ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ಎರಡನೆ ಅಲೆ ಲಾಕ್‌ಡೌನ್ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.
ಜೂನ್ 11ರಂದು ಬೆಳೆಗ್ಗೆ 11ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಹೊರಡಲಿರುವ ಅವರು ಹಾಸನಕ್ಕೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 12:45ಕ್ಕೆ ಹಾಸನದಿಂದ ಹೊರಟು ಶಿಕಾರಿಪುರಕ್ಕೆ ಆಗಮಿಸಲಿರುವ ಅವರು, ಸಂಜೆ 4ಗಂಟೆಗೆ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಶಿಕಾರಿಪುರದಲ್ಲೇ ಅಂದು ವಾಸ್ತವ್ಯ ಮಾಡಲಿದ್ದಾರೆ.
ಜೂನ್ 12ರಂದು ಶಿಕಾರಿಪುರದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದು, ಸಂಜೆ 4 ಗಂಟೆಗೆ ರಸ್ತೆ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.
ಜಿಲ್ಲಾ ಕೋವಿಡ್-19 ಹಾಗೂ ಕೆರೆ ಅಭಿವೃದ್ಧಿ ವಿಷಯಗಳ ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಿರುವ ಮುಖ್ಯಮಂತ್ರಿಗಳು ನಂತರ ಶಿಕಾರಿಪುರಕ್ಕೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ.
ಜೂನ್ 13ರ ಬೆಳಗ್ಗೆ 11ಗಂಟೆಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post