No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂವಿಧಾನದ ದಾರಿಯೇ ಸರಿಯಾದ, ಸಮರ್ಥವಾದ ದಾರಿ: ನಿವೃತ್ತ ನ್ಯಾ. ಹೆಚ್.ಎನ್. ನಾಗಮೋಹನ್ ದಾಸ್

kalpa News by kalpa News
February 13, 2023
in ಶಿವಮೊಗ್ಗ
0
ಸಂವಿಧಾನದ ದಾರಿಯೇ ಸರಿಯಾದ, ಸಮರ್ಥವಾದ ದಾರಿ: ನಿವೃತ್ತ ನ್ಯಾ. ಹೆಚ್.ಎನ್. ನಾಗಮೋಹನ್ ದಾಸ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಸಂವಿಧಾನದ ದಾರಿಯೇ ಸರಿಯಾದ ಮತ್ತು ಸಮರ್ಥವಾದ ದಾರಿ ಎಂದು ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಹೆಚ್.ಎನ್. ನಾಗಮೋಹನ್ ದಾಸ್ ಹೇಳಿದರು.

ಅವರು ಇಂದು ಪ್ರೆಸ್ ಟ್ರಸ್ಟ್‌ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಇಂದು ಸಂವಿಧಾನವೇ ಸರಿಯಾದ ದಾರಿಯಾಗಿದೆ. ಸಂವಿಧಾನದ ಆಶಯಗಳು ಎಲ್ಲಾ ವರ್ಗದ ಎಲ್ಲಾ ಸ್ಥರದ ಜನರನ್ನು ತಲುಪಬೇಕಾಗಿದೆ. ನ್ಯಾಯಾಂಗ ಸೇರಿದಂತೆ ಶಾಸಕಾಂಗ, ಕಾರ್ಯಾಂಗಳು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಸಂವಿಧಾನವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಾಗಿದೆ. ಎಚ್ಚರಿಕೆಯಿಂದ ಉಳಿಸಿಕೊಳ್ಳಬೇಕಾಗಿದೆ ಎಂದರು.
ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೂ ತಲುಪಿಸುವ ನಿಟಿನಲ್ಲಿ ತಾವು ಸಂವಿಧಾನ ಓದು ಹೆಸರಿನಲ್ಲಿ ರಾಜ್ಯಾದ್ಯಂತ ಅಭಿಯಾನವನ್ನು ಆರಂಭಿಸಿದ್ದೇನೆ. ಈ ಅಭಿಯಾನ ನನಗೆ ಸಮಾಧಾನ ತಂದಿದೆ. ಕಾಲೇಜು ವಿದ್ಯಾರ್ಥಿಗಳಿಗೆಂದು ಆರಂಭವಾದ ಸಂವಿಧಾನ ಓದು ಇಂದು ವಿದ್ಯಾರ್ಥಿಗಳು ಸೇರಿದಂತೆ ಮಹಿಳೆಯರು, ಮಠಾಧೀಶರು, ಹೀಗೆ ಎಲ್ಲಾ ವರ್ಗದ ಜನರನ್ನು ತಲುಪುತ್ತಿದೆ. ಮತ್ತು ತಲುಪಬೇಕು, ಎಲ್ಲಾ ದಾರಿಗಳ ಮೂಲಕ ಮುಂದುವರಿಯುವುದೇ ಸಂವಿಧಾನ. ಸಂವಿಧಾನದ ದಾರಿಯೇ ಇಂದು ಸಮರ್ಥವಾದ ದಾರಿ ಎಂದರು.

