ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ವಿಧಿಸಲಾಗಿರುವ ಸೆಕ್ಷನ್ 144 ಅಡಿಯಲ್ಲಿನ ನಿಷೇಧಾಜ್ಞೆ ಹಾಗೂ ಮೂರು ಠಾಣಾ ವ್ಯಾಪ್ತಿಯಲ್ಲಿನ ಕರ್ಫ್ಯೂವನ್ನು ಡಿ.12ರವರೆಗೂ ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಡಿ.12ರ ಶನಿವಾರ ಮುಂಜಾನೆ 10 ಗಂಟೆಯವರೆಗೂ ನಿಷೇಧಾಜ್ಞೆಯನ್ನು ನಗರದಾದ್ಯಂತ ವಿಸ್ತರಣೆ ಮಾಡಲಾಗಿದ್ದು, ಈಗಾಗಲೇ ಜಾರಿಯಲ್ಲಿರುವಂತೆ ಮೂರು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಸಹ ಮುಂದುವರೆಯಲಿದೆ.
ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿದಿನ ಮುಂಜಾನೆ 7 ರಿಂದ 11 ಗಂಟೆಯವರೆಗೂ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ಮಾಡಿಕೊಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post