No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭ್ರಷ್ಟಾಚಾರ ಮುಕ್ತ ಆಡಳಿತದ ಮೂಲಕ ನವಕರ್ನಾಟಕ ನಿರ್ಮಾಣ: ಕಾಂಗ್ರೆಸ್ ಮುಖಂಡ ಸುರ್ಜೆವಾಲಾ ಆಶ್ವಾಸನೆ

kalpa News by kalpa News
March 10, 2023
in ಶಿವಮೊಗ್ಗ
0
ಭ್ರಷ್ಟಾಚಾರ ಮುಕ್ತ ಆಡಳಿತದ ಮೂಲಕ ನವಕರ್ನಾಟಕ ನಿರ್ಮಾಣ: ಕಾಂಗ್ರೆಸ್ ಮುಖಂಡ ಸುರ್ಜೆವಾಲಾ ಆಶ್ವಾಸನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜನರ ಹಣ ಜನರಿಗೇ ಸಲ್ಲಬೇಕು ಎಂಬುದು ಕಾಂಗ್ರೆಸ್ ಸಿದ್ಧಾಂತವಾಗಿದ್ದು, ಪ್ರತಿ ಮನೆಗೆ 200 ಯೂನಿಟ್‌ಉಚಿತ ವಿದ್ಯುತ್, ಪ್ರತಿ ಮನೆಯ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂ,.ನೇರವಾಗಿ ಬ್ಯಾಂಕ್ ಖಾತೆಗೆ ಮತ್ತು ರಾಜ್ಯದ 4ಕೋಟಿ ಜನರಿಗೆ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕಾರ್ಡ್ ನೀಡುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

ಅವರು ಇಂದುನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ ಕಾಂಗ್ರೆಸ್ ಪ್ರಮುಖರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

3.10 ಲಕ್ಷ ಕೋಟಿ ಬಜೆಟ್‌ನಲ್ಲಿ 40% ಎಂದರೆ ಸುಮಾರು 75 ಲಕ್ಷ ಕೋಟಿಯಷ್ಟು ದುಡ್ಡು ಬಿಜೆಪಿ ಭ್ರಷ್ಟಾಚಾರ ಮಾಡಿದೆ. ಆ ಹಣದಲ್ಲೇ ನಾವು ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್ ಸಭೆಯಲ್ಲೆ ರಾಜ್ಯದ ಎಲ್ಲಾ ಮನೆಗಳಿಗೂ ಉಚಿತ ವಿದ್ಯುತ್, ಪ್ರತಿ ಮನೆಯ ಗೃಹಿಣಿಗೆ ಮನೆ ಖರ್ಚಿಗೆ 2 ಸಾವಿರ ರೂ. ಹಾಗೂ ಅನ್ನಭಾಗ್ಯ ನೀಡುವ ಆದೇಶ ಮಾಡುತ್ತೇವೆ ಎಂದರು.

