Read - 2 minutes
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ Kannada Rajyothsava Award ಪತ್ರಿಕಾ ವಿತರಕರನ್ನು ಪರಿಗಣಿಸುವಂತೆ ಆಗ್ರಹಿಸಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಹಲವು ವರ್ಷಗಳಿಂದ ಇದನ್ನು ಸೇವೆಯಾಗಿ ಪರಿಗಣಿಸಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಕನ್ನಡ ಭಾಷೆ ಬೆಳವಣಿಗೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟುಕೊಂಡಿದ್ದಾರೆ. ಆದ್ದರಿಂದ ಶಿವಮೊಗ್ಗ ಜಿಲ್ಲಾಡಳಿತದಿಂದ ಇಂತವರನ್ನು ಗುರುತಿಸಿ ಕರ್ನಾಟಕ ಸರ್ಕಾರವು ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪತ್ರಿಕಾ ವಿತರಕರನ್ನು ಕೂಡ ಪರಿಗಣಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಎನ್. ಮಾಲತೇಶ್, ನಾಗಭೂಷಣ್, ರಾಮೋಜಿ, ಧನಂಜಯ, ಮುಕ್ತಿಯಾರ್ ಅಹ್ಮದ್, ರಾಜವರ್ಮ ಜೈನ್, ರಾಘವೇಂದ್ರ, ಮುಸ್ತಫಾ, ಕಿರಣ್ ಸೇರಿದಂತೆ ಹಲವರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post