ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ KSEshwarappa ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರ ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿದಂತೆ 10 ಕೆಜಿ ಅಕ್ಕಿ ಕೊಡಬೇಕು. ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡಿತ್ತಿದೆ. ಇನ್ನೂ 10 ಕೆಜಿ ಅಕ್ಕಿ ಕೊಡುವುದು ಸರ್ಕಾರದ ಕರ್ತವ್ಯ. ನೀವು ಎಷ್ಟು ಅಕ್ಕಿ ಕೊಡ್ತೀರಾ ? ಎಲ್ಲಿಂದ ತರ್ತೀರಾ ನಿಮಗೆ ಬಿಟ್ಟಿದ್ದು. ನೀವು 20 ಕೆಜಿ ಅಕ್ಕಿ ಕೊಡ್ತೀವಿ ಅಂತಾ ಪ್ರಣಾಳಿಕೆಯಲ್ಲಿ ಹೇಳಿದ್ದರೆ ಅದನ್ನು ಪ್ರಧಾನಿ ಮೋದಿ ಸರ್ಕಾರ ಕೊಡಲಿಕ್ಕೆ ಆಗುತ್ತದಾ ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂಬ ಭಂಡತನದ ಮಾತುಗಳನ್ನು ಆಡುತ್ತಿದ್ದಾರೆ. ಇದು ರಾಜ್ಯದ ಬಡವರಿಗೆ ಮಾಡುತ್ತಿರುವ ಮೋಸ. ಮೋಸದ ಮುಖಾಂತರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೀರಾ? ಕಾಂಗ್ರಸ್ ನ ಈ ಮೋಸದತನ ರಾಜ್ಯದಲ್ಲಿ ಬಹಳ ದಿನ ನಡೆಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Also read: ಶಿವಮೊಗ್ಗ-ಭದ್ರಾವತಿಗೆ ಕಾಲಿಟ್ಟ ಮಳೆರಾಯ: ಒಂದೇ ಮಳೆಗೆ ಅವಾಂತರ ಆರಂಭ
ಮತಾಂತರ ಕಾಯ್ದೆ ವಿರುದ್ದ ವಿಧಾನ ಮಂಡಲದಲ್ಲಿ ಹೋರಾಟ ಮಾಡ್ತೀವಿ. ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇದೇ ರೀತಿ ಇಂದು ವಿರೋಧಿ ನೀತಿಯನ್ನು ಸರ್ಕಾರ ಅನುಸರಿಸಿದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಈ ಬಗ್ಗೆ ಶಾಸಕರಿಗೂ ಗೊಂದಲ, ಮಂತ್ರಿಗಳಿಗೂ ಗೊಂದಲ, ರಾಜ್ಯದ ಜನಕ್ಕೂ ಗೊಂದಲ. ಈ ಗೊಂದಲ ಇಟ್ಟುಕೊಳ್ಳಬೇಡಿ. ಸಿದ್ದರಾಮಯ್ಯ ಐದು ವರ್ಷ ಆಡಳಿತ ಮುಂದುವರಿಸಿದರೆ ನಮ್ಮ ಅಭ್ಯಂತರ ಇಲ್ಲ. ಜನರಿಗೆ ಉತ್ತಮ ಆಡಳಿತ ನೀಡಬೇಕು. ಚುನಾವಣಾ ಪೂರ್ವದಲ್ಲಿ ನೀಡಿದ ಅಷ್ಟು ಭರವಸೆಗಳನ್ನು ಯಾವುದೇ ಗೊಂದಲಕ್ಕೆ ಆಸ್ಪದ ಇಲ್ಲದಂತೆ ಈಡೇರಿಸಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Discussion about this post