No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಇಂದಿನ ಸುದ್ಧಿಗಳು ಇಲ್ಲಿದೆ ನೋಡಿ

kalpa News by kalpa News
February 22, 2023
in ಶಿವಮೊಗ್ಗ
0
ಶಿವಮೊಗ್ಗದ ಇಂದಿನ ಸುದ್ಧಿಗಳು ಇಲ್ಲಿದೆ ನೋಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಫೆ.27ರಂದು ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದ್ದು, ಇದು ಬಿಜೆಪಿ ಕಾರ್ಯಕ್ರಮವಾಗದೆ ಜಿಲ್ಲಾಡಳಿತದ ಕಾರ್ಯಕ್ರಮವಾಗಬೇಕು. ಪಕ್ಷಾತೀತವಾಗಿ ನಡೆಯಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್ ಆಗ್ರಹಿಸಿದ್ದಾರೆ.

ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಸ್ಥಾಪನೆಯಾಗಿರುವುದು ಮತ್ತು ಅದರ ಉದ್ಘಾಟನೆ ಆಗುತ್ತಿರುವುದು ಸಂತೋಷದ ವಿಷಯವೇ. ಆದರೆ ಈ ಕಾರ್ಯಕ್ರಮವನ್ನು ಬಿಜೆಪಿಯ ನಾಯಕರು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಲು ಹೊರಟಿದ್ದಾರೆ. ಇದಕ್ಕಾಗಿ ಈಗಾಗಲೇ ಬೂತ್ ಮಟ್ಟದಿಂದ ಜನರನ್ನು ಮತದಾನಕ್ಕೆ ಕರೆತರುವಂತೆ ಕರೆತರುತ್ತಿದ್ದಾರೆ. ಜಿಲ್ಲೆಯ ತುಂಬಾ ಮೂರು ಸಾವಿರ ಬಸ್‌ಗಳನ್ನು ಜನರನ್ನು ಕರೆತರಲೆಂದೇ ಬಿಟ್ಟಿದ್ದಾರೆ. ಜಿಲ್ಲಾಡಳಿತದಿಂದ ಆಗಬೇಕಾದ ಕಾರ್ಯಕ್ರಮ ಬಿಜೆಪಿ ಕಾರ್ಯಕರ್ತರಿಂದ ಆಗುತ್ತಿರುವುದು ಖಂಡನೀಯ ಎಂದರು.
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಾಗುತ್ತಿರುವುದು ಸ್ವಾಗತಾರ್ಹ. ಆದರೆ ಈ ಬಿಜೆಪಿಯವರು ಇದನ್ನೇ ಬಹುದೊಡ್ಡ ಸಾಧನೆಯೆಂದು ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಬಿಂಬಿಸಲು ಹೊರಟಿದ್ದಾರೆ. ಇದೇ ಶಿವಮೊಗ್ಗದಲ್ಲಿ ಕಾಂಗ್ರೆಸ್ ಆಡಳಿತದ ಕಾಲದಲ್ಲಿ ಬೇಕಾದಷ್ಟು ಅಭಿವೃದ್ಧಿ ಕಾಮಗಾರಿಗಳಾಗಿವೆ. ತುಂಗಾ ಅಣೆಕಟ್ಟು, ಭದ್ರಾ ಅಣೆಕಟ್ಟು, ಮೆಗ್ಗಾನ್ ಆಸ್ಪತ್ರೆ ಉನ್ನತೀಕರಣ, ಕುವೆಂಪು ವಿವಿ, ಕುವೆಂಪು ರಂಗಮಂದಿರ, ಪಶುಸಂಗೋಪನೆ, ನವೋದಯ ಶಿಕ್ಷಕಣ ಕೇಂದ್ರ ಹೀಗೆ ಹಲವು ಅಭಿವೃದ್ಧಿಗಳು ನಡೆದಿವೆ ಎಂದರು.

