ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಮಹಾನಗರ ಪಾಲಿಕೆ ನೌಕರರ ಸಂಘದಿಂದ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಇಂದು ಮತ್ತು ನಾಳೆ ಕ್ರಿಕೆಟ್ ಪಂದ್ಯಾವಳಿಯನ್ನು #Cricket Tournament ಆಯೋಜಿಸಲಾಗಿದ್ದು ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಪಂದ್ಯಾವಳಿಯನ್ನು ಉದ್ಘಾಟಿಸಿದರು.
ಈ ಪಂದ್ಯಾವಳಿಯಲ್ಲಿ ನಗರ ನೀರು ಸರಬರಾಜು ಮಂಡಳಿಯ ಕಾರ್ಮಿಕರು, ಲೋಡರ್ಸ್, ಅನ್ ಲೋಡರ್ಸ್, ಸ್ವಚ್ಛತಾ ಕಾರ್ಮಿಕರು ಮತ್ತು ಆಡಳಿತ ಸಿಬ್ಬಂದಿ ಸೇರಿದಂತೆ ಒಟ್ಟೂ 8 ತಂಡಗಳು ಭಾಗವಹಿಸಿದ್ದವು. ಪ್ರತಿ ತಂಡವು ತಲಾ ಆರು ಓವರಿನ್ ಮ್ಯಾಚ್ ಇದಾಗಿದ್ದು ಕ್ರೀಡಾ ಪಟುಗಳು ಸಂಭ್ರಮದಿಂದ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಮಹಾವಿದ್ಯಾಲಯದ ಡೀನ್ ಡಾ.ತಿಪ್ಪೇಶ್, ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎನ್.ಗೋವಿಂದ, ಪಾಲಿಕೆ ಅಧಿಕಾರಿ ಅನುಪಮಾ ಸೇರಿದಂತೆ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post