ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿ ಎಸ್.ಕೆ. ದೀಕ್ಷಿತ್ ಅವರಿಗೆ 20 ಕರ್ನಾಟಕ ಬೆಟಾಲಿಯನ್ ಬೆಸ್ಟ್ ಎನ್’ಸಿಸಿ ಕ್ಯಾಡೆಟ್ ವಿಭಾಗದಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.
ಫೆ.07 ರಂದು ಬೆಂಗಳೂರಿನ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ನಲ್ಲಿ ನಡೆದ ಸಮಾರಂಭದಲ್ಲಿ ಪದಕ ಸ್ವೀಕರಿಸಿದ್ದಾರೆ.

ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post