ಇಡೀ ದೇಶದಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಎಲ್ಲರಿಗೂ ಗೊತ್ತಿದೆ ಸ್ವಾತಂತ್ರ್ಯ ಬಂದಾಗ ದೇಶದ ಸ್ಥಿತಿ ಹೇಗಿತ್ತು ಎಂಬುದನ್ನು ಬಿಜೆಪಿಯವರು ಮರೆತಂತಿದೆ. ಕೈಗಾರಿಕಾ ಕ್ರಾಂತಿ, ಹಸಿರು ಕ್ರಾಂತಿ, ದೊಡ್ಡದೊಡ್ಡ ನೀರಾವರಿ ಯೋಜನೆಗಳು, ಸಂಪರ್ಕ ಕ್ರಾಂತಿ ಹೀಗೆ ಹಲವು ಕ್ರಾಂತಿಗಳೇ ಕಾಂಗ್ರೆಸ್ ಸರ್ಕಾರದಲ್ಲಿನಡೆದಿವೆ. ಕಾಂಗ್ರೆಸ್ ಹಾಕಿದ ಅಭಿವೃದ್ಧಿ ಎಂಬ ಭದ್ರ ತಳಪಾಯದಲ್ಲಿ ಇವರು ಕಳಪೆ ಮಟ್ಟದ ಕಟ್ಟಡ ಕಟ್ಟಲು ಹೊರಟಿದ್ದಾರೆ ಅಷ್ಟೆ ಎಂದು ವ್ಯಂಗ್ಯವಾಡಿದರು.

ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿದ ಕೀರ್ತಿ ಕಾಂಗ್ರೆಸ್‌ನದ್ದು. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಿದ ಅಪಕೀರ್ತಿ ಬಿಜೆಪಿಯವರದ್ದು. ಕಾರ್ಖಾನೆಗಳು ಮುಚ್ಚಿದವು. ಈಗ ಸರ್ಕಾರದ ಅಂಗ ಎಂದು ಹೇಳಿಕೊಳ್ಳುವ ಯಾವ ಸಂಸ್ಥೆಯೂ ಇಲ್ಲ. ಬಿಎಸ್‌ಎನ್‌ಎಲ್ ಸೇರಿದಂತೆ ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡಲು ಹೊರಟಿದೆ. ಈಗ ಭದ್ರಾವತಿಯ ವಿಐಎಸ್‌ಎಲ್ ಕೂಡ ಸೇರಿಕೊಂಡಿದೆ. ಸಂಸದರು, ಮುಖ್ಯಮಂತ್ರಿಗಳು ಪ್ರಧಾನಿಗೆ ಮನವಿ ಮಾಡಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚಲು ಬಿಡಬಾರದು ಎಂದರು.
ಕೇವಲ ವಿಮಾನ ನಿಲ್ದಾಣ ಆದರೆ ಮಾತ್ರ ಸಾಲದು. ಶಿವಮೊಗ್ಗ ಶಾಂತಿಯ ನಿಲ್ದಾಣವಾಗಬೇಕು. ಧರ್ಮದ ನಿಲ್ದಾಣವಾಗಬೇಕು. ಕೋಮುವಾದದ ನಿಲ್ದಾಣವಾಗಬಾರದು. ಉದ್ಯೋಗಗಳು ಸೃಷ್ಟಿಯಾಗಬೇಕು. ಉದ್ದಿಮೆದಾರರು ಬರಲು ಭಯದ ವಾತಾವರಣ ಇರಬಾರದು. ಆಗ ಮಾತ್ರ ವಿಮಾನ ನಿಲ್ದಾಣಕ್ಕೆ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಫೆ.೨೭ರಂದು ಉದ್ಘಾಟನೆಯಾಗಲಿರುವ ವಿಮಾನ ನಿಲ್ದಾಣವನ್ನು ಪಕ್ಷಾತೀತವಾಗಿ ಹಬ್ಬದಂತೆ ಆಚರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಇದು ಬಿಜೆಪಿ ಕಾರ್ಯಕ್ರಮ ಆಗಬಾರದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕರುಗಳಾದ ಕೆ.ಬಿ. ಪ್ರಸನ್ನಕುಮಾರ್, ಆರ್. ಪ್ರಸನ್ನಕುಮಾರ್, ಪ್ರಮುಖರಾದ ಎಸ್.ಪಿ. ದಿನೇಶ್, ಚಂದ್ರಭೂಪಾಲ್, ಇಕ್ಕೇರಿ ರಮೇಶ್, ಎ.ಬಿ. ಮಾರ್ಟಿಸ್, ಆನಂದರಾವ್ ಇದ್ದರು.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟಕವಿ ಕುವೆಂಪು ಹೆಸರು ಒಕ್ಕಲಿಗ ಮುಖಂಡರ ಸ್ವಾಗತ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟಕವಿ ಕುವೆಂಪು ಅವರ ಹೆಸರಿಡುವುದನ್ನು ಒಕ್ಕಲಿಗ ಮುಖಂಡರು ಸ್ವಾಗತಿಸಿದ್ದಾರೆ. ಮತ್ತು ಈ ಹೆಸರೇ ಅಂತಿಮವಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಸಮಾಜದ ಮುಖಂಡ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರ ಹೆಸರಿಡುವುದನ್ನು ನಾವು ಸ್ವಾಗತಿಸುತ್ತೇವೆ. ಈ ಮೊದಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿತ್ತು. ಆದರೆ ಯಡಿಯೂರಪ್ಪನವರು ತಮ್ಮ ಹೆಸರು ಬೇಡ. ಕುವೆಂಪು ಹೆಸರಿಡಿ ಎಂದು ಹೇಳಿರುವುದು ಅವರ ದೊಡ್ಡತನವಾಗಿದೆ. ಅದಕ್ಕಾಗಿ ಅಭಿನಂದನೆಗಳು ಎಂದರು.
ರಾಜ್ಯ ಸರ್ಕಾರ ಕುವೆಂಪು ಅವರ ಹೆಸರನ್ನು ಇಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ ಮೇಲೆಯೂ ವಿವಿಧ ಸಮಾಜದವರು ಬೇರೆ ಬೇರೆ ಹೆಸರಿಡಲು ಒತ್ತಾಯಿಸುತ್ತಿದ್ದಾರೆ. ಈ ಹೆಸರು ಬದಲಾಗಬಾರದು. ಕೇಂದ್ರ ಮತ್ತು ರಾಜ್ಯ ಸರ್ಕಾರ ಕುವೆಂಪು ಅವರ ಹೆಸರನ್ನೇ ಅಂತಿಮಗೊಳಿಸಬೇಕು. ಕೇವಲ ಹೆಸರಿಟ್ಟರೆ ಸಾಲದು. ಅಲ್ಲಿ ಕನ್ನಡ ಭಾಷೆಗೆ ಮನ್ನಣೆ ಸಿಗಬೇಕು. ಮೊದಲ ಆದ್ಯತೆ ಇರಬೇಕು ಎಂದರು.

ರೈತ ಮುಖಂಡ ಕೆ.ಟಿ. ಗಂಗಾಧರ್ ಮಾತನಾಡಿ, ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ. ಇಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಾಗುತ್ತಿರುವುದು ಸಂತೋಷದ ವಿಷಯವೇ ಆದರೆ ಇದರ ಹಿಂದೆ ವಿಮಾನ ನಿಲ್ದಾಣಕ್ಕಾಗಿ ಭೂಮಿ ತ್ಯಾಗ ಮಾಡಿದ ರೈತರನ್ನು ಮರೆಯಬಾರದು. ರೈತರು ಸುಮಾರು ೯೦೦ ಎಕರೆ ಜಮೀನನ್ನು ಬಿಟ್ಟುಕೊಟ್ಟಿದ್ದಾರೆ. ಇದರು ಬಗರ್‌ಹುಕುಂ ಸಾಗುವಳಿ ಅಥವಾ ಪಹಣಿ ಇರುವ ಜಮೀನೇ ಆಗಿರಬಹುದು. ಅವರಿಗೆ ಪರಿಹಾರ ಕೊಟ್ಟಿದ್ದಾರೆ ನಿಜ. ಆದರೆ ಸರ್ಕಾರದ ತೀರ್ಮಾನದಂತೆ ಅವರಿಗೆ ಪುನರ್ವಸತಿ ನೀಡಬೇಕು. ಯಾವ ಸಬೂಬು ಹೇಳದೆ, ವಿಳಂಬ ಮಾಡದೆ ಅವರಿಗೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಪಿ. ನಾಗರಾಜ್, ಶ್ರೀಕಾಂತ್, ಆಸಿತ್, ವಿಜಯಕುಮಾರ್, ಭಾರತೀ ರಾಮಕೃಷ್ಣ, ಸುಮಿತ್ರಾ ಕೇಶವಮೂರ್ತಿ ಮುಂತಾದವರಿದ್ದರು.
ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು: ಅಭಿನಂದನೆ

ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕುವೆಂಪುರವರ ಹೆಸರನ್ನು ನಾಮಕರಣ ಮಾಡಲು ಕಾರಣರಾದ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಹಾಗೂ ಜಿಲ್ಲೆಯ ಜನ ಪ್ರತಿನಿಧಿಗಳನ್ನು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಅಭಿನಂದಿಸಿದೆ.

ಕುವೆಂಪು ರವರು ಡಿ.ಲಿಟ್ ಪದವಿ ಪಡೆದಿದ್ದು, ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿಗಳಾಗಿದ್ದು, ಪಂಪ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಇಂತಹ ಹಲವಾರು ಗೌರವಗಳನ್ನು ಪಡೆದ ಕುವೆಂಪು ರವರ ಹೆಸರನ್ನು ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಲು ಮೊದಲು ಬಿ.ಎಸ್.ಯಡಿಯೂರಪ್ಪನವರು ನಿರ್ಧರಿಸಿ ಅದರಂತೆ ಬೊಮ್ಮಾಯಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವುದು ಐತಿಹಾಸಿಕ ಕ್ರಮವಾಗಿದೆ ಎಂದು ಟ್ರಸ್ಟ್ ಅಭಿನಂದನೆ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಮುಖಂಡರಾದ ಕಲ್ಲೂರು ಮೇಘರಾಜ್, ಹಾಗೂ ಪ್ರಮುಖರಾದ ಎಸ್.ವಿ.ರಾಜಮ್ಮ, ಡಾ.ನೇತ್ರಾವತಿ, ಆರ್.ಎ.ಚಾಬುಸಾಬ್, ಅಬ್ದುಲ್ ವಾಜೀದ್, ಎಲ್.ಆರ್.ಗೋಪಾಲಕೃಷ್ಣ, ಲಿಂಗರಾಜು, ಟಿ.ಆರ್.ಕೃಷ್ಣಪ್ಪ, ಸಿ.ಈರಪ್ಪ, ನಾಗರತ್ನ, ಸುರೇಶ್ ಕೋಟೆಕಾರ್, ಸಹನಾಮೂರ್ತಿ, ಶಂಕ್ರನಾಯ್ಕ್, ಶಕುಂತಲಾ, ನಳಿನಿ, ಜಯಮ್ಮ, ಬಸಮ್ಮ ಮೊದಲಾದವರಿದ್ದರು.
ಭೂ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಶಿವಮೊಗ್ಗ ತಾಲ್ಲೂಕಿನ ನಿದಿಗೆ ಹೋಬಳಿ, ಸೋಗಾನೆ ಗ್ರಾಮ ಸರ್ವೇ ನಂ.120ರಲ್ಲಿ ನಮ್ಮ ಹೆಸರಿನಲ್ಲಿ 24 ಎಕರೆ ಖಾತೆ ಮತ್ತು ಪಹಣಿಯಿದ್ದು, ನಡವಳಿಯಂತೆ ಪರಿಹಾರ ನೀಡುವವರೆಗೆ ಜಾಗ ಬಿಟ್ಟು ಕದಲಲ್ಲ ಎಂದು ಸೋಗಾನೆಯ ಬಿ.ಟಿ.ರವಿಕುಮಾರ್ ಮತ್ತು ಇತರರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿಯಾಗಿ ಭೂಮಿಯನ್ನು ವಶಪಡಿಸಿಕೊಂಡಿದ್ದು, ಶಾಸಕ ಕೆ.ಬಿ.ಅಶೋಕ್‌ನಾಯ್ಕ್ ಮತ್ತು ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭಾ ನಡವಳಿ ನಡೆಸಿದ್ದು, ಪ್ರತಿ ಎಕರೆಗೆ 40ಲಕ್ಷ ರೂ. ಮತ್ತು ಒಂದು ನಿವೇಶನವನ್ನು ಕೊಡುವುದಾಗಿ ಸಭೆಯಲ್ಲಿ ತೀರ್ಮಾನಿಸಿದ್ದರು. ನಮ್ಮಗಳ 24 ಎಕರೆ ವಶಪಡಿಸಿಕೊಳ್ಳಲು ಮುಂದಾದಾಗ ನಾವು ತಕರಾರು ವ್ಯಕ್ತಪಡಿಸಿದ್ದೆವು. ಆಗ ಪರಿಹಾರದ ಭರವಸೆಯನ್ನು ನೀಡಿದ್ದರು.

