ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನೇರ ಪಾವತಿಯಡಿ ನೇಮಕಾತಿ ಮಾಡಿಕೊಳ್ಳುವ ತಮಗೆ ಸೇವಾ ಭದ್ರತೆ ಹಾಗೂ ರಜಾ ಸೌಲಭ್ಯ ಕಲ್ಪಿಸಬೇಕು ಎಂದು ನೂರಾರು ಪೌರ ಕಾರ್ಮಿಕರು ಸಂಸದ ಬಿ.ವೈ. ರಾಘವೇಂದ್ರ ಅವರಲ್ಲಿ ವಿನಂತಿಸಿಕೊಂಡರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಗಾಂಧಿ ಪಾರ್ಕ್‌ನಲ್ಲಿ ಪೌರ ಕಾರ್ಮಿಕರೊಂದಿಗೆ ಆಯೋಜಿಸಿದ್ದ ಸಂವಾದದಲ್ಲಿ ಅವರು ಸಂಸದರಲ್ಲಿ ವಿನಂತಿಸಿಕೊಂಡರು.
ನಮ್ಮನ್ನು ನೇರ ಪಾವತಿ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆದರೆ, ನಮಗೆ ಯಾವುದೇ ರೀತಿಯಲ್ಲೂ ಸೇವಾ ಭದ್ರತೆಯಿಲ್ಲ ಹಾಗೂ ರಜಾ ಸೌಲಭ್ಯವಿಲ್ಲ. ಹೀಗಾಗಿ, ನಮ್ಮಗಳ ಹಿತಕ್ಕಾಗಿ ಸೇವಾ ಭದ್ರತೆ ಹಾಗೂ ರಜಾ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.
ಪೌರ ಕಾರ್ಮಿಕರ ಮನವಿಗೆ ಸ್ಪಂದಿಸಿದ ಸಂಸದರು, ಇದು ಸ್ಥಳೀಯ ಮಟ್ಟದಲ್ಲಿ ಪರಿಹಾರವಾಗುವ ಸಮಸ್ಯೆಯಲ್ಲ. ಸದನದಲ್ಲಿ ಪ್ರಸ್ತಾಪ ಮಾಡಿ ಪರಿಹರಿಸಬೇಕಿದೆ. ಹೀಗಾಗಿ, ಈ ವಿಚಾರ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಮಾತನಾಡಿ, ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ, ಸ್ಬೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ಪ್ರಮುಖರಾದ ಚನ್ನಬಸಪ್ಪ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post