ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 (ಕೊರೊನಾ ವೈರಸ್) ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಶಿವಮೊಗ್ಗ, ಬಳ್ಳಾರಿ, ಬೆಳಗಾವಿ ಮತ್ತು ಮೈಸೂರು ಜಿಲ್ಲೆಯ ಕೆಲ ಗ್ರಾಮಪಂಚಾಯತಿ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಅವರೊಂದಿಗೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕೈಗೊಂಡ ಕ್ರಮಗಳನ್ನು ವಿವರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post