No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

‘ಚನ್ನಬಸಪ್ಪ ನಮ್ಮ ಹುಡುಗ, ಈ ವಿಚಾರವನ್ನು ಸೀರಿಯಸ್ ಆಗಿ ತೆಗೆದುಕೊಳ್ಳಬೇಡಿ’ : ಈಶ್ವರಪ್ಪ

kalpa News by kalpa News
September 4, 2026
in ರಾಜಕೀಯ, ಶಿವಮೊಗ್ಗ
0
shivamogga-channi-eshwarappa-political-war
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga)  ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (Eshwarappa) ಅವರ ನಡುವಿನ ರಾಜಕೀಯ ವಾಕ್ಸಮರ ಇದೀಗ ಮತ್ತಷ್ಟು ಕುತೂಹಲ ಮೂಡಿಸಿದೆ. ಚನ್ನಬಸಪ್ಪ ಅವರು ತಮ್ಮ ವಿರುದ್ಧ ಮಾಡಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, “ಚನ್ನಬಸಪ್ಪ ನಮ್ಮ ಹುಡುಗ. ಈ ವಿಚಾರವನ್ನು ಬಹಳ ಸೀರಿಯಸ್ ಆಗಿ ತೆಗೆದುಕೊಳ್ಳಬೇಡಿ” ಎಂದು ಹೇಳುವ ಮೂಲಕ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ.

ಚನ್ನಬಸಪ್ಪ ಅವರು ತಮ್ಮ ವಿರುದ್ಧ ಗಂಭೀರವಾಗಿ ಹೇಳಿಕೆ ನೀಡಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಶಾಸಕ ಸೀರಿಯಸ್ ಆಗಿಯೇ ಹೇಳಿಕೆ ನೀಡಿದ್ದರೂ ತಾವು ಅದನ್ನು ಅದೇ ರೀತಿಯಲ್ಲಿ ಪರಿಗಣಿಸುವುದಿಲ್ಲ ಎಂಬ ಸಂದೇಶ ನೀಡಿದರು. “ನಮ್ಮ ಹುಡುಗ” ಎಂದು ಹಲವು ಬಾರಿ ಉಲ್ಲೇಖಿಸಿದ ಅವರು, ಇಬ್ಬರ ನಡುವಿನ ಸಂಬಂಧವನ್ನು ಕೇವಲ ರಾಜಕೀಯ ಭಿನ್ನಾಭಿಪ್ರಾಯದ ದೃಷ್ಟಿಯಿಂದ ನೋಡಬಾರದು ಎಂದು ಸೂಚಿಸಿದರು.

‘ಹಿಂದುತ್ವಕ್ಕಾಗಿ ಸಾಕಷ್ಟು ಚಟುವಟಿಕೆ ಮಾಡುತ್ತಿದ್ದೇವೆ’

ಪ್ರಸ್ತುತ ಬೆಳವಣಿಗೆಗಳು ಹಾಗೂ ತಮ್ಮ ವಿರುದ್ಧ ಕೇಳಿಬಂದಿರುವ ಟೀಕೆಗಳ ಕುರಿತು ಮಾತನಾಡಿದ ಈಶ್ವರಪ್ಪ, ಹಿಂದುತ್ವ ಉಳಿಯಬೇಕು ಮತ್ತು ಸಂಘಟನೆ ಬಲಗೊಳ್ಳಬೇಕು ಎಂಬ ಉದ್ದೇಶದಿಂದ ತಾವು ಹಾಗೂ ತಮ್ಮ ಬೆಂಬಲಿಗರು ಹಲವು ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು.

ರಾಜಕೀಯ ಹಾಗೂ ಸೈದ್ಧಾಂತಿಕ ವಿಚಾರಗಳು ಒಂದಕ್ಕೊಂದು ಬೆಸೆದುಕೊಂಡಿರುವ ಸಂದರ್ಭದಲ್ಲಿ ರಾಜಕಾರಣ ಮಧ್ಯೆ ಬರುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದ ಅವರು, ಚನ್ನಬಸಪ್ಪ ಅವರ ಹೇಳಿಕೆಯನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

“ನಮ್ಮ ಹುಡುಗ, ಅವನ ಬಾಯಲ್ಲಿ ಏನೋ ಅನಿಸಿದೆ, ಹೇಳಿದ್ದಾನೆ. ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂಬುದನ್ನು ತೀರ್ಮಾನ ಮಾಡೋಣ” ಎಂದು ಈಶ್ವರಪ್ಪ ಹೇಳಿದರು.