ಬಿಜೆಪಿಯ ಭ್ರಷ್ಟಾಚಾರ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೇಶದ ಎಲ್ಲಾ ಜನರು ಮಾತನಾಡುತ್ತಿದ್ದಾರೆ. 40% ಕಮಿಷನ್ ಬಗ್ಗೆ ಇಡೀ ದೇಶದ ಗಮನವನ್ನು ಕರ್ನಾಟಕ ಸೆಳೆದಿದೆ. ಆರೋಪ ಕಾಂಗ್ರೆಸ್ ಮಾಡುತ್ತಿಲ್ಲ. ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಆರೋಪಿಸಿದ್ದಾರೆ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಗುತ್ತಿಗೆದಾರ ಬೆಳಗಾವಿಯ ಸಂತೋಷ್ ಪಾಟೀಲ್ ತಾನು ಮಾಡಿದ ಕೆಲಸಕ್ಕೆ 40% ಕಮಿಷನ್ ನೀಡಲಾಗದೆ ಆತ್ಮಹತ್ಯೆ ಮಾಡಿಕೊಂಡ. ಆತನ ವೃದ್ಧ ತಂದೆ ಮತ್ತು ಪತ್ನಿ ಮಕ್ಕಳು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಇನ್ನೋರ್ವ ಗುತ್ತಿಗೆದಾರ ಬೆಂಗಳೂರು ಗ್ರಾಮಾಂತರದ ಟಿ.ಎನ್. ಪ್ರಸಾದ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜೇಂದ್ರ ಎಂಬ ವ್ಯಕ್ತಿ ಕೂಡ ಕಮಿಷನ್ ನೀಡಲಾಗದೆ ಸತ್ತಿದ್ದಾನೆ. ಬಿಜೆಪಿಗೆ ಎಷ್ಟು ಹಣ ಬೇಕು ಎಂದು ಹೇಳಲಿ. ಅವರ ಹಣದ ದಾಹವನ್ನು ಕಾಂಗ್ರೆಸ್ ತೀರಿಸುತ್ತದೆ. ಆದರೆ ಸತ್ತ ಗುತ್ತಿಗೆದಾರರನ್ನು ಅವರು ವಾಪಾಸು ಕೊಡಬಲ್ಲರೇ ಎಂದು ಅವರು ಪ್ರಶ್ನಿಸಿದರು.

ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಪಿಎಸ್‌ಐ ಹಗರಣದಲ್ಲಿ ಜೈಲುಪಾಲಾಗಿರುವುದು ದೇಶದಲ್ಲೇ ಮೊದಲು. ಇವರು ಯಾವ ಕ್ಷೇತ್ರವನ್ನೂ ಬಿಟ್ಟಿಲ್ಲ. ಸಹಕಾರಿ ಬ್ಯಾಂಕ್‌ಗಳ ನೇಮಕಾತಿ, ಪಿಎಸ್‌ಐ ನೇಮಕಾತಿ, ಇಂಜಿನಿಯರ್‌ಗಳ ನೇಮಕಾತಿ, ವರ್ಗಾವಣೆ, ಖಾಸಗಿ ಶಾಲೆಗಳಿಗೆ ಅನುದಾನ ಮಂಜೂರು ಮಾಡಲು ಕೂಡ ನೇರವಾಗಿ ಲಂಚ ಕೇಳಿದ್ದಾರೆ ಎಂದು ಅವರ ಸಂಘಟನೆಯ ಪ್ರಮುಖರೇ ಆರೋಪಿಸಿದ್ದಾರೆ. ಮಠ ಮಂದಿರಗಳಿಗೆ ಅನುದಾನ ನೀಡಲು ಕೂಡ ಕಮಿಷನ್ ಕೇಳಿದ್ದಾರೆ ಎಂದು ಸ್ವಾಮೀಜಿಗಳೇ ಆರೋಪಿಸಿದ್ದಾರೆ.

ಹಾಗಾಗಿ ಕರ್ನಾಟಕದ ಜನ ಮತ ಹಾಕುವ ಮುನ್ನ ಎಚ್ಚರ ವಹಿಸಿ. ಕೇವಲ ಆರು ತಿಂಗಳಲ್ಲಿ 8 ಬಾರಿ ಪ್ರಧಾನಿ ಬಂದು ಹೋಗಿದ್ದಾರೆ. ಟಾಟಾ ಮಾಡಿ ಹೋಗಿದ್ದು ಬಿಟ್ಟರೆ ಮುಗ್ಧ ಜನರಿಗೆ ಏನನ್ನೂ ಕೊಟ್ಟಿಲ್ಲ. ಕಾಂಗ್ರೆಸ್ ಕೊಟ್ಟ ಯೋಜನೆಗಳನ್ನು ತಮ್ಮದೆಂದು ಬಿಂಬಿಸುತ್ತಿದ್ದಾರೆ. ಹಕ್ಕುಪತ್ರ ನೀಡಿಲ್ಲ, ಮನೆ ನೀಡಿಲ್ಲ, ಉದ್ಯೋಗ ಸೃಷ್ಟಿ ಮಾಡಿಲ್ಲ. ಸರ್ಕಾರಿ ಆಸ್ತಿಯನ್ನು ಖಾಸಗಿಯವರಿಗೆ ಮಾರಿದ್ದಾರೆ. ಜಿಲ್ಲೆಯ ಎರಡು ಪ್ರಮುಖ ಕಾರ್ಖಾನೆಗಳನ್ನು ಮುಚ್ಚಿದ್ದಾರೆ ಸ್ವಾಮೀಜಿಗಳು ಮಾಡಿದ ಆರೋಪಕ್ಕೆ ಸಿಎಂ ಹಾಗೂ ಬಿಎಸ್ವೈ 6 ತಿಂಗಳಾದರೂ ಉತ್ತರಿಸಿಲ್ಲ.20 ರೂ. ಸೋಪಿನಲ್ಲಿ ಕೋಟ್ಯಂತರ ರೂ. ಲೂಟಿ ಮಾಡಿದ ಇವರು ಕರ್ನಾಟಕವನ್ನು ಬಿಡುತ್ತಾರೆಯೇ ಎಂದರು.

