ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿವಿಧ ಕಾರ್ಯಕ್ರಗಳಲ್ಲಿ ಪಾಲ್ಗೊಳ್ಳುವ ನಿಮಿತ್ತ ಫೆ.8ರ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರಕ್ಕೆ ಆಗಮಿಸಲಿದ್ದಾರೆ.
ಮಧ್ಯಾಹ್ನ 12.15ಕ್ಕೆ ಬೆಂಗಳೂರು ಎಚ್’ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಡುವ ಮುಖ್ಯಮಂತ್ರಿಗಳು 1.35ಕ್ಕೆ ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್’ಗೆ ಆಗಮಿಸಲಿದ್ದಾರೆ.
1.45ಕ್ಕೆ ಎನ್’ಇಎಸ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.
Also read: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಅದ್ಧೂರಿ ಚಾಲನೆ
3.30ಕ್ಕೆ ಸರ್ಕ್ಯೂಟ್ ಹೌಸ್’ನಲ್ಲಿ ಭದ್ರಾವತಿ ವಿಐಎಸ್’ಎಲ್ ಕಾರ್ಖಾನೆಗೆ ಸಂಬAಧಿಸಿದAತೆ ನಿಯೋಗದ ಜೊತೆ ಸಭೆ ನಡೆಸಲಿದ್ದಾರೆ.
ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹೊರಟು 5.20ಕ್ಕೆ ಬೆಂಗಳೂರು ತಲುಪಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post