ಸಮಾಜ ಬದಲಾಗುತ್ತಿದೆ. ಸಮಸ್ಯೆ ಮತ್ತು ಸವಾಲುಗಳು ಸಆಗುತ್ತಲೇ ಇವೆ. ಅನಕ್ಷರಸ್ತರು, ಬಡವರು, ನಿರುದ್ಯೋಗಿಗಳು ಹೆಚ್ಚುತ್ತಲೇ ಇರುತ್ತಾರೆ. ಜೊತೆಗೆ ಕೃಷಿ ಕ್ಷೇತ್ರ ಕೃಶವಾಗಿದೆ. ರೈತರು ಆತ್ಮಹತ್ಯೆಯ ದಾರಿ ತುಳಿದಿದ್ದಾರೆ. ಭಯೋತ್ಪಾದನೆ ಭ್ರಷ್ಟಾಚಾರ, ಕೋಮುವಾದ, ಸಾಂಸ್ಕೃತಿಕ ದಿವಾಳಿತನ ಮುಂದುವರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಸಂವಿಧಾನದ ಆಶಯಗಳು ಹೊಸ ಬೆಳಕನ್ನು ನೀಡುತ್ತವೆ ಎಂದರು.
ಸಂವಿಧಾನದ ತಿದ್ದುಪಡಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸಂವಿಧಾನವನ್ನು ಯಾವಾಗ, ಹೇಗೆ ಏಕೆ ತಿದ್ದುಪಡಿ ಮಾಡಬೆಕೆಂಬ ಅಂಶಗಳೂ ಇವೆ. ಅದರ ಮೂಲಭೂತ ಆಶಯಗಳಿಗೆ ಧಕ್ಕೆ ಆಗದಂತೆ ಸಂವಿಧಾನ ತಿದ್ದುಪಡಿ ಆಗಬೇಕು. ತಿದ್ದುಪಡಿಯನ್ನೇ ಮಾನದಂಡವಾಗಿಟ್ಟುಕೊಂಡು ಏನು ಬೇಕಾದರೂ ಮಾಡುವ ಹಾಗಿಲ್ಲ. ಸಂವಿಧಾನಕ್ಕೆ ತಿದ್ದುಪಡಿ ತಂದು ದೇಶವನ್ನು ಅಡವಿಡಲಾಗದು. ಸರ್ವಾಧಿಕಾರಿತನ ತರಲಾಗದು. ಮತಾಂಧತೆಯ ಕಾನೂನುಗಳನ್ನು ರೂಪಿಸಲಾಗದು. ಸಾಮಾಜಿಕ ಸಮಾನತೆಯನ್ನು ಅಳಿಸಲಾಗದು. ಮೂಲತತ್ವಗಳಿಗೆ ಅನುಗುಣವಾಗಿಯೇ ಸಂವಿಧಾನ ತಿದ್ದುಪಡಿಯಾಗಬೇಕು. ಆದರೆ ಹಾಗೆ ಆಗುತ್ತದೆಯೇ ಎಂಬುದು ಒಂದು ಪ್ರಶ್ನೆ ಎಂದರು.
Also read: ಅರಣ್ಯ ಇಲಾಖೆ ದೌರ್ಜನ್ಯ ಆರೋಪ ಸೂಕ್ತ ಕ್ರಮಕ್ಕೆ ಸಿರಿಯೂರು ಗ್ರಾಮದ ರೈತರ ಆಗ್ರಹ
ಮಾಧ್ಯಮ ಇಂದು ಪ್ರಬಲವಾಗಿದೆ. ಆದರೆ ನಿಜವಾದ ಮಾಧ್ಯಮ ಸೃಷ್ಟಿಯಾಗುತ್ತಿಲ್ಲ. ಮಾಲಿಕತ್ವದ ಹಂಗು ಇಲ್ಲಿ ಕಾಣಿಸತೊಡಗಿದೆ. ಗಂಭೀರವಾದ ಸವಾಲುಗಳಿಗೆ ಮಾಧ್ಯಮಗಳು ಉತ್ತರ ಕೊಡಲು ಹೆಣಗುತ್ತಿವೆ. ಮಾಲೀಕರ ಹಿಡಿತಲ್ಲಿರುವುದರಿಂದ ಜನಹಿತ ಕಾಪಾಡುವುದರಲ್ಲೂ ಕೆಲವು ಸಲ ಸೋಲು ಉಂಟಾಗುತ್ತದೆ. ಇಂತಹ ಸಂಕಷ್ಟಗಳನ್ನು ಎದುರಿಸಿಯೂ ಮಾಧ್ಯಮಗಳು ಸರ್ಕಾರದ ಅತಿರೇಕಗಳಿಗೆ ಬುದ್ಧಿ ಹೇಳಬೇಕಾಗುತ್ತದೆ. ಸರ್ಕಾರ ಮತ್ತು ಜನರ ನಡುವಿನ ಸೇತುವೆಯಾಗಬೇಕು. ಮುಗ್ಧ ಜನರ ತಬ್ಬಿಕೊಳ್ಳಬೇಕು. ಜನಸಾಮಾನ್ಯರ ಸಮಸ್ಯೆಗಳಿಗೆ ಉತ್ತರವಾಗಬೇಕು ಎಂದು ಕಿವಿಮಾತು ಹೇಳಿದರು.