ಇಡೀ ಹಿಂದುಸ್ಥಾನದಲ್ಲಿ ಇವರ ಭ್ರಷ್ಟಾಚಾರ ಸಾರ್ವಜನಿಕರಿಗೆ ಗೊತ್ತಾಗಿದೆ. ಪೌರ ಕಾರ್ಮಿಕರ ನೇಮಕಾತಿಯಲ್ಲಿ ಕೂಡ ಭ್ರಷ್ಟಾಚಾರ ಮಾಡಿದ್ದಾರೆ. ಹಿಂಸೆಯ ರಾಜಕಾರಣ ಮಾಡಿ ಬೆದರಿಕೆ ಒಡ್ಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಜಗ್ಗಲ್ಲ. ಮಹಾತ್ಮಾ ಗಾಂಧಿ, ಇಂದಿರಾಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಗುಂಡಿಗೆ ಬಲಿಯಾದರು. ಆದರೆ ಕಾಂಗ್ರೆಸ್ ಸತ್ತಿಲ್ಲ. ದೇಶ ಜೀವಂತವಾಗಿದೆ. ಸಿದ್ದರಾಮಯ್ಯನವರಿಗೆ ಒಬ್ಬ ಸಚಿವ ಕೊಲೆ ಬೆದರಿಕೆ ಹಾಕುತ್ತಾನೆ. ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರನ್ನು ನಾನು ತಂದು ಬಿಜೆಪಿಯವರ ಮುಂದೆ ನಿಲ್ಲಿಸುತ್ತೇನೆ ತಾಕತ್ತಿದ್ದರೆ ಹೊಡೆದು ಹಾಕಲಿ ಎಂದರು.

ಹೆಣ್ಣು ಮಕ್ಕಳಿಗೆ ರೈತರಿಗೆ, ಯುವಕರಿಗೆ, ದಲಿತರಿಗೆ ಬಿಜೆಪಿ ನ್ಯಾಯ ಕೊಡುವುದಿಲ್ಲ. ಮೋದಿ ಬಂದುಹೋದ ಮೇಲೆ ಗ್ಯಾಸ್ ಬಲೆ 50ರೂ. ಹೆಚ್ಚಳವಾಯ್ತು. ಪಕೋಡ ಮಾಡುವ ವಾಣಿಜ್ಯ ಗ್ಯಾಸ್ ಬೆಲೆ 30 ರೂ. ಹೆಚ್ಚಳವಾಯ್ತು. ಹವಾಯಿ ಚಪ್ಪಲಿ ಹಾಕುವ ಬಡವ ವಿಮಾನದಲ್ಲಿ ಹಾರಾಡಬಹುದು ಎಂದು ಹೇಳಿ ಅವನ ಬೆವರಿನ ದುಡಿಮೆಗೆ ಕನ್ನ ಹಾಕಿದ ಮೋದಿ ಕರ್ನಾಟಕದ ಹಗರಣಗಳ ಬಗ್ಗೆ ಯಾವುದೇ ಚಕಾರ ಎತ್ತುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಮಾ.11ರಿಂದ ನಮ್ಮ ಗ್ಯಾರಂಟಿ ಕಾರ್ಡ್ ಅನ್ನು ರಾಜ್ಯದ ಎಲ್ಲರ ಮನೆಗೂ ತಲುಪಿಸುತ್ತೇವೆ. ಅದರ ಒಂದು ಭಾಗದಲ್ಲಿ ಅವರಿಂದ ನಂಬರ್ ಪಡೆದು ಇನ್ನರ್ಧ ಭಾಗವನ್ನು ಗ್ಯಾರಂಟಿಯಾಗಿ ನೀಡುತ್ತೇವೆ.ನಮ್ಮ ಸರ್ಕಾರ ಬಂದ ತಕ್ಷಣ ಈ ಮೂರೂ ಯೋಜನೆಗಳು ಜಾರಿಗೆ ಬರುತ್ತವೆ ಜನರ ಹಣವನ್ನೇ ಜನರಿಗೆ ನೀಡುತೇವೆ. ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಕರ್ನಾಟಕವನ್ನು ಉಳಿಸೋಣ. ನವಕರ್ನಾಟಕ ನಿರ್ಮಾಣ ಮಾಡೋಣ ಎಂದರು.

ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ, ಪ್ರಮುಖರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಕೆ.ಬಿ. ಪ್ರಸನ್ನಕುಮಾರ್, ಆರ್ ಪ್ರಸನ್ನಕುಮಾರ್, ಮಧು ಬಂಗಾರಪ್ಪ, ಎನ್. ರಮೇಶ್, ಆರ್‌ಎಂ. ಮಂಜುನಾಥ್ ಗೌಡ, ಹೆಚ್. ಎಂ. ಚಂದ್ರಶೇಖರಪ್ಪ ಮೊದಲಾದವರು ಮಾತನಾಡಿದರು. ಸುರ್ಜೆವಾಲಾ ಭಾಷಣವನ್ನು ಬಲ್ಕಿಷ್‌ಭಾನು ಭಾಷಾಂತರಗೊಳಿಸಿದರು

ಸಭೆಯಲ್ಲಿ ಹೆಚ್.ಸಿ. ಯೋಗೀಶ್, ಇಸ್ಮಾಯಿಲ್ ಖಾನ್, ಎಸ್.ಪಿ. ದಿನೇಶ್, ವೈ.ಹೆಚ್. ನಾಗರಾಜ್, ಪಲ್ಲವಿ, ಸತ್ಯನಾರಾಯಣರಾವ್, ರವಿಕುಮಾರ್, ಎಸ್.ಕೆ. ಮರಿಯಪ್ಪ, ಡಾ ಶ್ರೀನಿವಾಸ ಕರಿಯಣ್ಣ, ರಾಮೇಗೌಡ, ಬೇಳೂರು ಗೋಪಾಲಕೃಷ್ಣ, ಬಲದೇವಕೃಷ್ಣ, ಇಕ್ಕೇರಿ ರಮೇಶ್, ಹಾಗೂ ಎನ್‌ಎಸ್‌ಯುಐ ಹಾಗೂ ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಮೊಮ್ಮಗಳು ಅಮೃತಾ ಸಂತೋಷ್ ಭೇಟಿ

Next Post

ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಪ್ರತಿಕ್ರಿಯೆ ಏನು?

kalpa News

kalpa News

Next Post
ಸಿಬಿಐ, ಇಡಿಗಳು ಬಿಜೆಪಿ ಸರ್ಕಾರದ ಸೇಡು ತೀರಿಸಿಕೊಳ್ಳುವ ಸಂಸ್ಥೆಗಳಾಗಿವೆ: ಕಾಂಗ್ರೆಸ್ ಆಕ್ರೋಶ

ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಪ್ರತಿಕ್ರಿಯೆ ಏನು?

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL