No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಸುಲಿಗೆ ಮಾಡುತ್ತಿದೆ: ಅರಗ ಜ್ಞಾನೇಂದ್ರ

kalpa News by kalpa News
May 19, 2025
in ಶಿವಮೊಗ್ಗ
0
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಸುಲಿಗೆ ಮಾಡುತ್ತಿದೆ: ಅರಗ ಜ್ಞಾನೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕನ್ನಡಿಗರ ಬದುಕಿಗೆ ಶಾಪವಾದ ಕಾಂಗ್ರೆಸ್ ಸರ್ಕಾರ ನಾಳೆ ಎರಡು ವರ್ಷದ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದು ಯಾವುದೇ ಸಾಧನೆ ಮಾಡದೆ ಅಭಿವೃದ್ಧಿ ಶೂನ್ಯ ಸರ್ಕಾರ ನಗೆಪಾಟಲಿಗೆ ಈಡಾಗಿದೆ ಎಂದು ಶಾಸಕ, ಮಾಜಿ ಗೃಹ ಮಂತ್ರಿ ಅರಗ ಜ್ಞಾನೇಂದ್ರ #Araga Jnanendra ಹೇಳಿದ್ದಾರೆ.

ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಅಪಪ್ರಚಾರ ಮಾಡಿ, ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಸುಲಿಗೆ ಮಾಡುತ್ತಿದೆ. ಜನನ ಮರಣ ಪತ್ರ ಪಡೆಯಲೂ ಕೂಡಾ 50ರೂ.ನೀಡಬೇಕಾಗಿದೆ. ನೋಂದಣಿ ಶುಲ್ಕವನ್ನು ಹೆಚ್ಚಿಸಲಾಗಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಭಾಗ್ಯ ನೀಡಿ, ಪುರುಷರಿಗೆ ದುಪ್ಪಟ್ಟು ಶುಲ್ಕ ಹೆಚ್ಚಳ ಮಾಡಿದೆ. ಕಾಲೇಜು ಶುಲ್ಕ ಹೆಚ್ಚಿಸಿದೆ. ಹಾಲು, ನೀರು, ವಿದ್ಯುತ್, ಡೀಸೆಲ್ ಎಲ್ಲದ ದರಗಳನ್ನು ಎರಡು ಬಾರಿ ಹೆಚ್ಚಿಸಿ ಜನರ ಬದುಕಿನ ಮೇಲೆ ಬರೆ ಎಳೆದಿದೆ ಎಂದು ಟೀಕಿಸಿದರು.

https://kalpa.news/wp-content/uploads/2025/03/PES-Video.mp4

ಲಿಕ್ಕರ್ ಮೇಲೆ ಸತತವಾಗ ಬೆಲೆ ಏರಿಕೆ ಮಾಡುತ್ತಿದ್ದು ಹೆಂಡತಿಗೆ ಎರಡು ಸಾವಿರ ರೂ.ನೀಡಿ ಗಂಡನಿಂದ 4 ಸಾವಿರ ರೂ.ಯನ್ನು ಹೆಚ್ಚುವರಿಯಾಗಿ ಎಳೆದುಕೊಳ್ಳುತ್ತಿದೆ. ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದರು.

