ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷ ತಮ್ಮನ್ನು ಗುರುತಿಸಿ ಟಿಕೆಟ್ ಕೊಟ್ಟಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಬಹಳಷ್ಟು ದಿನದಿಂದ ಪ್ರಾಮಾಣಿಕವಾಗಿ ಪಕ್ಷದ ಪರ ಕೆಲಸ ಮಾಡುತ್ತಿದ್ದೆ. ಪಕ್ಷ ಈ ಸಂದರ್ಭದಲ್ಲಿ ನನ್ನನ್ನು ಗುರುತಿಸಿದೆ. ಕೆ.ಎಸ್. ಈಶ್ವರಪ್ಪ KSEshwarappa ಅವರು ನಮ್ಮನ್ನು ಬೆಳೆಸಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಂದರು.
ಕಾರ್ಯಕರ್ತರು ಬಹಳ ಸಂತೋಷದಿಂದ ಇದ್ದಾರೆ. ಕಾರ್ಯಕರ್ತರ ಪರಿಶ್ರಮದ ಪರಿಣಾಮ ತಮಗೆ ಟಿಕೇಟ್ ದೊರೆತಿದೆ. ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ. ವಾಜಪೇಯಿ ಅವರ ಮಾತುಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ. ಈ ಬಾರಿ ಅನೇಕ ಮಂದಿ ಆಕಾಂಕ್ಷಿಗಳಿದ್ದರು. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಸಿಕ್ಕಿದ್ದರಿಂದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೆ ಖುಷಿಯಾಗಿದೆ. ಆಕಾಂಕ್ಷಿಗಳೆಲ್ಲರೂ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post