No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉದ್ಯೋಗಖಾತ್ರಿ ಯೋಜನೆ ಹೆಸರು ಬದಲಾವಣೆ ನಿರ್ಧಾರ ಖಂಡಿಸಿ ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

kalpa News by kalpa News
January 20, 2026
in ಶಿವಮೊಗ್ಗ
0
ಉದ್ಯೋಗಖಾತ್ರಿ ಯೋಜನೆ ಹೆಸರು ಬದಲಾವಣೆ ನಿರ್ಧಾರ ಖಂಡಿಸಿ ಕಾಂಗ್ರೆಸ್ ಉಪವಾಸ ಸತ್ಯಾಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ (ಮನರೇಗಾ)ಹೆಸರು ಬದಲಾಯಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ನರೇಗಾ ಯೋಜನೆಯನ್ನೇ ಪುನರ್ ಸ್ಥಾಪಿಸಲು ಆಗ್ರಹಿಸಿ ಇಂದು ನಗರದ ಗಾಂಧಿಪಾರ್ಕಿನಲ್ಲಿ ಗಾಂಧಿಪ್ರತಿಮೆಯ ಬಳಿ ಜಿಲ್ಲಾ ಕಾಂಗ್ರೆಸ್‍ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಪ್ರತಿಭಟನಾ ಸಭೆ ನಡೆಸಿ, ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದರು. ಜನರಿಗೆ ಕೆಲಸ ನೀಡಿ, ಅವರುಗಳು ಜೀವನೋಪಾಯಕ್ಕೆ ಅನುಕೂಲ ಮಾಡಿಕೊಟ್ಟಿರುವ ಉದ್ಯೋಗಖಾತ್ರಿ ಯೋಜನೆಯನ್ನು ಮೋದಿ ಸರ್ಕಾರ ಮೊಟಕುಗೊಳಿಸಿದೆ ಎಂದು ಕಿಡಿಕಾರಿದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್‍ಬಾನು, ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ನಿಗಮ ಮಂಡಳಿಗಳ ಅಧ್ಯಕ್ಷರುಗಳಾದ ಕೆ. ಚೇತನ್‍ಗೌಡ, ಜಿ. ಪಲ್ಲವಿ, ಇಸ್ಮಾಯಿಲ್‍ಖಾನ್,  ಶ್ವೇತಾಬಂಡಿ ಸೇರಿದಂತೆ ಹಲವು ಮುಖಂಡರು ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ, ಪ್ರತಿಭಟನಾ ಭಾಷಣ ಮಾಡಿದರು.

ನರೇಗಾ ಯೋಜನೆಯಿಂದ ಮಹತ್ಮಾಗಾಂಧೀಜಿ ಹೆಸರು ಬಿಟ್ಟಿರುವುದು ದ್ವೇಷದ ರಾಜಕಾರಣವಾಗಿದೆ. ಕೇಂದ್ರ ಸರ್ಕಾರದ ಕೀಳುಮಟ್ಟದ ರಾಜಕಾರಣವಿದು. ಬಿಜೆಪಿಯವರಿಗೆ ಮೊದಲಿನಿಂದಲೂ ಗಾಂಧೀಜಿಯವರನ್ನು ಕಂಡರೆ ಆಗುವುದಿಲ್ಲ. ಆದ್ದರಿಂದ  ಆ ಹೆಸರನ್ನು ಕೈಬಿಟ್ಟು ವಿಬಿಜಿ ರಾಮ್-ಜಿ ಹೆಸರು ಇಟ್ಟಿದೆ. ಮತ್ತು ಈ ಹೆಸರು ಇಟ್ಟಿದ್ದನ್ನು ಬಿಜೆಪಿ ಸಮರ್ಥಿಸಿಕೊಳ್ಳುತ್ತಿದೆ. ಇದು ಸರಿಯಲ್ಲ ಮಹಾಪುರಷರ ಹೆಸರನ್ನು ತೆಗೆದು ಹಾಕುವುದು ಅವಮಾನಕರವಾದ ಸಂಗತಿ ಎಂದು ಕಾಂಗ್ರೆಸ್ ಮುಖಂಡರು ದೂರಿದರು.

ಯುಪಿಎ ಸರ್ಕಾರ ಇದ್ದಾಗ ಮಹಾತ್ಮಾಗಾಂಧಿ ಹೆಸರಲ್ಲಿ ಮನರೇಗಾ ಉದ್ಯೋಗಖಾತ್ರಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈಗ ಈ ಯೋಜನೆಯ ಸ್ವರೂಪವನ್ನೇ ಬದಲಾಯಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಇದರಿಂದ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತದೆ. ಕನಿಷ್ಠವೇತನ ರಕ್ಷಣೆಯಿಲ್ಲದೆ ಕಾರ್ಮಿಕರು ಸಂಕಷ್ಟಕ್ಕೆ ಗುರಿಯಾಗುತ್ತಾರೆ. ಕಾರ್ಮಿಕರ ಶೋಷಣೆಯಾಗುತ್ತದೆ. ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಮುಖವಾಗುತ್ತದೆ. ಪಂಚಾಯ್ತಿಗಳ ಅಧಿಕಾರವನ್ನು ಕಸಿದುಕೊಳ್ಳಲಾಗುತ್ತದೆ. ಗ್ರಾಮ ಪಂಚಾಯ್ತಿಗಳು ಕೇವಲ ಅನುಷ್ಠಾನಗೊಳಿಸುವ ಸಂಸ್ಥೆಗಳಾಗಿ ಮಾರ್ಪಡುತ್ತವೆ. ಇದರಿಂದ ಅಧಿಕಾರವೇ ಮೊಟಕುಗೊಳಿಸುತ್ತದೆ. ಇದು ವಲಸೆಗೂ ಕಾರಣವಾಗುತ್ತದೆ. ಗ್ರಾಮೀಣ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಾರೆ ಎಂದು ದೂರಿದರು.
ಕೇಂದ್ರ ಸರ್ಕಾರ ಕೇವಲ ಈ ಯೋಜನೆಯ ಹೆಸರನ್ನು ಬದಲಾಯಿಸುವುದು ಮಾತ್ರವಲ್ಲ, ಇಡೀ ಯೋಜನೆಯನ್ನೇ ಮುನ್ನಲೆಗೆ ತಂದು ಅದನ್ನು ಮರು ರೂಪಿಸುತ್ತೇವೆ ಎಂದು ನಾಟಕವಾಡುವ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ. ಸಂಸತ್‍ನಲ್ಲಿ ಸೂಕ್ತ ಚರ್ಚೆಯಾಗದೆ ರಾಜ್ಯಗಳ ಅಭಿಪ್ರಾಯ ಪಡೆಯದೇ ಈ ಬದಲಾವಣೆ ತರಲಾಗಿದೆ ಹಳ್ಳಿಯನ್ನು ದಿಲ್ಲಿಯಿಂದಲೇ ನಿಯಂತ್ರಣ ಮಾಡುವ ಹುನ್ನಾರವನ್ನು ಕೇಂದ್ರ ಸರ್ಕಾರ ನಡೆಸುತ್ತಿದ್ದು, ಗ್ರಾಮ ಸ್ವರಾಜ್ಯಕ್ಕೆ ಇದೊಂದು ಗದಾಪ್ರಹಾರ ಎಂದು ದೂರಿದರು.

ಈ ಯೋಜನೆಯನ್ನು ಅದರ ಮೂಲ ಸ್ವರೂಪದಲ್ಲಿಯೇ ಉಳಿಸಬೇಕು. ಗ್ರಾಮಗಳ ಸ್ವಯಂ ಆಡಳಿತ ಹಕ್ಕನ್ನು ಮರುಸ್ಥಾಪಿಸಬೇಕು. ನಮ್ಮದೇ ಯೋಜನೆ, ನಮ್ಮದೇ ಆಡಳಿತ ನಮ್ಮದೇ ಉದ್ಯೋಗ ಎನ್ನುವ ಮನರೇಗಾ ಯೋಜನೆ ಮರುಜಾರಿಯಾಗಬೇಕು ಎಂದು ಕಾಂಗ್ರೆಸ್ ಮುಖಂಡರುಗಳು ಒತ್ತಾಯಿಸಿದರು.

ಉಪವಾಸ ಸತ್ಯಾಗ್ರಹದಲ್ಲಿ ಪ್ರಮುಖರಾದ ಎಸ್.ಟಿ. ಹಾಲಪ್ಪ, ಹೆಚ್.ಸಿ. ಯೋಗೀಶ್, ಎಸ್.ಟಿ. ಚಂದ್ರಶೇಖರ್, ವೈ.ಹೆಚ್. ನಾಗರಾಜ್, ಜಿ.ಡಿ. ಮಂಜುನಾಥ್, ರಮೇಶ್ ಶಂಕರಘಟ್ಟ, ಕೆ. ರಂಗನಾಥ್, ಹರ್ಷಿತ್‍ಗೌಡ, ಹೆಚ್.ಪಿ. ಗಿರೀಶ್, ಶ್ರೀನಿವಾಸ್ ಕರಿಯಣ್ಣ, ಖಲೀಂಪಾಷಾ, ಶಿವಕುಮಾರ್, ಮಂಜುನಾಥ್ ಬಾಬು, ಹೆಚ್.ಎಂ. ಚಂದ್ರಶೇಖರಪ್ಪ, ಬಸವರಾಜ್, ಸೈಯದ್ ವಾಹಿದ್ ಅಡ್ಡು, ಕಲಗೋಡು ರತ್ನಾಕರ್, ಶಿ.ಜು. ಪಾಷಾ, ರವಿಕುಮಾರ್, ಎಸ್.ಪಿ. ಶೇಷಾದ್ರಿ, ಪುಷ್ಪಾಶಿವಕುಮಾರ್, ವಿಶ್ವನಾಥ್‍ಕಾಶಿ, ಅರ್ಚನಾ ನಿರಂಜನ್, ಸ್ಟೆಲ್ಲಾ ಮಾರ್ಟಿನ್, ಯಮುನಾ ರಂಗೇಗೌಡ, ನಾಜಿಮಾ, ನಿರಂಜನ್, ಮಧುಸೂದನ್, ವಿಜಯ್, ಚರಣ್, ಗಿರೀಶ್, ರವಿಕಟಿಕೆರೆ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಅಸಮರ್ಪಕ ಪಡಿತರ ವಿತರಣೆ | ನ್ಯಾಯಬೆಲೆ ಅಂಗಡಿಗಳ ಅಮಾನತಿಗೆ ಡಾ.ಹೆಚ್. ಕೃಷ್ಣ ಸೂಚನೆ

Next Post

ಇವರು ನನ್ನ ಬಾಸ್ | ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಯಾರಿಗೆ?

kalpa News

kalpa News

Next Post
ಇವರು ನನ್ನ ಬಾಸ್ | ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಯಾರಿಗೆ?

ಇವರು ನನ್ನ ಬಾಸ್ | ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಯಾರಿಗೆ?

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL