೆಗಳೇ ಪ್ರೇರಕವಾಗಬೇಕು. ಮತದಾನವೇ ಶ್ರೇಷ್ಠ ಎಂದರು.
ಎಡಿಸಿ ಅಭಿಷೇಕ್ ಉದ್ಘಾಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಹೆಚ್.ವಿ. ಮಹೇಶ್ವರಪ್ಪ, ಉಪಾಧ್ಯಕ್ಷ ನಂಜಪ್ಪ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಜಿ.ಎಫ್. ಕುಟ್ರಿ, ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ವೇದಿಕೆಯ ಮಂಜುನಾಥ್ ಬಣಕಾರ್ ಉಪಸ್ಥಿತರಿದ್ದರು.
ಇಎಲ್‍ಸಿ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂಸಿಯ ಭರತ್‍ಗೌಡ, ದ್ವಿತೀಯ ಸ್ಥಾನ ಸರ್ಕಾರಿ ಪದವಿಪೂರ್ವ ಕಾಲೇಜು ಆಯನೂರಿನ ಭಾಗ್ಯಲಕ್ಷ್ಮಿ, ತೃತೀಯ ಸ್ಥಾನ ಡಿವಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಲಾವಣ್ಯ ಪಡೆದರು.
ನಿರ್ಣಾಯಕರಾಗಿ ಉಪನ್ಯಾಸಕ ಕೆ.ಹೆಚ್. ಪುಟ್ಟಪ್ಪ ಬಿಳವಾಣಿ, ಹರೀಶ್ ಓ.ಎಸ್., ಶಬ್ರಿನ್‍ಬಾನು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