‘ಗುರು–ಶಿಷ್ಯರ ಕದನ ಅಲ್ಲ’

ಚನ್ನಬಸಪ್ಪ ಹಾಗೂ ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯವನ್ನು ಗುರು–ಶಿಷ್ಯರ ನಡುವಿನ ಕದನ ಎಂದು ಕರೆಯಬಹುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಈಶ್ವರಪ್ಪ ನಗುತ್ತಲೇ ಪ್ರತಿಕ್ರಿಯಿಸಿದರು.

“ನಮ್ಮ ಹುಡುಗ ಅಂತ ಹೇಳಿದ ಮೇಲೆ ಗುರು–ಶಿಷ್ಯರ ಕದನ ಅಂತ ಹೇಗೆ ಅಪೇಕ್ಷೆ ಪಡ್ತೀರಾ?” ಎಂದು ಪ್ರಶ್ನಿಸಿದ ಅವರು, ಈ ವಿಚಾರಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ ಎಂಬ ರೀತಿಯಲ್ಲಿ ಉತ್ತರಿಸಿದರು.Kumadvathi College Shikariura

Shivamogga : ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸುಳಿವು

ಇದೇ ವೇಳೆ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಈಶ್ವರಪ್ಪ ನೀಡಿರುವ ಹೇಳಿಕೆ ಶಿವಮೊಗ್ಗ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು ಈಗಾಗಲೇ ತಮ್ಮೊಂದಿಗೆ ಹಾಗೂ ತಮ್ಮ ಪುತ್ರನೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಅವರು ತಿಳಿಸಿದರು. ತಮ್ಮ ಪುತ್ರ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಾಗಿ ಸ್ಪಷ್ಟವಾಗಿ ಹೇಳಿದ್ದಾನೆ ಎಂದರು.

ತಾವು ಕರ್ನಾಟಕದಾದ್ಯಂತ ಪ್ರವಾಸ ಮಾಡಿ ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು ಎಂಬ ಅಭಿಪ್ರಾಯವನ್ನು ತಮ್ಮ ಪುತ್ರ ವ್ಯಕ್ತಪಡಿಸಿದ್ದಾನೆ ಎಂದು ಈಶ್ವರಪ್ಪ ಹೇಳಿದರು.

“ನಾವು ಈ ಬಾರಿ ಚುನಾವಣೆಗೆ ನಿಲ್ತೇವೆ. ನಮ್ಮ ತಂದೆ ಕರ್ನಾಟಕ ರಾಜ್ಯದಲ್ಲಿ, ಇಡೀ ರಾಜ್ಯದಲ್ಲಿ ಸುತ್ತಬೇಕು, ಸಂಘಟನೆ ಮಾಡಬೇಕು. ಈಗಿರುವ ಪರಿಸ್ಥಿತಿಯಲ್ಲಿ ಹೀಗೆ ಮುಂದುವರಿದರೆ ಕಷ್ಟವಾಗುತ್ತದೆ” ಎಂಬ ವಿಚಾರವನ್ನು ಪಕ್ಷದ ನಾಯಕರ ಗಮನಕ್ಕೆ ಪುತ್ರ ತಂದಿದ್ದಾನೆ ಎಂದು ವಿವರಿಸಿದರು.

ಈ ಬಗ್ಗೆ ಪಕ್ಷದ ನಾಯಕರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಂದು–ಎರಡು ತಿಂಗಳೊಳಗೆ ಕೇಂದ್ರ ನಾಯಕರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

Also read>> ಸ್ಪರ್ಶ್ ಆಸ್ಪತ್ರೆ ಹೆಣ್ಣೂರಿಗೆ ಯಶಸ್ವಿ 1 ವರ್ಷ | ಉತ್ತರ ಬೆಂಗಳೂರಿನಲ್ಲಿ ಸಮಗ್ರ ಚಿಕಿತ್ಸೆಗೆ ಹೆಚ್ಚಿದ ಒಲವು

‘ಚುನಾವಣೆ ತನಕ ಸರ್ಕಾರ, ಪಕ್ಷವನ್ನು ಬಿಡುವುದಿಲ್ಲ’

ಕರ್ನಾಟಕದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬದಲಾಗಬೇಕು ಎಂಬ ನಿಲುವು ವ್ಯಕ್ತಪಡಿಸಿದ ಈಶ್ವರಪ್ಪ, ಚುನಾವಣೆಯವರೆಗೂ ತಮ್ಮ ಹೋರಾಟ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದರು.