ಉಪವಿಭಾಗಾಧಿಕಾರಿಗಳು ನಮಗೆ ಪತ್ರವನ್ನು ಬರೆದು ಪ್ರಕರಣ ಸಂಖ್ಯೆ ಎಲ್‌ಎನ್‌ಡಿಸಿಆರ್ 450/2016-17 ದಿ.26.04.2022ರಂದು ಸರ್ಕಾರದ ಕಾರ್ಯದರ್ಶಿಗಳಿಗೆ ಈ ಜಮೀನು ಸಂಬಂಧ ಹಣ ಬಿಡುಗಡೆ ಮಾಡಲು ಮನವಿ ಸಲ್ಲಿಸಿದ ಮೇರೆಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಒಪ್ಪಿಗೆ ಸೂಚಿಸಿ 24 ಎಕರೆ ಜಮೀನಿಗೆ 10.54 ಕೋಟಿ ಬಿಡುಗಡೆ ಮಾಡಿರುತ್ತಾರೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ಪರಿಹಾರದ ಮೊತ್ತ 9.60 ಕೋಟಿ ರೂ. ಹಣವನ್ನು ಸಹ ಚೆಕ್ ಮುಖಾಂತರ ಬಿಡುಗಡೆಮಾಡಿದ್ದು ಕಂಡು ಬಂದಿದ್ದು, ಇದುವರೆಗೆ ಸಂತ್ರಸ್ತ ರೈತರ ಕುಟುಂಬಗಳಿಗೆ ಸಿಕ್ಕಿಲ್ಲ ಮತ್ತು ನಿವೇಶನವನ್ನು ನೀಡಿರುವುದಿಲ್ಲ.
ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಅನಿವಾರ್ಯವಾಗಿ ನಾವು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದು, ಕೂಡಲೇ ಭೂ ಪರಿಹಾರವನ್ನು ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಸಂತ್ರಸ್ತ ರೈತ ಕುಟುಂಬಗಳೊಂದಿಗೆ ರೈತ ಮುಖಂಡರಾದ ಕೆ.ಟಿ.ಗಂಗಾಧರ್, ತಿ.ನಾ.ಶ್ರೀನಿವಾಸ್, ಬಿ.ಟಿ. ರವಿಕುಮಾರ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share225Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.24ರಂದು ಜಲಸಂರಕ್ಷಣೆ ನಮ್ಮೆಲ್ಲರ ಹೊಣೆ ಕಾಲ್ನಡಿಗೆ ಜಾಥಾ

Next Post

ವಿಐಎಸ್’ಎಲ್ ಉಳಿಸಿ: ತಾಲೂಕು ಖಾಸಗಿ ಅನುದಾನರಹಿತ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

kalpa News

kalpa News

Next Post
ವಿಐಎಸ್’ಎಲ್ ಉಳಿಸಿ: ತಾಲೂಕು ಖಾಸಗಿ ಅನುದಾನರಹಿತ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ವಿಐಎಸ್'ಎಲ್ ಉಳಿಸಿ: ತಾಲೂಕು ಖಾಸಗಿ ಅನುದಾನರಹಿತ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL