ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಜ್ವಲ್ ರೇವಣ್ಣ #Prajwal Revanna ಪ್ರಕರಣದಲ್ಲಿ ಎಸ್‍ಐಟಿ ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ #Araga Gnanendra ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಎಸ್‍ಐಟಿಯಲ್ಲಿ ಒಳ್ಳೆಯ ಅಧಿಕಾರಿಗಳಿದ್ದಾರೆ. ಆದರೆ ಅವರಿಗೆ ಫ್ರೀ ಹ್ಯಾಂಡ್ ಕೊಟ್ಟಿಲ್ಲ. ಸಿಎಂ, ಡಿಸಿಎಂ ಹೇಳಿದ ಹಾಗೆ ಅವರು ಒತ್ತಡಕ್ಕೆ ಒಳಗಾಗಿ ಕೆಲಸ ಮಾಡುತ್ತಿದ್ದಾರೆ. ಸಂತ್ರಸ್ತ ಮಹಿಳೆಯರ ಮಾನ ಹರಾಜಾಕುವ ಕೆಲಸ ಮಾಡುತ್ತಿದ್ದಾರೆ. ಇದು ಹಳೆಯ ಪ್ರಕರಣ. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಇದ್ದಾಗಲೇ ಈಗಿನ ಸಿಎಂ, ಡಿಸಿಎಂಗೆ ಅರಿವಿತ್ತು. ಆಗ ಸುಮ್ಮನಿದ್ದ ಇವರು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಎನ್.ಡಿ.ಎ. ಮೈತ್ರಿಕೂಟಕ್ಕೆ ಹಾನಿ ಮಾಡುವ ಉದ್ದೇಶದಿಂದ ಚುನಾವಣೆಯ ಮುನ್ನಾ ದಿನ ಸಾವಿರಾರು ಪೆನ್‍ಡ್ರೈವ್ ಗಳನ್ನು ಹಂಚಿ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ದೂರಿದರು.

Also read: ನಾಳೆ SSLC ರಿಸಲ್ಟ್ | ಫಲಿತಾಂಶ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ
ಈ ಪ್ರಕರಣದ ಹಿಂದೆ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ #D K Shivakumar ಭಾಗಿಯಾಗಿದ್ದಾರೆ. ನೈಜ ಅಪರಾಧಿಗಳನ್ನು ರಕ್ಷಿಸಲಾಗುತ್ತಿದೆ. ಪೆನ್ ಡ್ರೈವ್ ಹಂಚುವುದು ಮತ್ತು ಮಹಿಳೆಯರ ಬಗ್ಗೆ ಅಪಪ್ರಚಾರ ಮಾಡುವುದು ಕೂಡ ಶಿಕ್ಷಾರ್ಹ ಅಪರಾಧ. ಮಲೇಷ್ಯಾದಲ್ಲಿ ಪೆನ್ ಡ್ರೈವ್ ಗಳು ತಯಾರಾಗಿವೆ ಎಂಬ ಮಾತು ಕೇಳಿ ಬರುತ್ತಿದ್ದು, ಈ ಪ್ರಕರಣದ ಕಬಂಧಬಾಹುಗಳು ದೇಶ ವಿದೇಶಗಳಲ್ಲಿ ಹರಡಿರುವುದರಿಂದ ಮತ್ತು ಇದೊಂದು ಅತ್ಯಂತ ದೊಡ್ಡ ಪ್ರಕರಣವಾಗಿರುವುದರಿಂದ ಕೂಡಲೇ ಸಿಬಿಐಗೆ ಒಪ್ಪಿಸುವುದು ಸೂಕ್ತ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post