ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಎಎಸಿಸಿ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕ ಡಾ. ಸಿರಿವೆಲ್ಲ ಪ್ರಸಾದ್ Dr. Sririvella Prasad ಹೇಳಿದ್ದಾರೆ.
ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಚುನಾವಣೆಗೆ ಸಂಬಂಧಿಸಿದಂತೆ ಎಐಸಿಸಿ ಕಡೆಯಿಂದ ಶಿವಮೊಗ್ಗ ಜಿಲ್ಲೆಗೆ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಎಲ್ಲಾ 7 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮತ್ತು ಸಭೆಗಳನ್ನು ನಡೆಸಿzನೆ. ಟಿಕೆಟ್ ಆಕಾಂಕ್ಷಿಗಳು, ಪಕ್ಷದ ಪ್ರಮುಖರು ಹಾಗೂ ಖಾಸಗಿ ವ್ಯಕ್ತಿಗಳ ಜೊತೆಗೂ ಮಾತುಕತೆ ನಡೆಸಿದ್ದೇನೆ. ಈ ವೇಳೆ ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾದ ಅಲೆ ಇರುವುದು ಕಂಡುಬಂದಿದೆ ಎಂದು ತಿಳಿಸಿದರು.

ಶಿವಮೊಗ್ಗ-ಶಿಕಾರಿಪುರದಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ಖಚಿತ…
ಈ ಬಾರಿ ಜಿಲ್ಲೆಯಲ್ಲಿಯೂ ಆಡಳಿತ ವಿರೋಧಿ ಅಲೆ ಇದೆ. ಶಿವಮೊಗ್ಗ-ಶಿಕಾರಿಪುರದಲ್ಲಿಯೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಕಳೆದ ಬಾರಿಯೇ ಶಿಕಾರಿಪುರದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ವಿಜಯೇಂದ್ರ ಅವರು ಶಿಕಾರಿಪುರದಲ್ಲಿ ಇರುವುದನ್ನು ಜನರು ನೋಡಿಲ್ಲ. ಹಾಗಾಗಿ ಪಕ್ಷಕ್ಕೆ ಅನುಕೂಲವಾಗಿದೆ. ಫೆಬ್ರವರಿ ೨೦ರೊಳಗೆ ಅಭ್ಯರ್ಥಿಗಳ ಘೋಷಣೆ ಕೂಡ ಆಗಲಿದೆ.
ಹೆಚ್.ಎಸ್. ಸುಂದರೇಶ್, ಜಿಲ್ಲಾಧ್ಯಕ್ಷ

Also read: ಎಎಪಿ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆ. ಕಿರಣ್ ನೇಮಕ: ಮನೋಹರ ಗೌಡ
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಮುಖರಾದ ವೈ.ಹೆಚ್.ನಾಗರಾಜ್, ಡಾ.ಶ್ರೀನಿವಾಸ ಕರಿಯಣ್ಣ, ಸಿ.ಎಸ್.ಚಂದ್ರಭೂಪಾಲ್, ದೀಪಕ್ ಸಿಂಗ್, ಚಂದ್ರಶೇಖರ್ ಇದ್ದರು.










Discussion about this post