“ಚುನಾವಣೆ ತನಕವೂ ಈ ಸರ್ಕಾರವನ್ನು, ಈ ಪಕ್ಷವನ್ನು ಈ ರೀತಿ ನಾವು ಬಿಡಲ್ಲ. ಯಾಕೆಂದರೆ ಇದು ಸರಿಹೋಗಬೇಕು” ಎಂದು ಅವರು ಹೇಳಿದರು.

ಬಿಜೆಪಿ ಸಂಘಟನೆ ಒಂದು ಅಥವಾ ಎರಡು ದಿನಗಳಲ್ಲಿ ನಿರ್ಮಾಣವಾದದ್ದಲ್ಲ ಎಂದು ಹೇಳಿದ ಈಶ್ವರಪ್ಪ, ಪಕ್ಷದ ಸೈದ್ಧಾಂತಿಕ ಹಿನ್ನೆಲೆಯನ್ನು ಪ್ರಸ್ತಾಪಿಸಿದರು. ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಬಲಿದಾನ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಸಾವಿನಂತಹ ಘಟನೆಗಳನ್ನು ಸ್ಮರಿಸಿದ ಅವರು, ಪಕ್ಷದ ಸಂಘಟನೆಗಾಗಿ ಅನೇಕರು ತ್ಯಾಗ ಮಾಡಿದ್ದಾರೆ ಎಂದರು.

“ಅವರೆಲ್ಲರೂ ಪ್ರಾಣ ಕೊಟ್ಟಿರುವುದು ಇವರು ಲೂಟಿ ಹೊಡೆದುಕೊಂಡು ಹೋಗುವುದಕ್ಕಲ್ಲ. ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಬೆಳವಣಿಗೆಗಳಿಗಾಗಿ ಅಲ್ಲ. ಸಂಘಟನೆಯನ್ನು ಗಟ್ಟಿಗೊಳಿಸುತ್ತೇವೆ. ಈ ಚುನಾವಣೆಯಲ್ಲೂ ಕೂಡ ಸ್ಪರ್ಧೆ ಮಾಡುತ್ತೇವೆ” ಎಂದು ಈಶ್ವರಪ್ಪ ಹೇಳಿದರು.PES Shivamogga

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಯಾರು ಸ್ಪರ್ಧೆ?

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಯಾರು ಸ್ಪರ್ಧಿಸಲಿದ್ದಾರೆ ಎಂಬ ಪ್ರಶ್ನೆ ಇದೀಗ ಮತ್ತಷ್ಟು ಕುತೂಹಲ ಮೂಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ತಮ್ಮ ಪುತ್ರ ಈಗಾಗಲೇ “ನಾನು ಅಥವಾ ನಮ್ಮಪ್ಪ ಇಬ್ಬರಲ್ಲಿ ಒಬ್ಬರು ನಿಲ್ತೇವೆ” ಎಂದು ಹೇಳಿದ್ದಾನೆ ಎಂದು ತಿಳಿಸಿದರು.

ಆದರೆ ಅಂತಿಮ ನಿರ್ಧಾರವನ್ನು ತಾವು ಮಾತ್ರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಹಿರಿಯರು, ಹಿತೈಷಿಗಳು, ವಿವಿಧ ಸಮಾಜಗಳ ಮುಖಂಡರು ಹಾಗೂ ರಾಷ್ಟ್ರಭಕ್ತ ಬಳಗದ ಪ್ರಮುಖರೊಂದಿಗೆ ಚರ್ಚೆ ನಡೆಸಿ ಯಾರು ಅಭ್ಯರ್ಥಿಯಾಗಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದರು.

“ನಾನು ನಿಲ್ಲಬೇಕೋ ಅಥವಾ ನನ್ನ ಮಗ ನಿಲ್ಲಬೇಕೋ ಎಂಬುದನ್ನು ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.

ಚನ್ನಬಸಪ್ಪ ವಿಚಾರದಲ್ಲಿ ಈಶ್ವರಪ್ಪ ಸ್ಪಷ್ಟನೆ

ಶಾಸಕ ಚನ್ನಬಸಪ್ಪ ಅವರ ಕುರಿತು ಪತ್ರಕರ್ತರು ಪದೇಪದೇ ಪ್ರಶ್ನಿಸಿದಾಗ, ಈಶ್ವರಪ್ಪ ವೈಯಕ್ತಿಕ ವಿಚಾರವನ್ನು ಮತ್ತಷ್ಟು ಮುಂದುವರಿಸಲು ನಿರಾಕರಿಸಿದರು.

