ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಲವಾರು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನರಾರಂಭಕ್ಕೆ ಅವಿರತ ಶ್ರಮ ವಹಿಸಿ ಬದ್ಧತೆಯಿಂದ ಜವಾಬ್ದಾರಿ ನಿರ್ವಹಿಸಿದ ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ MP Raghavendra ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ Chamber of Commerce ಅಭಿನಂದನೆ ಸಲ್ಲಿಸಿದ್ದಾರೆ.
ಮುಚ್ಚಿ ಹೋಗಲಿದ್ದ ಕಾರ್ಖಾನೆಯು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಕೊನೆಗೂ ಫಲ ಸಿಕ್ಕಿದೆ. ನಿರಂತರ ಅನೇಕ ವರ್ಷಗಳಿಂದ ಕೇಂದ್ರದ ಸಚಿವರನ್ನು ಭೇಟಿ ಮಾಡಿ ಕಾರ್ಖಾನೆ ಆರಂಭಕ್ಕೆ ಬೇಕಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಕೈಗಾರಿಕೆಗೆ ಪ್ರಾಮುಖ್ಯತೆ ನೀಡಿದ ಪರಿಣಾಮ ಕಾರ್ಖಾನೆ ಪುನರ್ ಆರಂಭವಾಗುತ್ತಿದೆ.
ಲೋಕಸಭೆ ಸದಸ್ಯರ ಪ್ರಯತ್ನದಿಂದ ಶಿವಮೊಗ್ಗ ವಿಮಾನ ನಿಲ್ದಾಣವು ಆರಂಭಗೊಂಡಿದೆ. ಇದೇ ತಿಂಗಳಿನಿಂದಲೇ ವಿಮಾನ ಕಾರ್ಯಾಚರಣೆಯು ಸೇವೆ ಪ್ರಾರಂಭವಾಗಲಿದೆ. ಶಿವಮೊಗ್ಗ ಜಿಲ್ಲೆಯ ಕೈಗಾರಿಕೆ ಹಾಗೂ ಉದ್ಯಮದ ದೃಷ್ಠಿಯಿಂದ ಮಹತ್ತರ ಪ್ರಯೋಜನ ಸಿಗಲಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳು ಸ್ಥಾಪಿಸಲು ಪೂರಕ ವಾತಾವರಣವಿದ್ದು, ಹೊಸ ಕೈಗಾರಿಕೆಗಳನ್ನು ಶಿವಮೊಗ್ಗ ಜಿಲ್ಲೆಗೆ ತರುವುದರ ಮುಖಾಂತರ ಆರ್ಥಿಕ ಸದೃಢತೆಗೆ ಸಹಕರಿಸಬೇಕು. ದೇವಕಾತಿಕೊಪ್ಪದ ಕೈಗಾರಿಕಾ ವಸಾಹತು ಸಿದ್ಧಗೊಂಡಿದ್ದು, ಕೈಗಾರಿಕೆ ಪ್ರಾರಂಭಿಸಲು ಬೇಕಾಗಿರುವ ಅವಶ್ಯಕತೆಗಳನ್ನು ಪೂರೈಸಬೇಕು. ಕೈಗಾರಿಕೆ ಸ್ಥಾಪಿಸಲು ಅನುಕೂಲ ಮಾಡಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಹಾಗೂ ಪದಾಧಿಕಾರಿಗಳು ವಿನಂತಿಸಿದ್ದಾರೆ.
Also read: ಶರಾವತಿ ಮುಳುಗಡೆ ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆ: ಕೇಂದ್ರದೊಂದಿಗೆ ಸಂಸದ ರಾಘವೇಂದ್ರ ಚರ್ಚೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post