ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಮ್ಮ ದೇಶದ ಸಂವಿಧಾನ ಅತ್ಯಂತ ಮಹತ್ವಪೂರ್ಣವಾಗಿದ್ದು, ನಾವೆಲ್ಲರೂ ಅದನ್ನು ಗೌರವಿಸಬೇಕು ಎಂದು ಫಸ್ಟ್ ಗ್ರೇಡ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಹೆಚ್.ವಿ. ಅಶ್ವಿನಿ ಹೇಳಿದರು.
ನಗರದ ಜೈನ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವ #76th Republic Day ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಅವರು ಧ್ವಜಾರೋಹಣ ನೆರವೇರಿಸಿದರು. ಪ್ರಜೆಗಳ ಹಕ್ಕು ಮತ್ತು ಕರ್ತವ್ಯಗಳ ಕುರಿತು ಮಕ್ಕಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.
Also read: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವಿಶೇಷ ರೈಲಿನ ಮೇಲೆ ಕಲ್ಲು ಎಸೆತ | ನಡೆದಿದ್ದೇನು?
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿಯ ಹಾಡುಗಳು, ನೃತ್ಯಗಳು ಮತ್ತು ಭಾಷಣಗಳ ಮೂಲಕ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು. ನಂತರ ಸಿಸಿಎ ಮತ್ತು ಕ್ರೀಡಾ ವಿಭಾಗದಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ನಮ್ಮ ಶಾಲೆಯ ಪೋಷಕರಿಂದ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಪ್ರಿಯದರ್ಶಿನಿ, ಸೌಲಭ್ಯ ವ್ಯವಸ್ಥಾಪಕರು ವಿಜಯ್ ಕುಮಾರ್, ಶಿಕ್ಷಕರು. ವಿದ್ಯಾರ್ಥಿಗಳು ಆಡಳಿತ ಮತ್ತು ಆಡಳಿಕೇತರ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post