ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೈನ್ ಪಬ್ಲಿಕ್ ಶಾಲೆಯ ಐಕ್ಯ ಇಂಟ್ರಾಕ್ಟ್ ಕ್ಲಬ್ ಮತ್ತು ರೋಟರಿ ಕ್ಲಬ್ ನ ಸಹಯೋಗದೊಂದಿಗೆ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿದಲ್ಲಿ 39 ಮಂದಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಶಿಬಿರದಲ್ಲಿ ಪೋಷಕರು ಹಾಗೂ ಶಾಲಾ ಸಿಬ್ಬಂದಿಗಳು ರಕ್ತದಾನ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ರಕ್ತದಾನ ಮಹಾದಾನ ಎಂಬ ಸಂದೇಶ ಸಾರಿದರು.
ಶಿಬಿರದ ನಂತರ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ರಕ್ತ ನೀಡಿದ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು, ಆಡಳಿತ ವರ್ಗ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















