ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವ ಸಿಎಎ ತಿದ್ದುಪಡಿ ಕಾಯ್ದೆಯನ್ನು ಮುಸ್ಲಿಂ ರಾಷ್ಟçಭಕ್ತರು ಹಾಗೂ ಮುಖಂಡರು ಸ್ವಾಗತಿಸಿದ್ದರೆ, ನುಸುಳುಕೋರರ ಪರವಾಗಿರುವ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ K S Eshwarappa ಟೀಕಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ (CAA) ಬಗ್ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ ಬಗ್ಗೆ ಆಕ್ಷೇಪಿಸಿದ ಈಶ್ವರಪ್ಪ, 1947ರಲ್ಲಿ ದೇಶ ವಿಭಜನೆಯಾದಾಗ ಪಾಕಿಸ್ತಾನದಲ್ಲಿ ಶೇಕಡ 20ರಷ್ಟಿದ್ದ ಹಿಂದೂಗಳ ಸಂಖ್ಯೆ ಈಗ ಶೇಕಡ 1.9ರಷ್ಟು ಇದೆ. ಅದೇ ರೀತಿ ಆಫ್ಘಾನಿಸ್ತಾನ ಬಾಂಗ್ಲಾದೇಶದಲ್ಲಿಯೂ ಹಿಂದೂಗಳ ಸಂಖ್ಯೆ ಭಾರಿ ಕಡಿಮೆಯಾಗಿದೆ. ಇದಕ್ಕೆ ಅತ್ಯಾಚಾರ, ಮತಾಂತರ, ಕೊಲೆ ಕಾರಣವಿರಬಹುದು. ಈ ಬೆಳವಣಿಗೆಗೆ ಕಾಂಗ್ರೆಸ್ ಹೇಳುವುದೇನು ಎಂದು ಪ್ರಶ್ನಿಸಿದರು.

ಚುನಾವಣೆ ಸಂದರ್ಭದಲ್ಲಿ ಸಿಎಎ ಜಾರಿ ಬೇಕಿತ್ತಾ ಎಂದು ಸಿದ್ದರಾಮಯ್ಯ Siddaramaiah ಪ್ರಶ್ನಿಸಿದ್ದಾರೆ. ಅವರಿಗೆ ಚುನಾವಣೆ ಸಂದರ್ಭದಲ್ಲಿ ಜಾತಿ ಗಣತಿ ವರದಿ ಬೇಕಿತ್ತೆ ಎಂದು ಪ್ರಶ್ನಿಸುತ್ತೇನೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ 25 ಸ್ಥಾನಗಳನ್ನು ಗೆದ್ದಿತ್ತು. ಈಗ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಎಲ್ಲಾ 28 ಸ್ಥಾನಗಳಲ್ಲಿಯೂ ಜಯಗಳಿಸುತ್ತೇವೆ ಎಂದರು.

ಮೋದಿಯವರಿಗೆ ವೀಸಾ ಕೊಡಲು ನಿರಾಕರಿಸಿದ್ದ ದೇಶಗಳು ಇಂದು ರತ್ನಗಂಬಳಿ ಸ್ವಾಗತ ನೀಡುತ್ತಿವೆ. ದೇವೇಗೌಡರು ಬದಲಾಗಿದ್ದರಲ್ಲಿ ತಪ್ಪೇನಿದೆ? ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಶಾಸಕ ಎಸ್.ಎನ್. ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಅಣ್ಣಪ್ಪ, ಚಂದ್ರಶೇಖರ್, ಶ್ರೀನಾಗ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post