“ಅವನ ಸಂಬಂಧ ಎಲ್ಲ, ಅವನ ಮತ್ತೆ ಆ ಹೆಸರು ತರಬೇಡಿ. ಮುಗೀತು ಅದು” ಎಂದು ಹೇಳುವ ಮೂಲಕ ಚನ್ನಬಸಪ್ಪ ಕುರಿತ ಚರ್ಚೆಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ಚನ್ನಬಸಪ್ಪ ಅವರು “ಈಶ್ವರಪ್ಪನವರಿಂದ ಇಂತಹ ಮಾತು ನಿರೀಕ್ಷಿಸಿರಲಿಲ್ಲ” ಎಂದು ಹೇಳಿರುವ ಕುರಿತು ಪ್ರಶ್ನಿಸಿದಾಗಲೂ ಈಶ್ವರಪ್ಪ ವೈಯಕ್ತಿಕ ಆರೋಪ–ಪ್ರತ್ಯಾರೋಪಕ್ಕೆ ಮುಂದಾಗದೆ, ರಾಜ್ಯದ ರಾಜಕೀಯ ಪರಿಸ್ಥಿತಿ ಹಾಗೂ ಪಕ್ಷದ ಸಂಘಟನೆ ಕುರಿತು ತಮ್ಮ ನಿಲುವನ್ನು ಪುನರುಚ್ಚರಿಸಿದರು.

ಶಿವಮೊಗ್ಗ ರಾಜಕೀಯದಲ್ಲಿ ಕುತೂಹಲ

ಒಟ್ಟಾರೆ, ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಚನ್ನಬಸಪ್ಪ–ಈಶ್ವರಪ್ಪ ನಡುವಿನ ರಾಜಕೀಯ ವಾಕ್ಸಮರ, ಈಶ್ವರಪ್ಪ ಕುಟುಂಬದ ಮುಂದಿನ ರಾಜಕೀಯ ನಡೆ ಹಾಗೂ ಮುಂಬರುವ ಚುನಾವಣೆಯಲ್ಲಿ ಈಶ್ವರಪ್ಪ ಅಥವಾ ಅವರ ಪುತ್ರರಲ್ಲಿ ಯಾರು ಸ್ಪರ್ಧಿಸಲಿದ್ದಾರೆ ಎಂಬ ಪ್ರಶ್ನೆಗಳು ಇದೀಗ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ.

ಒಂದೆಡೆ ಚನ್ನಬಸಪ್ಪ ಅವರ ಹೇಳಿಕೆಗಳಿಗೆ ಈಶ್ವರಪ್ಪ “ನಮ್ಮ ಹುಡುಗ” ಎಂದು ಪ್ರತಿಕ್ರಿಯಿಸಿರುವುದು ಗಮನ ಸೆಳೆದಿದ್ದರೆ, ಮತ್ತೊಂದೆಡೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಈಶ್ವರಪ್ಪ ನೀಡಿರುವ ಹೇಳಿಕೆ ಶಿವಮೊಗ್ಗ ನಗರ ಕ್ಷೇತ್ರದ ಮುಂದಿನ ರಾಜಕೀಯ ಸಮೀಕರಣಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: K S EshwarappaMLA ChannabasappaPolitical WarShivamoggaಕೆ.ಎಸ್. ಈಶ್ವರಪ್ಪಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗ
Share214Tweet134Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ಪರ್ಶ್ ಆಸ್ಪತ್ರೆ ಹೆಣ್ಣೂರಿಗೆ ಯಶಸ್ವಿ 1 ವರ್ಷ | ಉತ್ತರ ಬೆಂಗಳೂರಿನಲ್ಲಿ ಸಮಗ್ರ ಚಿಕಿತ್ಸೆಗೆ ಹೆಚ್ಚಿದ ಒಲವು

Next Post

ಸಾಗರದಲ್ಲಿ ವಿದ್ಯುತ್ ಹರಿಸಿ 2 ಜಿಂಕೆಗಳ ಬೇಟೆ: ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್

kalpa News

kalpa News

Next Post
sagar-deer-hunting-electric-shock-2-spotted-deer-killed

ಸಾಗರದಲ್ಲಿ ವಿದ್ಯುತ್ ಹರಿಸಿ 2 ಜಿಂಕೆಗಳ ಬೇಟೆ: ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL