ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನ ಎರಡನೆಯ ಅಲೆ ತೀವ್ರವಾಗುತ್ತಿದ್ದು, ದಿನೇ ದಿನೆ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶಿಕ್ಷಣ ಸಚಿವರು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯ ಕುರಿತು ಉದ್ಭವಿಸುತ್ತಿರುವ ಗೊಂದಲಗಳಿಗೆ ತೆರೆ ಎಳೆಯುವಂತೆ ರಾಜ್ಯ ನಾಗರಿಕರ ರಕ್ಷಣಾ ಸಮಿತಿ ಉಪಾಧ್ಯಕ್ಷ ಕೆ. ಶೇಖರ್ ಒತ್ತಾಯಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳ ಬಗ್ಗೆ ಯಾವುದೇ ದೃಢ ನಿರ್ಧಾರವನ್ನು ತೆಗೆದುಕೊಳ್ಳದೆ ಇರುವುದು ಮಕ್ಕಳಲ್ಲಿ ಆತಂಕವನ್ನುಂಟು ಉಂಟು ಮಾಡಿದ್ದು, ಕೆಲವು ದಿನಗಳ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಆನ್‌ಲೈನ್‌ನಲ್ಲಿ ನಡೆಯಲಿದೆ ಎಂದು ವೇಳಾಪಟ್ಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಅದನ್ನು ಕಂಡು ಪೋಷಕರು ವಿದ್ಯಾರ್ಥಿಗಳು ಪರೀಕ್ಷೆ ಇದೆಯೋ, ಇಲ್ಲವೋ ಎಂದು ಗೊಂದಲಕ್ಕೆ ಒಳಗಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಮತ್ತು ಕೊರೋನ ಎರಡನೆಯ ಅಲೆ ಮುಗಿಯುತ್ತಿದೆ ಎನ್ನುವಾಗಲೇ ತಜ್ಞರು ಮೂರನೆಯ ಅಲೆಯ ಆರಂಭದ ಸೂಚನೆಯನ್ನು ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತು ಇರುವ ಗೊಂದಲಕ್ಕೆ ತೆರೆ ಎಳೆಯಬೇಕೆಂದು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















