No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Thursday, November 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಮೆಗ್ಗಾನ್‌ನಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ: ಇಲ್ಲಿದೆ ಮಾಹಿತಿ

kalpa News by kalpa News
February 28, 2023
in ಶಿವಮೊಗ್ಗ
0
ಶಿವಮೊಗ್ಗದ ಮೆಗ್ಗಾನ್‌ನಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ: ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹುಟ್ಟಿನಿಂದಲೇ ಬರುವ ಕಿವುಡುತನಕ್ಕೆ ಅತ್ಯಾಧುನಿಕವಾದ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಮೊಟ್ಟಮೊದಲ ಬಾರಿಗೆ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲ್ಲಿಇಂದಿನಿಂದ ಪ್ರಾರಂಭಿಸಲಾಗಿದೆ ಎಂದು ಇಎನ್‍ಟಿ ವಿಭಾಗದ ಮುಖ್ಯಸ್ಥ ಡಾ.ಕೆ.ಎಸ್. ಗಂಗಾಧರ ಮಾಹಿತಿ ನೀಡಿದ್ದಾರೆ.

ಪ್ರತಿ ಸಾವಿರ ಜನನ ಪ್ರಮಾಣಕ್ಕೆ ಎರಡು ಮಕ್ಕಳು ಹುಟ್ಟುವಾಗಲೇ ಕಿವುಡು ಉಂಟಾಗಿರುತ್ತದೆ ಇದರಲ್ಲಿ ಒಂದು ಮಗುವಿನ ಕಿವುಡುತನ ಅಲ್ಪ ಪ್ರಮಾಣದಲ್ಲಿದ್ದು ಅದನ್ನು ವಿವಿಧ ಸುಲಭ ಚಿಕಿತ್ಸೆ, ಹಿಯರಿಂಗ್ ಏಡ್ ಅಥವಾ ಶ್ರವಣ ಸಾಧನಗಳನ್ನು ಬಳಸಿ ಪುನಶ್ಚೇತನಗೊಳಿಸಬಹುದು. ಆದರೆ ಹುಟ್ಟುವಾಗಲೇ ಸಂಪೂರ್ಣ ಕಿವುಡುತನ ಇರುವ ಮಕ್ಕಳಿಗೆ ಕಿವಿಯ ಒಳಗಡೆ ಇರುವ ಶ್ರವಣಕ್ಕೆ ಸಂಬಂಧಿಸಿದ ನರಗಳು ಕೆಲಸ ಮಾಡುವುದಿಲ್ಲ. ಆದ್ದರಿಂದ ಇವರಿಗೆ ಶ್ರವಣ ಸಾಧನ ಕೆಲಸ ಮಾಡುವುದಿಲ್ಲ. ಇಂತಹ ಮಕ್ಕಳಿಗೆ ವರದಾನವಾಗಿ ಬಂದಿರುವುದು ಈ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯಾಗಿದೆ. ಈ ಶಸ್ತ್ರಚಿಕಿತ್ಸೆ ದುಬಾರಿಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯಡಿ ಈ ಚಿಕಿತ್ಸೆಯನ್ನು ಸೇರಿಸಿದ್ದು ಇದನ್ನು ಸಂಪೂರ್ಣ ಉಚಿತವಾಗಿ ಮಾಡಲಾಗುವುದು.
ಈ ಚಿಕಿತ್ಸೆ ಮುಖ್ಯ ಸಮಸ್ಯೆ ಎಂದರೆ ಇದಕ್ಕೆ ಸುಮಾರು ರೂ. 10 ರಿಂದ 12 ಲಕ್ಷ ಖರ್ಚಾಗುತ್ತದೆ. ಎಲ್ಲರಿಗೂ ಇದನ್ನು ಭರಿಸಲು ಸಾಧ್ಯವಾಗುವುದಿಲ್ಲ. ಈ ಹಿಂದೆ ಕೇಂದ್ರ ಸರ್ಕಾರ ಎಡಿಐಪಿ ಯೋಜನೆಯಡಿ ಇದರ ವೆಚ್ಚ ಭರಿಸುತ್ತಿದ್ದರೂ ಹೆಚ್ಚಿನ ಪ್ರಮಾಣದ ಅನುದಾನ ದೊರೆಯುತ್ತಿರಲಿಲ್ಲ. ರಾಷ್ಟ್ರೀಯ ಕಿವುಡುತನ ನಿರ್ಮೂಲನಾ ಮತ್ತು ನಿಯಂತ್ರಣ ಯೋಜನೆಯ ಕಾರಣದಿಂದ ನಮ್ಮ ಸಂಸ್ಥೆಯಲ್ಲಿ ಕಿವುಡುತನದ ಬಗ್ಗೆ ಸಾಕಷ್ಟು ಅರಿವು ಮೂಡಿದೆ. ಈ ಯೋಜನೆಯ ಕಾರಣದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವಾಕ್ ಶ್ರವಣ ಕೇಂದ್ರ ಪ್ರಾರಂಭಿಸಲಾಗಿದೆ. ಮತ್ತು ಹುಟ್ಟುವ ಎಲ್ಲಾ ಮಕ್ಕಳಿಗೆ ಅತ್ಯಾಧುನಿಕ ತಂತ್ರಜ್ಞಾನದಿಂದ ಕಿವುಡುತನ ತಪಾಸಣೆ ಮಾಡಲಾಗುತ್ತಿದೆ.

