ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿನಾಯಕ ನಗರದ ಮಲ್ನಾಡ್ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ Malnad Prasad Super Speciality Eye Hospital ಮತ್ತು ಕುವೆಂಪು ವಿವಿ Kuvempu University ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ನೇತ್ರ ತಜ್ಞರಾದ ಡಾ. ಬಾಲಚಂದ್ರ ತೆಗ್ಗಿಹಳ್ಳಿ ಹಾಗೂ ಅವರ ಸಿಬ್ಬಂದಿ ನೇತ್ರ ತಪಾಸಣೆ ಮಾಡಿ ಸೂಕ್ತ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ನಿರ್ದೇಶಕರಾದ ಡಾ. ಅಪರ್ಣ ಉಪಸ್ಥಿತರಿದ್ದರು.
ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ನಾಗರಾಜ ಪರಿಸರ ಇಂತಹ ಉಚಿತ ಶಿಬಿರಗಳನ್ನು ಮಾಡುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಮಲ್ನಾಡ್ ಪ್ರಸಾದ್ ನೇತ್ರಾಲಯದ ವೈದ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಕುವೆಂಪು ವಿವಿ ವತಿಯಿಂದ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದರು.
Also read: Revolutionising Women’s Health with the Launch of AI-Led Fertility Centre in Bangalore
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post