ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪತ್ರಕರ್ತರಿಗೆ ರೈಲ್ವೆ ರಿಯಾಯಿತಿ, ಆನ್ಲೈನ್ ಬುಕಿಂಗ್ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ರಾಜ್ಯ ಸಚಿವ ಭರವಸೆ ನೀಡಿದರು.
ಸಂಘದ ವತಿಯಿಂದ ನೀಡಲಾದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ವಾರ್ತಾ ಸಚಿವ ಅಶ್ವಿನ್ ವೈಷ್ಣವ್, #Ashwin Vaishnav ರೈಲ್ವೆ ಸಚಿವರು ಸೇರಿದಂತೆ ಸಂಬಂದಿಸಿದ ಸಚಿವರನ್ನು ಭೇಟಿ ಮಾಡಿ ಗಮನ ಸೆಳೆಯಲಾಗುವುದು ಎಂದರು.
ನೂತನ ಜಾಹೀರಾತು ನೀತಿ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲಿ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದ ಅವರು, ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರ ಹಿತ ಕಾಯಲು ಬದ್ಧ ಎಂದರು.
ಸಂಘದ ಜಿಲ್ಲಾಧ್ಯಕ್ಷ ವೈದ್ಯನಾಥ್ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ, ಕಾರ್ಯದರ್ಶಿ ಸೋಮನಾಥ್, ದೀಪಕ್ ಸಾಗರ್, ಸತ್ಯನಾರಾಯಣಪ್ಪ, ಮಂಜುನಾಥ್ ಸೇರಿದಂತೆ ಪತ್ರಕರ್ತರು, ಪತ್ರಿಕಾ ಛಾಯಾಗ್ರಾಹಕರು, ವಿದ್ಯುನ್ಮಾನ ಮಾಧ್ಯಮ ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