ಮೂಡಾ ಹಗರಣ, ವಾಲ್ಮೀಕಿ ಹಗರಣ ಪ.ಜಾ.ಪ.ಪಂ.ಗಳ ಹಣ ದುರ್ಬಳಕೆ, ರಾಜ್ಯಪಾಲರಿಗೆ ಅಪಮಾನ, ಕ್ಯಾಬಿನೆಟ್ ಸಚಿವರಿಂದಲೇ ಸ್ವತ: ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲೇ ಹೇಳಿಕೆ ನೀಡಿದ್ದರೂ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟರೂ ಈ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಹೇಳಿದರು.
4.8ಲಕ್ಷ ಕೋಟಿ ರೂ.ಬಜೆಟ್ ಮಂಡಿಸಿದ ಈ ಸರ್ಕಾರ ಕ್ಯಾಪಿಟಲ್ ಇನ್ವೆಸ್ಟ್ ಮೆಂಟಿಗೆ ಹಣ ಹೂಡಿಲ್ಲ. ಬಜೆಟ್ ನಲ್ಲಿ ಘೋಷಿಸಿದ ಯಾವ ಅಭಿವೃದ್ಧಿ ಕಾರ್ಯಗಳಿಗೂ ಹಣ ಬಿಡುಗಡೆಯಾಗಿಲ್ಲ. ಕೆಲಸ ಮಾಡಿದ ಗುತ್ತಿಗೆದಾರರಿಗೆ ಹಣ ಬಿಡುಗಡೆಯಾಗಿಲ್ಲ. ಪರ್ಸೆಂಟೇಜ್ ಇಲ್ಲದೆ ಯಾವ ಬಿಲ್ಲೂ ಪಾಸಾಗುತ್ತಿಲ್ಲ ಎಂದರು.

ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ. ಪೌಷ್ಟಿಕಾಂಶ ಖರೀದಿಯಲ್ಲಿ 75 ಕೋಟಿ ರೂ.ಹಗರಣ, ಮೆಸ್ಕಾಂ, ಬೆಸ್ಕಾಂ ಸ್ಮಾಟ್ ಮೀಟರ್ ಖರೀಧಿಯಲ್ಲಿ 15 ಸಾವಿರ ಕೋ.ರೂ.ಹಗರಣ. ಈ ಗ್ಗೆ ಸದನದಲ್ಲಿ ಗಮನ ಸೆಳೆದರೂ ಸರ್ಕಾರ ಉತ್ತರ ನೀಡಿಲ್ಲ ಎಂದು ತಿಳಿಸಿದರು.
ಎಸ್.ಎಸ್ಸಿ, ಎಸ್ಟಿಗಳಿಗೆ ಮೀಸಲಿಟ್ಟ 26 ಸಾವಿರ ಕೋಟಿ ರೂ.ಗಳನ್ನು ಬೇರೆ ಉದ್ದೇಶಕ್ಕೆ ಬಳಕೆ ಮಾಡಲಾಗಿದೆ. ಮುಸ್ಲಿಂ ಓಲೈಕೆ ರಾಜಕಾರಣ ಮಾಡುತ್ತ 250 ಉರ್ದು ಶಾಲೆಗಳಿಗೆ, ಮುಸ್ಲಿಂ ಹಾಸ್ಟೇಲ್ ಹಾಗೂ ಮದರಸಾಗಳಿಗೆ ಕೋಟ್ಯಂತರ ರೂ.ಹಣ ಬಿಡುಗಡೆ ಮಾಡಿ ಎಳೆ ವಯಸ್ಸಿನ ಮಕ್ಕಳಲ್ಲಿ ಮತೀಯ ವಿಷ ಬೀಜ ಬಿತ್ತುತ್ತಿದ್ದಾರೆ. ಕನ್ನಡಿಗರ ತೆರಿಗೆ ಹಣ ಉರ್ದು ಶಾಲೆಗಳಿಗೆ ಯಾಕೆ ಎಂದು ಪ್ರಶ್ನಿಸಿದರು.

ಬಾಣಂತಿಯರ ಸಾವು ಹೆಚ್ಚಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳಿಲ್ಲ. ವೈದ್ಯರ ನೇಮಕವಾಗಿಲ್ಲ. ಸುಳ್ಳು ಸಾಧನೆ ಹೇಳಲು ಪ್ರಚಾರಕ್ಕೆ ಕೋಟ್ಯಂತರ ರೂ.ಗಳನ್ನು ನೀಡುತ್ತಿದ್ದು ಖುರ್ಚಿಗಾಗಿ ಸ್ಪರ್ಧೆ ಏರ್ಪಟಿದೆ. ಜನರ ದಿಕ್ಕನ್ನು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಧರ್ಮದ ಆಧಾರದ ಮೇಲೆ ಶೇ.4ರಷ್ಟು ಮೀಸಲಾತಿ, ಹಿಂದೂ ದೇವಾಲಯಗಳ ಆಸ್ತಿ ವಕ್ಫ್ ಬೋರ್ಡ್ ಪಾಲು, ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಪಾಕಿಸ್ತಾನಿ ಧ್ವನಿಯಲ್ಲಿ ಮಾತನಾಡುತ್ತಾ ಇರುವ ಕಾಂಗ್ರೆಸ ನಾಯಕರು. ಪೋಲಿಸರ ಮೇಲೆ ಹಲ್ಲೆ ಮಾಡಿದವರ ವಿರುದ್ಧದ ಕೇಸ್ ಹಿಂಪಡೆಯುತ್ತಾರೆ. ಸ್ವತ: ಮುಖ್ಯ ಮಂತ್ರಿಗಳು ಐಪಿಎಸ್ ಅಧಿಕಾರಿಯ ಮೇಲೆ ಕೈ ಮಾಡುತ್ತಾರೆ. ಯುದ್ಧದ ಸಂದರ್ಭದಲ್ಲಿ ರಾಜ್ಯದ ಸ್ಲೀಪರ್ ಸೆಲ್ ಗಳನ್ನು ಹುಡುಕುವ ಪ್ರಯತ್ನ ಮಾಡಿಲ್ಲ. ಅವರ ಮಟ್ಟ ಹಾಕುವ ಪ್ರಯತ್ನ ಮಾಡಿಲ್ಲ. ಈ ಸರ್ಕಾರ ಆರ್ಥಿಕ ದಿವಾಳಿ ಅಂಚಿನಲ್ಲಿದ್ದು ಜನರ ಬದುಕನ್ನು ಹೈರಾಣ ಮಾಡಿದ್ದೇ ಕಾಂಗ್ರೆಸ್ನ ದೊಡ್ಡ ಸಾಧನೆಯಾಗಿದ್ದು, ಸಾಧನಾ ಸಮಾವೇಶ ಒಂದು ವಿಪರ್ಯಾಸ ಎಂದು ಲೇವಡಿ ಮಾಡಿದರು.

ದುಬಾರಿ ಜೀವನ ಅಭಿವೃದ್ಧಿ ಶೂನ್ಯ. ಇದುವೇ ಕಾಂಗ್ರೆಸ್ ಸರ್ಕಾರದ ಸಾಧನೆ. ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಎಂಬ ಭಿತ್ತಿ ಪತ್ರವನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್.ಅರುಣ್, ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಪ್ರಮುಖರಾದ ಎಸ್.ಎಸ್.ಜ್ಯೋತಿಪ್ರಕಾಶ್, ಹರಿಕೃಷ್ಣ, ಕೆ.ವಿ.ಅಣ್ಣಪ್ಪ, ಸಿ.ಎಚ್.ಮಾಲತೇಶ್, ಚಂದ್ರಶೇಖರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Araga JnanendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಅರಗ ಜ್ಞಾನೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮನಸೋಇಚ್ಛೆ ಒಡೆದು ಬಡಿದು ನುಂಗಲು ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ?

Next Post

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ |ಯಾವ ಪುರುಷಾರ್ಥಕ್ಕೆ ಸಮಾವೇಶ | ಸಿ.ಟಿ. ರವಿ ತರಾಟೆ

kalpa News

kalpa News

Next Post
ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ |ಯಾವ ಪುರುಷಾರ್ಥಕ್ಕೆ ಸಮಾವೇಶ | ಸಿ.ಟಿ. ರವಿ ತರಾಟೆ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ |ಯಾವ ಪುರುಷಾರ್ಥಕ್ಕೆ ಸಮಾವೇಶ | ಸಿ.ಟಿ. ರವಿ ತರಾಟೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL