ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ #Ranadeep Singh Surjewala ಅವರು ನಾಳೆ ನಗರಕ್ಕೆ ಆಗಮಿಸಲಿದ್ದು, ಪಕ್ಷದ ಹಲವು ಕಾರ್ಯಕ್ರಮ ಹಾಗೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಏಪ್ರಿಲ್ 19ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಸುರ್ಜೆವಾಲಾ ಅವರು ನಗರಕ್ಕೆ ಆಗಮಿಸಲಿದ್ದು, ಹಲವು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿರುವ ಗ್ಯಾರೆಂಟಿ ಹಬ್ಬವನ್ನು ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ಧೇಶಿಸಿ ಅವರು ಮಾತನಾಡಲಿದ್ದಾರೆ.
Also read: ಗಮನಿಸಿ! ಏಪ್ರಿಲ್ 20ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ನಂತರ ಸಚಿವರು ಶಾಸಕರು ಮಾಜಿ ಸಚಿವರು ಮಾಜಿ ಶಾಸಕರು ಹಾಗೂ ಪ್ರಮುಖರ ಪ್ರತ್ಯೇಕ ಸಭೆ ನಡೆಸಲಿದ್ದು ಚುನಾವಣಾ ಕಾರ್ಯತಂತ್ರದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕ ಜಿ.ಡಿ. ಮಂಜುನಾಥ್ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ಬೆನ್ನಲ್ಲೇ, ಸುರ್ಜೆವಾಲಾ ಅವರು ನಗರಕ್ಕೆ ಆಗಮಿಸುತ್ತಿರುವುದು ಪಕ್ಷದ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post