ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಿಎಂ, ಡಿಸಿಎಂ #CM-DCM ಬದಲಾವಣೆ ವಿಚಾರ ಬಗ್ಗೆ ನಾನು ಯಾವುದೇ ರೀತಿಯಲ್ಲೂ ರಿಯಾಕ್ಟ್ ಮಾಡುವುದಿಲ್ಲ ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ #Madhu Bangarappa ಹೇಳಿದರು.
ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ನಾವು ಹೈಕಮಾಂಡ್ ನಿಯಮಗಳನ್ನು ಪಾಲಿಸುತ್ತೇವೆ. ಸಿಎಂ ಬದಲಾವಣೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ನಿನ್ನೆ ಜನ ಸ್ಪಂದನಾ ಕಾರ್ಯಕ್ರಮ ಚೆನ್ನಾಗಿ ನಡೆದಿದೆ. ಶಿವಮೊಗ್ಗ ಸಿಟಿ ಸಮಸ್ಯೆ ಜಾಸ್ತಿ ಇತ್ತು. ಅಧಿಕಾರಿಗಳು ಜನರ ಸಮಸ್ಯೆ ಬಗೆಹರಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.

Also read: ಕಾರ್ಕಳ | ಕ್ರೈಸ್ಟ್ಕಿಂಗ್ | ಪ್ರಾಥಮಿಕ, ಪ್ರೌಢಶಾಲಾ ವಿಭಾಗದ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ
ಬೆಲೆ ಏರಿಕೆ ಬಗ್ಗೆ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಕುರಿತು ಪ್ರತಿಕ್ರಿಸಿದ ಸಚಿವರು, ಬಿಜೆಪಿಯವರಿಗೆ ಪ್ರತಿಭಟನೆ ಮಾಡುವ ಹಕ್ಕು ಅವರಿಗಿದೆಯಾ? ಅವರ ಸರ್ಕಾರದಲ್ಲಿ ಎಷ್ಟೆಲ್ಲ ಬೆಲೆ ಹೆಚ್ಚಳವಾಗಿದೆ. ಒಮ್ಮೆ ಗಮನಿಸಲಿ ಎಂದು ತಿರುಗೇಟು ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post