ನ್ಯಾಯಾಂಗ ಬಗ್ಗೆಯೂ ಕೆಲವು ಅಪಸ್ವರಗಳು ಬರುತ್ತಿವೆಯಲ್ಲಾ ಎಂ ಪತ್ರಕರ್ತರ ಪ್ರಶ್ನೆಗೆ ಗಂಭೀರವಾಗಿ ಉತ್ತಿರಿಸಿದ ಅವರು, ಇದನ್ನು ಭಾಗಶಃ ಒಪ್ಪಿಕೊಳ್ಳುತ್ತೇನೆ. ಶಾಸಕಾಂಗ ಮತ್ತು ಕಾರ್ಯಾಂಗಗಳು ಈಗಾಗಲೇ ನಂಬಿಕೆಯನ್ನು ಕಳೆದುಕೊಂಡಿವೆ. ಉಳಿದಿರುವುದು ನ್ಯಾಯಾಂಗ. ಈ ನ್ಯಾಯಾಂಗ ಕೂಡ ತಪ್ಪಾಗಿ ನಡೆದುಕೊಂಡರೆ ಕಷ್ಟವಾಗುತ್ತದೆ. ಆದರೆ ನ್ಯಾಯಾಂಗಗಳು ಕೂಡ ತಮ್ಮ ತಪ್ಪುಗಳನ್ನು ತಿದ್ದಿಕೊಂಡ ಉದಾಹರಣೆಗಳಿವೆ. ಮುಖ್ಯವಾಗಿ ನ್ಯಾಯಮೂರ್ತಿಗಳಿಗೆ ನೈತಿಕತೆ ಮುಖ್ಯ ಎಂದರು.
ಮೀಸಲಾತಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶೈಕ್ಷಣಿಕವಾಗಿ ಸಾಮಾಜಿಕವಾಗಿ  ಹಿಂದುಳಿದವರಿಗೆ ಮೀಸಲಾತಿ ಕೊಡಬೇಕಾದುದು ನ್ಯಾಯವಾಗಿದೆ. ಆದರೆ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಎಂಬುದನ್ನು ಸಂವಿಧಾನದಲ್ಲಿ ಹೇಳಿಲ್ಲ. ಹಾಗಾಗಿಯೇ ಆರ್ಥೀಕವಾಗಿ ಹಿಂದುಳೀದವರಿಗೆ ಶೇ. 10ರಷ್ಟು ಮೀಸಲಾತಿ ನೀಡುವುದನ್ನು ನಾನು ಅಷ್ಟಾಗಿ ಒಪ್ಪುವುದಿಲ್ಲ ಆದರೆ ಸುಪ್ರೀಂ ಕೋರ್ಟ್ ಇದನ್ನು ಎತ್ತಿ ಹಿಡಿದಿದೆ. ಸುಪ್ರೀಂ ಕೋರ್ಟಿಗೆ ಇದನ್ನ ಪುನರ್ ಪರಿಶೀಲನೆ ಮಾಡುವಂತೆ ಅರ್ಜಿ ಹಾಕಲು ಅವಕಾಶವಿದೆ ಎಂದರು.

