ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ ಆಗುತ್ತದೆಂದು ನಿರೀಕ್ಷೆ ಕೂಡ ಮಾಡಿರಲಿಲ್ಲ. ಆದರೆ ಕಾಂಗ್ರೆಸ್‌ನ ಸುಳ್ಳು ಆಶ್ವಾಸನೆಗಳನ್ನು ಜನರು ನಂಬಿ ಮೋಸ ಹೋಗಿದ್ದಾರೆ. ಮುಂದೆ ವಾಸ್ತವ ಸ್ಥಿತಿ ಅರಿವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ BSYadiyurappa ಹೇಳಿದರು.
ಕೇಂದ್ರ ಸರ್ಕಾರ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರದ ಪೆಸಿಟ್ ಕಾಲೇಜಿನಲ್ಲಿ ಜಿಲ್ಲಾ ಬಿಜೆಪಿಯಿಂದ ಆಯೋಜಿಸಿದ್ದ ಜನಸಭೆ-ಸಾರ್ವಜನಿಕ ಸಭೆ ಉದ್ಘಾಟಿಸಿ ಮಾತನಾಡಿದರು.

ಕೆಲವು ಕಾರಣಗಳಿಂದ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಪಕ್ಷಕ್ಕೆ ಹಿನ್ನಡೆ ಆಗಿರಬಹುದು. ಸೋತ ಮಾತ್ರಕ್ಕೆ ಧೃತಿಗೆಡುವ ಅಗತ್ಯವಿಲ್ಲ. ಸತತ ಪರಿಶ್ರಮದಿಂದ ಮೇಲೇಳಬೇಕಿದೆ. ಮತ್ತೊಮ್ಮೆ ಪಕ್ಷವನ್ನು ಸಂಘಟಿಸಬೇಕಿದೆ. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮ ವಹಿಸಬೇಕಿದೆ ಎಂದರು.

Also read: ಬ್ರಾಹ್ಮಣರ ವಿರುದ್ದ ಸಚಿವ ರಾಜಣ್ಣ ನೀಡಿದ ವಿವಾದಾತ್ಮಕ ಹೇಳಿಕೆಯೇನು?
ಪ್ರತಿ ವಿಧಾನಸಭಾ ಕ್ಷೇತ್ರಗಳಿಗೂ ಬರುತ್ತೇನೆ. ಸಮಯವನ್ನು ನೀವೇ ಹೇಳಿ, ದಿನ ನಾನು ಸೇರಿದಂತೆ ಪಕ್ಷದ ಮುಖಂಡರು ಒಟ್ಟಾಗಿ ಬಂದು ಚರ್ಚೆ ಮಾಡಿ ಪಕ್ಷ ಸಂಘಟನೆಗೆ ಬಲ ತುಂಬುವ ಕೆಲಸ ಮಾಡುತ್ತೇವೆ. ಅಭಿವೃದ್ಧಿ ಕಾರ್ಯಗಳ ಕಡೆ ಗಮನ ಕೊಡಬೇಕಿದೆ. ಆತ್ಮವಿಶ್ವಾಸದಿಂದ ಗಟ್ಟಿಯಾಗಿ ನಿಂತು ಆಡಳಿತ ಪಕ್ಷದ ಹುಳುಕನ್ನು ಪತ್ತೆ ಮಾಡಿ ಹೋರಾಟಕ್ಕೆ ಅಣಿಯಾಗಬೇಕಿದೆ. ಎಸ್ಸಿ-ಎಸ್ಟಿಗಳನ್ನು ಒಟ್ಟಾಗಿ ಕರೆದುಕೊಂಡು ಹೋಗಬೇಕಿದೆ ಎಂದು ತಿಳಿಸಿದರು.

ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಶಾಸಕರಾದ ಅರಗ ಜ್ಞಾನೇಂದ್ರ, ಬಿ.ವೈ. ವಿಜಯೇಂದ್ರ, ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಕೆ.ಬಿ. ಅಶೋಕ್ ನಾಯ್ಕ, ಪ್ರಮುಖರಾದ ಗಿರೀಶ್ ಪಟೇಲ್, ಎ.ಎನ್. ನಟರಾಜ್, ಎಸ್.ಟಿ. ಬಳಿಗಾರ್, ಡಾ. ರಾಜನಂದಿನಿ ಕಾಗೋಡು ಇತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post