ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಾಸಕ ರೇಣುಕಾಚಾರ್ಯ ಸೋದರನ ಪುತ್ರನ ಸಾವಿನ ಸುದ್ದಿ ಆಘಾತ ತಂದಿದೆ. ಮೇಲ್ನೋಟಕ್ಕೆ ಕೊಲೆ ಎಂದು ಕಾಣಿಸುತ್ತಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಚಾರ್ಯ ಸೋದರನ ಮಗ ಚಂದ್ರಶೇಖರ್ ದಾರುಣ ಸಾವಿನ ಬಗ್ಗೆ ಈಗಾಗಲೇ ಗೃಹ ಸಚಿವರ ಜೊತೆ ಮಾತನಾಡಿದ್ದೇನೆ. ಈ ಪ್ರಕರಣದ ಸಂಬಂಧ ಸಮಗ್ರ ತನಿಖೆ ಮಾಡಿಸುತ್ತೇವೆ. ಶೀಘ್ರದಲ್ಲೇ ಸತ್ಯ ಗೊತ್ತಾಗಲಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post