ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿರಂಗ್ ಮತ್ತು ತಂತ್ರಜ್ಞಾನ ಶಿಕ್ಷಣ ಸಂಸ್ಥೆಯಲ್ಲಿ (ಸಿಪೆಟ್) CIPET ಮೂರು ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಸಂಸ್ಥೆಯ ಸಹಾಯಕ ತಾಂತ್ರಿಕ ಅಧಿಕಾರಿ ಲಕ್ಷ್ಮಣ್ ಹೇಳಿದರು.
ಅವರು ಇಂದು ಪ್ರೆಸ್ ಟ್ರಸ್ಟ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ರಸಾಯನ, ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯ ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಸಂಸ್ಥೆಯ ಅನುಮೋದನೆಯೊಂದಿಗೆ ಈ ಕೋರ್ಸುಗಳನ್ನು ಆರಂಭಿಸಲಾಗುತ್ತಿದೆ. ಈ ಕೋರ್ಸುಗಳನ್ನು ಪಡೆದವರಿಗೆ ಉದ್ಯೋಗ ಖಚಿತವಾಗಿದೆ ಎಂದರು.
ಸಾಮಾನ್ಯವಾಗಿ ಪ್ಲಾಸ್ಟಿಕ್ ಎಂದರೆ ಅಸಡ್ಡೆಯೇ ಜಾಸ್ತಿ. ಆದರೆ ಪ್ಲಾಸ್ಟಿಕ್ ಇಲ್ಲದೆ ಜೀವನವೇ ಇಲ್ಲ. ಪ್ರಸ್ತುತ ಪ್ಲಾಸ್ಟಿಕ್ ಉತ್ಪನ್ನಗಳಿಗೆ ತುಂಬಾ ಬೇಡಿಕೆ ಇದೆ. ಈ ಪ್ಲಾಸ್ಟಿಕ್ ಘಟಕಗಳನ್ನು ಸ್ಥಾಪನೆ ಹೇಗೆ, ಬಳಕೆ ಹೇಗೆ, ತ್ಯಾಜ್ಯ ಸಂಸ್ಕರಣೆಗೆ ಹೊಸ ತಂತ್ರಜ್ಞಾನದ ಮೂಲಕ ಹೇಗೆ ಪರಿಸರ ಮಾದರಿಯಲ್ಲಿ ಪ್ಲಾಸ್ಟಿಕ್ ಅನ್ನು ಮರುಬಳಕೆ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ಈ ತರಬೇತಿ ನೀಡಲಾಗುತ್ತದೆ. ಹಾಗಾಗಿ ಇದು ಉದ್ಯೋಗವನ್ನು ಕೂಡ ಸೃಷ್ಟಿ ಮಾಡುತ್ತದೆ. ಮುಖ್ಯವಾಗಿ ಡಿಪ್ಲಮೋ, ಇಂಜಿನಿಯರಿಂಗ್ ಓದದ ವಿದ್ಯಾರ್ಥಿಗಳು ಈ ಕೋರ್ಸುಗಳ ಮೂಲಕ ಕೌಶಲ್ಯ ಹೆಚ್ಚಿಸಿಕೊಂಡು ಸ್ವಾವಲಂಬಿಗಳಾಗಿ ಬದುಕಬಹುದು ಎಂದರು.
Also read: ಶಿವಮೊಗ್ಗ ನಗರದ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ: ನೂತನ ಶಾಸಕ ಚನ್ನಬಸಪ್ಪ
ಪ್ರಸ್ತುತ ಕೇಂದ್ರದಲ್ಲಿ ಬಿಎಸ್‌ಸಿ ಆದವರಿಗೆ ಎಂಎಸ್‌ಸಿ ಇನ್ ಫಾಲಿಮಾರ್ ಸೈನ್ಸ್ (2 ವರ್ಷ,) ಎಸ್‌ಎಸ್‌ಎಲ್‌ಸಿ ಪಾಸ್ ಆದವರಿಗೆ ಡಿಪ್ಲಮೋ ಇನ್ ಪ್ಲಾಸ್ಟಿಕ್ ಪ್ರೊಸೆಸಿಂಗ್ (3 ವರ್ಷ) ಡಿಪ್ಲಮೋ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ (3 ವರ್ಷ), ಡಿಪ್ಲಮೊ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ (3 ವರ್ಷ) ಹಾಗೆಯೇ ಡಿಪ್ಲಮೋ ೨ನೇ ವರ್ಷಕ್ಕೆ ಪಿಯುಸಿ ಆದವರು ನೇರ ಪ್ರವೇಶ ಪಡೆಯಬಹುದಾಗಿದೆ. ಪ್ರವೇಶ ಪರೀಕ್ಷೆ ಕೂಡ ನಡೆಯಲಿದ್ದು, ಬಹುಶಃ ಪರೀಕ್ಷೆ ಬರೆದ ಎಲ್ಲರಿಗೂ ಸೀಟುಗಳು ದೊರೆಯುತ್ತವೆ. ಇದ್ಕಕೆ ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನವಾಗಿದ್ದು, ಜೂನ್ 11ರಂದು ಪರೀಕ್ಷೆ ನಡೆಯಲಿದೆ. ಆಗಸ್ಟ್ ಮೊದಲ ವಾರದಲ್ಲಿ ತರಗತಿಗಳು ನಡೆಯಲಿವೆ ಎಂದರು.
ರಾಜ್ಯದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬಹುದು. ಸರ್ಕಾರದ ನಿಯಮಗಳಂತೆ ಹಾಸ್ಟೆಲ್ ಸೌಲಭ್ಯ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಲ, ಸೈಫಂಡ್ ಮುಂತಾದ ಸೌಲಭ್ಯಗಳು ದೊರೆಯಲಿದೆ ಎಂದರು.
ಹೆಚ್ಚಿನ ಮಾಹಿತಿಗೆ 94802 53024, 97914 31827ಗೆ ಸಂಪರ್ಕಿಸಬಹುದು. ಪತ್ರಿಕಾ ಗೋಷ್ಠಿಯಲ್ಲಿ ಸಹಾಯಕ ತಾಂತ್ರಿಕ ಅಧಿಕಾರಿ ಡಿ.ಎಲ್. ಶ್ರೀಧರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post