ಈ ವರ್ಷ ರಾಜ್ಯದಲ್ಲಿ 500 ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಮಾಡುವ ಗುರಿಯನ್ನು ಹೊಂದಲಾಗಿದೆ. ಈ ಯೋಜನೆಯಡಿ ಶಸ್ತ್ರಚಿಕಿತ್ಸೆಗೆ ಮುಂಚಿನ ತಪಾಸಣೆ, ಕಾಕ್ಲಿಯರ್ ಇಂಪ್ಲಾಂಟ್ ಸಾಧನ, ಶಸ್ತ್ರಚಿಕಿತ್ಸೆ ಮತ್ತು ನಂತರದ ವಾಕ್‍ಶ್ರವಣ ಪುನಶ್ಚೇತನ ಚಿಕಿತ್ಸೆ ಇವೆಲ್ಲವೂ ಉಚಿತವಾಗಿರುತ್ತದೆ. ಹಾಗೂ ವಾಕ್‍ಶ್ರವಣ ಪುನಶ್ಚೇತನ ಚಿಕಿತ್ಸೆ ಕ್ಲಿಷ್ಟಕರವಾಗಿದ್ದು ಇದು 8 ರಿಂದ 10 ತಿಂಗಳು ಹಿಡಿಯುತ್ತದೆ.
ಕಳೆದ 50 ರಿಂದ 60 ವರ್ಷಗಳಿಂದ ಇದರ ಬಗ್ಗೆ ನಿರಂತರವಾಗಿ ಸಂಶೋಧನೆಗಳು ನಡೆದಿದ್ದರೂ, 15 ರಿಂದ 20 ವರ್ಷಗಳಿಂದೀಚಿಗೆ ಇದು ಚೆನ್ನಾಗಿ ಅಭಿವೃದ್ದಿಯಾಗಿದೆ. ಭಾರತದಲ್ಲಿ ಕಳೆದ 10 ವರ್ಷಗಳಿಂದ ಇದು ಜನಪ್ರಿಯವಾಗಿದೆ. ಅನೇಕ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಮಾಡಿರುವ ಮತ್ತು ಅನೇಕ ಅತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಮೆಗ್ಗಾನ್ ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗಕ್ಕೆ ಈ ಶಸ್ತ್ರಚಿಕಿತ್ಸೆಯ ಅವಕಾಶ ಹೆಮ್ಮೆಯ ಗರಿಯಾಗಿದೆ.

ಈ ಶಸ್ತ್ರಚಿಕಿತ್ಸೆಯನ್ನು ಕರ್ನಾಟಕದ ಖ್ಯಾತ ಕಾಕ್ಲಿಯರ್ ಇಂಪ್ಲಾಂಟ್ ಸರ್ಜನ್ ಮತ್ತು ಕಿವಿ ಮೂಗು ಗಂಟಲು ತಜ್ಞರ ರಾಷ್ಟ್ರೀಯ ಅಧ್ಯಕ್ಷರಾಗಿರುವ ಬೆಂಗಳೂರಿನ ಡಾ.ಶಂಕರ್ ಮೆಡಿಕೇರಿಯವರು ನೆರವೇರಿಸಿದ್ದು, ಅವರ ಮಾರ್ಗದರ್ಶನದಲ್ಲಿ ಪ್ರಾಧ್ಯಾಪಕ ಡಾ.ಕೆ.ಎಸ್.ಗಂಗಾಧರ, ಸಹ ಪ್ರಾಧ್ಯಾಪಕ ಡಾ.ಶ್ರೀಧರ್ ಎಸ್ ಮತ್ತು ಸೀನಿಯರ್ ರೆಸಿಡೆಂಟ್ ಡಾ.ಹಂಸ ಎಸ್ ಶೆಟ್ಟಿ ಇವರನ್ನು ತರಬೇತುಗೊಳಿಸಲಾಗುತ್ತಿದೆ. ಇನ್ನು ಮುಂದೆ ನಿರಂತರವಾಗಿ ಆಸ್ಪತ್ರೆಯಲ್ಲಿ ಕಾಕ್ಲಿಯಾರ್ ಇಂಪ್ಲಾಂಟ್ ಚಿಕಿತ್ಸೆಯು ಪ್ರಾರಂಭವಾಗಿದ್ದು ಮಾರ್ಚ್ ತಿಂಗಳಲ್ಲಿ ಇನ್ನೂ ಮೂರು ಶಸ್ತ್ರಚಿಕಿತ್ಸೆ ಮಾಡುವ ಗುರಿ ಹೊಂದಲಾಗಿದೆ ಎಂದು ಮೆಗ್ಗಾನ್ ಜಿಲ್ಲಾ ಬೋಧನಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್ ಎಸ್ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಿದ್ದನಗೌಡ ಪಾಟಿಲ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಿಸಿಕೊಂಡು ಸಂಶೋಧನೆಯಲ್ಲಿ ತೊಡಗಿ

Next Post

ಮಲೆನಾಡಿನಲ್ಲಿ ತಲೆಎತ್ತಲಿದೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ

kalpa News

kalpa News

Next Post
ಭ್ರಷ್ಟರ ರಕ್ಷಣೆಗೆ ಕಾಂಗ್ರೆಸ್ ನಾಯಕರ ಪ್ರಯತ್ನ: ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ

ಮಲೆನಾಡಿನಲ್ಲಿ ತಲೆಎತ್ತಲಿದೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ

Leave a Reply Cancel reply

Your email address will not be published. Required fields are marked *

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL