ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಠಿತ ಮಾನಸ ಇಂಟರ್ ನ್ಯಾಷನಲ್ ಐ ಸಿ ಎಸ್ ಇ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಏಳನೇ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.
ಭಾನುವಾರ ನಡೆದ ಈ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಿಂದ 300 ಕ್ಕೂ ಹೆಚ್ಚು ಚಿಣ್ಣರು ಭಾಗವಹಿಸಿದ್ದರು. ಕೋಟೆಂಗಂಗೂರಿನಲ್ಲಿರುವ ಶಾಲಾ ಆವರಣದಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಮಕ್ಕಳು ತಮ್ಮ ಪೋಷಕರೊಂದಿಗೆ ಭಾಗಿಯಾಗಿ ಪ್ರತಿಭಾ ಪ್ರದರ್ಶನ ಮೆರೆದರು.
ತೀರ್ಪುಗಾರರಾಗಿ ಭಾಗವಹಿಸಿದ್ದ ಅಶೋಕ್ ಬಿ ವಾಲಿಕಾರ ಅವರು, ಆರು ಹಂತಗಳಲ್ಲಿ ವಿಜೇತರನ್ನು ಆಯ್ಕೆ ಮಾಡಿದರು. ವಿಜೇತ ಮಕ್ಕಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು , ಜೊತೆಗೆ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಕಾರ್ಯದರ್ಶಿಗಳಾದ ಎಸ್ ಜನಾರ್ದನ್, ಪ್ರಾಂಶುಪಾಲರಾದ ಸೌಮ್ಯ ಕೆ.ವಿ. ಆಡಳಿತ ನಿರ್ವಾಹಕರಾದ ತಾರಾ ಪ್ರಕಾಶ್, ಶಿಕ್ಷಕರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















