ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಕ್ಕಳು ಸೇವಾ ಚಟುವಟಿಕೆಗಳಲ್ಲಿ ತೊಡಗಿದರೆ ದುಶ್ಚಟಗಳಿಂದ ದೂರವಿರಲು ಸಹಕಾರಿಯಾಗುತ್ತದೆ ಮತ್ತು ಈ ನಿಟ್ಟಿನಿಲ್ಲಿ ಪ್ರೌಢ ಶಾಲೆಗಳ ಮಕ್ಕಳಿಗೆ ಈ ಯೋಜನೆ ಪರಿಣಾಮಕಾರಿ ಅಳವಡಿಕೆ ಬಹಳ ಮೂಖ್ಯವಾಗಿದೆ ಎಂದು ಕುವೆಂಪು ವಿವಿ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಹೇಳಿದರು.

ರಾಷ್ಟೀಯ ಸೇವಾ ಯೋಜನಾ ಕೋಶ ಬೆಂಗಳೂರು ಮತ್ತು ಕುವೆಂಪು ವಿಶ್ವವಿದ್ಯಾಲಯ ರಾಷ್ಟೀಯ ಸೇವಾ ಯೋಜನೆ ವತಿಯಿಂದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರಿಗೆ, ಎನ್,ಎಸ್,ಎಸ್ ಅಧಿಕಾರಿಗಳಿಗೆ ರಾಷ್ಟೀಯ ಸೇವಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಕುರಿತು ಕುವೆಂಪು ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಲು ಒಳ್ಳೆಯ ವೇದಿಕೆಯನ್ನು ಒದಗಿಸಲಾಗುತ್ತದೆ ಹಾಗೂ ನಾವುಗಳು ಪ್ರತಿಯೊಂದು ಕಾರ್ಯವನ್ನು ಕಷ್ಟಪಟ್ಟು ಮಾಡದೆ ಇಷ್ಟ ಪಟ್ಟು ಮಾಡಿದರೆ ಯಶಸ್ಸು ಕಾಣಲು ಸಾಧ್ಯವಾಗುವುದೆಂದು ತಿಳಿಸಿದರು.

ರಾಜ್ಯ ಅನುಷ್ಠಾನಾಧಿಕಾರಿಗಳಾದ ಪ್ರೌಢ ಶಾಲೆ ವಿಭಾಗದ ಡಾ. ಪೂರ್ಣಿಮ ಜೋಗಿಯವರು ಈ ಯೋಜನೆಯ ಉದ್ದೇಶ ಸಾಕಾರಗೊಳಿಸಲು ಮನವಿ ಮಾಡಿದರು. ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಎನ್,ಎಸ್,ಎಸ್ ಸಹಕಾರಿಯಾಗಿದೆ ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಲು ತಿಳಿಸಿದರು ಮತ್ತು ಯಾವ ಯಾವ ಕಾರ್ಯಕ್ರಮಗಳನ್ನು ಮಾಡಬಹುವುದೆಂದು ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ವಿಘ್ನೇಶ್ವರಪ್ಪ ಮತ್ತು ಸೋಮಶೇಖರ್ ಉಪಸ್ಥಿತರಿದ್ದು ಮಾತನಾಡಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