ನ್ಯಾಯಾಲಯದ ಕೇಸುಗಳು ವಿಳಂಬ ಆಗುತ್ತಿವೆ ಎಂಬ ಪ್ರಶ್ನಗೆ ಉತ್ತರಿಸಿದಿ ಅವರು, ನಿಜ. ಇದಕ್ಕೆ ಹಲವು ಕಾರಣಗಳಿವೆ. ಈಗ ಜನಸಂಖ್ಯೆ ಹೆಚ್ಚಿದೆ. ಜನರು ಬುದ್ಧಿವಂತರಾಗಿದ್ದಾರೆ. ತಮ್ಮ ಸಣ್ಣಪುಟ್ಟ ಸಮಸ್ಯೆಗಳಿಗೂ ಕೋರ್ಟ್ ಮೆಟ್ಟಿಲೇರುತ್ತಿದ್ದಾರೆ. ಅಗತ್ಯಕ್ಕೆ ತಕ್ಕಂತೆ ನ್ಯಾಯಾಧೀಶರುಗಳ ನೇಮಕ ಆಗಿಲ್ಲ. ಕೋರ್ಟ್ಗಳ ಸಂಖ್ಯೆಯೂ ಹೆಚ್ಚಿಲ್ಲ. ಸೌಲಭ್ಯಗಳೂ ಇಲ್ಲ. ಜೊತೆಗೆ ಬ್ರಿಟಿಷರ ಕಾಲದ ವ್ಯವಸ್ಥೆಯೇ ನಮ್ಮ ಮುಂದಿದೆ. ಸುಪ್ರೀಂ ಕೋರ್ಟ್ನಲ್ಲಿ ಪ್ರತಿ ವರ್ಷ ಸುಮಾರು 70 ಸಾವಿರ ಕೇಸ್ ಇತ್ಯರ್ಥವಾಗುತ್ತಿವೆ. ಹೈಕೋರ್ಟ್ ಮೂಲಕ ಸುಮಾರು 20 ಲಕ್ಷ ಕೇಸುಗಳು ವಿಲೇವಾರಿಯಾಗುತ್ತಿವೆ. ಸ್ಥಳೀಯ ಕೋರ್ಟುಗಳು ಒಂದು ಕೋಟಿಗೂ ಹೆಚ್ಚು ಕೇಸುಗಳನ್ನು ಬಗೆಹರಿಸುತ್ತದೆ. ಇಷ್ಟಾದರೂ 5ಕೋಟಿ ಕೇಸ್ ಬಾಕಿ ಇದೆ ಎಂದರು.

ವಕೀಲ ಶ್ರೀಪಾಲ್ ಮಾತನಾಡಿ, ನಾಗಮೋಹನ್ ದಾಸ್ ಅವರು 10 ವರ್ಷಗಳಲ್ಲಿ 40ಸಾವಿರ ತೀರ್ಪುನೀಡಿದ್ದಾರೆ. ಇಪ್ಪತ್ತೊಂದಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅವರ ಸಂವಿಧಾನ ಓದು ಪುಸ್ತಕ ನಾಲ್ಕು ಭಾಷೆಗಳಲ್ಲಿ ಪ್ರಕಟವಾಗಿದ್ದು, ಐದು ವರ್ಷಗಳಲ್ಲಿ 20 ಲಕ್ಷ ಪ್ರತಿಗಳು ಖರ್ಚಾಗಿವೆ. 1000ಕ್ಕೂ ಹೆಚ್ಚು ಸಂವಿಧಾನ ಓದಿನ ಕಾರ್ಯಕ್ರಮ ಮಾಡಿದ್ದಾರೆ. 6 ಆಯೋಗಗಳ ವರದಿ ನೀಡಿದ್ದಾರೆ ಎಂದರು.

ಪತ್ರಿಕಾ ಸಂವಾದದಲ್ಲಿ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಪ್ರಮುಖರಾದ ನಾಗರಾಜ ನೇರಿಗೆ, ಸಂತೋಷ್ ಕಾಚಿನಕಟ್ಟೆ, ರಾಜಶೇಖರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅರಣ್ಯ ಇಲಾಖೆ ದೌರ್ಜನ್ಯ ಆರೋಪ ಸೂಕ್ತ ಕ್ರಮಕ್ಕೆ ಸಿರಿಯೂರು ಗ್ರಾಮದ ರೈತರ ಆಗ್ರಹ

Next Post

ಅಂಬೆಗಾಲು ಕಿರುಚಿತ್ರ ಅವಾರ್ಡ್ ಸ್ಪರ್ಧೆ: “ಬಿಡುಗಡೆ” ಕಿರುಚಿತ್ರಕ್ಕೆ ಪ್ರಶಸ್ತಿ

kalpa News

kalpa News

Next Post
ಅಂಬೆಗಾಲು ಕಿರುಚಿತ್ರ ಅವಾರ್ಡ್ ಸ್ಪರ್ಧೆ: “ಬಿಡುಗಡೆ” ಕಿರುಚಿತ್ರಕ್ಕೆ ಪ್ರಶಸ್ತಿ

ಅಂಬೆಗಾಲು ಕಿರುಚಿತ್ರ ಅವಾರ್ಡ್ ಸ್ಪರ್ಧೆ: "ಬಿಡುಗಡೆ" ಕಿರುಚಿತ್ರಕ್ಕೆ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL